Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 11ನೇ ಪಂಚೇನ್ ಲಾಮಾ ಬಿಡುಗಡೆಗೆ ಒತ್ತಾಯ:...

11ನೇ ಪಂಚೇನ್ ಲಾಮಾ ಬಿಡುಗಡೆಗೆ ಒತ್ತಾಯ: ಮಂಡ್ಯದಿಂದ ಬೆಂಗಳೂರು ಕಡೆಗೆ ಸಾಗಿದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ27 April 2019 7:23 PM IST
share
11ನೇ ಪಂಚೇನ್ ಲಾಮಾ ಬಿಡುಗಡೆಗೆ ಒತ್ತಾಯ: ಮಂಡ್ಯದಿಂದ ಬೆಂಗಳೂರು ಕಡೆಗೆ ಸಾಗಿದ ಪಾದಯಾತ್ರೆ

ಮಂಡ್ಯ, ಎ.27: ಚೀನಾ ಸರಕಾರ ವಶಕ್ಕೆ ಪಡೆದಿರುವ ಟಿಬೆಟ್‍ನ ಧಾರ್ಮಿಕ ಮುಖಂಡ 11ನೇ ಪಂಚೆನ್ ಲಾಮಾ ಬಿಡುಗಡೆಗೆ ಒತ್ತಾಯಿಸಿ ಇಂಡೋ-ಟಿಬೆಟಿನ್ ಸಂಘಟನೆಯ ಮಹಿಳಾ ಘಟಕ ಮೈಸೂರಿನಿಂದ ಬೆಂಗಳೂರಿಗೆ ನಡೆಸುತ್ತಿರುವ ಪಾದಯಾತ್ರೆ ಶನಿವಾರ ನಗರದಿಂದ ಬೆಂಗಳೂರು ಕಡೆಗೆ ಸಾಗಿತು.

ಮೇ 2ರಂದು ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ಶುಕ್ರವಾರ ಮೈಸೂರಿನಿಂದ ನಗರಕ್ಕೆ ಆಗಮಿಸಿದ ಸಂಘಟನೆಯ 100ಕ್ಕೂ ಹೆಚ್ಚು ಸದಸ್ಯರು ವಾಸ್ತವ್ಯ ಹೂಡಿದ್ದು, ಶನಿವಾರ ತಮ್ಮ ಯಾತ್ರೆ ಮುಂದುವರಿಸಿದರು.

1995ರಲ್ಲಿ ಟಿಬೆಟಿನ ಧರ್ಮಗುರು ದಲೈಲಾಮಾ ಅವರು ಟಿಬೆಟ್‍ನ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ 11ನೇ ಪಂಚೆನ್ ಲಾಮಾ ಸ್ಥಾನಕ್ಕೆ ಗೆಧೆಮ್ ಚೊಯ್ಕಿ ನ್ಯಾಮಾ ಅವರನ್ನು ಗುರುತಿಸಿದ ಕೂಡಲೇ ಚೀನಾ ದೇಶ ತಮ್ಮ ವಶಕ್ಕೆ ಪಡೆಯಿತು. ಚಂದ್ರಲ್ ರಿನ್ಪೋಚೆ ಹಾಗೂ ಇತರರನ್ನು ದಲೈಲಾಮಾ ಅವರಿಗೆ ಮಾಹಿತಿ ನೀಡಿದ ಕಾರಣಕ್ಕಾಗಿ ಬಂಧಿಸಿ ಶಿಕ್ಷಿಸಿದರು ಎಂದು ಪಾದಯಾತ್ರಿಗಳು ಆರೋಪಿಸಿದರು.

ಪಂಚೆನ್ ಲಾಮಾ ಅವರನ್ನು ಬಂಧಿಸಿದಾಗ ಅವರಿಗೆ ಕೇವಲ 6 ವರ್ಷ ವಯಸ್ಸಾಗಿತ್ತು. ಈಗ 24 ವರ್ಷಗಳಾಗಿವೆ. ಆದರೆ, ಅವರ ಬಗ್ಗೆ ಯಾವುದೇ ಮಾಹಿತಿಯನ್ನು ಚೀನಾ ನೀಡುತ್ತಿಲ್ಲ. ಆದ್ದರಿಂದ ಕೂಡಲೇ ಚೀನಾ ದೇಶವು ಪಂಚೆನ್ ಲಾಮಾ ಅವರು ಇರುವಿಕೆ, ವಾಸದ ಸ್ಥಳದ ಮಾಹಿತಿ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಟಿಬೆಟ್‍ನ ಧಾರ್ಮಿಕ ಪ್ರಭಾವವನ್ನು ಕುಗ್ಗಿಸುವ ಹುನ್ನಾರದಿಂದ ಚೀನಾ ದೇಶವು ಪಂಚೆನ್ ಲಾಮಾ ಅವರನ್ನು ಬಂಧಿಸಿ ಅವರ ಜಾಗಕ್ಕೆ ಚೀನಿಯರ ಪರವಾಗಿರುವ ವ್ಯಕ್ತಿಯನ್ನು ಮುಂದಿನ ಟಿಬೆಟ್ ಬೌದ್ಧ ಮುಖಂಡನನ್ನಾಗಿ ನೇಮಿಸುವ ಉದ್ದೇಶ ಹೊಂದಿದೆ ಎಂದು ಅವರು ದೂರಿದರು.
ಇಂಡೋ-ಟಿಬೆಟಿನ್‍ನ ಸಂಘಟನೆಯ ಮಹಿಳಾ ಘಟಕದ ಕೇಂದ್ರೀಯ ಸದಸ್ಯೆ ತೇಂಜಿನ್ ಡೋಲ್ಮಾ ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X