Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 2ರಿಂದ ಕದ್ರಿ ಕ್ಷೇತ್ರದಲ್ಲಿ...

ಮೇ 2ರಿಂದ ಕದ್ರಿ ಕ್ಷೇತ್ರದಲ್ಲಿ ಮಹಾದಂಡರುದ್ರಾಭಿಷೇಕ

ವಾರ್ತಾಭಾರತಿವಾರ್ತಾಭಾರತಿ27 April 2019 6:09 PM IST
share

ಮಂಗಳೂರು, ಎ.27: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೇ2ರಿಂದ 11ರವರೆಗೆ ವೈಭವದ ಅಷೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ ಮತ್ತು ಮಹಾದಂಡರುದ್ರಾಭಿಷೇಕ, ಮಹಾರುದ್ರಯಾಗ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ. ಜನಾರ್ದನ ಶೆಟ್ಟಿ ತಿಳಿಸಿದರು.

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ 12ವರ್ಷಕ್ಕೊಮ್ಮೆ ಬ್ರಹ್ಮಕಲಶಾಭಿಷೇಕ, ಮಹಾದಂಡ ರುದ್ರಾಭಿಷೇಕ, ಮಹಾರುದ್ರಯಾಗ ಜರುಗಲ್ಪಡುತ್ತದೆ. ಈ ಬಾರಿ ಕದ್ರಿ ಮಠಾಧೀಶ ರಾಜಾ ಸಂಧ್ಯಾನಾಥ್ ಜೀ ಉಪಸ್ಥಿತಿಯಲ್ಲಿ, ದೇವಳದ ತಂತ್ರಿ ಬ್ರಹ್ಮಶ್ರೀ ವಿಠ್ಠಲದಾಸ್ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ ಎಂದರು.

ಬ್ರಹ್ಮಕಲಶೋತ್ಸವ ಅಂಗವಾಗಿ ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶಾಭಿಷೇಕ ಸಮಿತಿ ರಚಿಸಲಾಗಿದ್ದು, ಮೇ2ರಿಂದ 11ರವರೆಗೆ ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ನಡೆಯಲಿದೆ. ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಸುತ್ತುಪೌಳಿ ಪುನರ್ ನಿರ್ಮಾಣ ಕಾಮಗಾರಿ, ಶನಿಪೂಜೆ, ಸತ್ಯನಾರಾಯಣ ಪೂಜಾ ಹಾಲ್, ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಗ್ರಾನೈಟ್ ಹಾಸುವ ಕಾಮಗಾರಿ, ದೇವಾಲಯದ ಎದುರು ಭಾಗದ ಮಂಟಪ ನಿರ್ಮಾಣ ಮಾಡಲಾಗಿದೆ ಎಂದರು.

ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಮಾತನಾಡಿ, ಕದ್ರಿ ದೇವಸ್ಥಾನದಲ್ಲಿ ಧ್ವಜಾರೋಹಣವಾಗಿ ಜಾತ್ರೆಯ ಜತೆ ಬ್ರಹ್ಮಕಲಶೋತ್ಸವ ನಡೆಯುವುದು ವಿಶೇಷ. ಈ ಹಿನ್ನೆಲೆಯಲ್ಲಿ ಮೇ2ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದೆ. ಕ್ಷೇತ್ರದ ಸಂಪ್ರದಾಯದಂತೆ ಸಂಜೆ 6.00ಗಂಟೆಗೆ ಧ್ವಜಾರೋಹಣ ನಡೆದು ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದೆ. ಒಟ್ಟು 9 ದಿನಗಳ ಕಾಲ ಬೆಳಗ್ಗೆ ನಾನಾ ಧಾರ್ಮಿಕ ಹಾಗೂ ಸಂಜೆ 4ರಿಂದ ಧರ್ಮಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕದ್ರಿ ಜೋಗಿ ಮಠದ ರಾಜಾ ನಿರ್ಮಲನಾಥ್, ಸ್ವಾಗತ ಸಮಿತಿ ಸಂಚಾಲಕ ಪ್ರದೀಪ್ ಕುಮಾರ್ ಕಲ್ಕೂರ, ಹರಿನಾಥ್ ಜೋಗಿ, ಸುಧಾಕರ ರಾವ್ ಪೇಜಾವರ, ನಾನಾ ಸಮಿತಿ ಪ್ರಮುಖರಾದ ದಿನೇಶ್ ದೇವಾಡಿಗ, ಸುರೇಶ್ ಕುಮಾರ್, ಚಂದ್ರಕಲಾ, ಪುಷ್ಪಲತಾ, ಸುಂದರ ಶೆಟ್ಟಿ, ಗಣೇಶ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಅಶೋಕ್, ರೂಪಾ ಬಂಗೇರ, ನಿವೇದಿತಾ ಶೆಟ್ಟಿ, ಅರುಣ್ ಕುಮಾರ್, ರಂಜನ್ ಕುಮಾರ್, ಗೋಕುಲ್ ಕದ್ರಿ ಉಪಸ್ಥಿತರಿದ್ದರು.

ಮಹಾದಂಡರುದ್ರಾಭಿಷೇಕದ ವಿಶೇಷ
ದೇವಸ್ಥಾನದಲ್ಲಿರುವ ಲಿಂಗಸ್ವರೂಪಿ ಮಂಜುನಾಥ ದೇವರಿಗೆ ಸಮೀಪದ ಗೋಮುಖ ತೀರ್ಥದಿಂದ ನೇರವಾಗಿ ಮಹಾದಂಡದ ಮೂಲಕ ರುದ್ರಾಭಿಷೇಕ ನೆರವೇರಿಸುವುದು ಇಲ್ಲಿನ ವಿಶೇಷ. ಸುಮಾರು 121 ಮಂದಿ ವೈದಿಕರು ಶತರುದ್ರಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ. 11 ಕುಂಡಗಳಲ್ಲಿ ಹೋಮ ನಡೆಯಲಿದೆ. ಅಡಕೆ ಮರದ ಶಲಾಕೆಯನ್ನು ದಂಡವಾಗಿ ಪರಿವರ್ತಿಸಿ ಅದರ ಮೂಲಕ ಬರುವ ಗೋಮುಖ ತೀರ್ಥವನ್ನು ಅಭಿಷೇಕಕ್ಕೆ ಬಳಸಲಾಗುತ್ತದೆ. ಈ ಸಂದರ್ಭ ಜಪ, ಅಭಿಷೇಕ ಹಾಗೂ ಹೋಮ ನಡೆಯಲಿದೆ. ಇದಕ್ಕೆ ಮಹಾದಂಡ ರುದ್ರಾಭಿಷೇಕ ಎಂದು ಎಂದು ದೇರೆಬೈಲು ವಿಠಲದಾಸ ತಂತ್ರಿ ಹೇಳಿದರು.

ಮೇ 3ರಂದು ಬೃಹತ್ ಹೊರೆಕಾಣಿಕೆ
ಕದ್ರಿ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಶನಿವಾರ ಶರವು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಹೊರೆಕಾಣಿಕೆ ಕಚೇರಿಯನ್ನು ತೆರೆಯಲಾಗಿದ್ದು ನಾನಾ ಕಡೆಗಳಿಂದ ಅಲ್ಲಿ ಹೊರೆಕಾಣಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಮೇ 3ರಂದು ಸಂಜೆ 3 ಗಂಟೆಗೆ ನೆಹರೂ ಮೈದಾನದಿಂದ ಕದ್ರಿ ದೇವಸ್ಥಾನಕ್ಕೆ ಬಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹಸಿರು ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ಗಣೇಶ್ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X