Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಬ್ಬಾವಿನ 25 ಮೊಟ್ಟೆ ರಕ್ಷಿಸಿದ...

ಹೆಬ್ಬಾವಿನ 25 ಮೊಟ್ಟೆ ರಕ್ಷಿಸಿದ ಮಂಗಳೂರಿನ ತೌಸೀಫ್

ವಾರ್ತಾಭಾರತಿವಾರ್ತಾಭಾರತಿ28 April 2019 8:03 PM IST
share
ಹೆಬ್ಬಾವಿನ 25 ಮೊಟ್ಟೆ ರಕ್ಷಿಸಿದ ಮಂಗಳೂರಿನ ತೌಸೀಫ್

ಮಂಗಳೂರು, ಎ.28: ಕುಳಾಯಿಯ ಕೋಡಿಕೆರೆಯಲ್ಲಿದ್ದ 25 ಹೆಬ್ಬಾವಿನ ಮೊಟ್ಟೆಗಳನ್ನು ಯುವಕ ತೌಸಿಫ್ ಅಹ್ಮದ್ ಶನಿವಾರ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

‘ಕೋಡಿಕೆರೆಯ ರೈಲುಹಳಿ ಪಕ್ಕದಲ್ಲಿ ರೈಲ್ವೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಜೆಸಿಬಿಯಿಂದ ಕಲ್ಲನ್ನು ಸರಿಸುವಾಗ ಹೆಬ್ಬಾವು ಓಡಿ ಹೋಗಿದೆ. ಅದೇ ಜಾಗದಲ್ಲಿ ಹೆಬ್ಬಾವಿನ 25 ಮೊಟ್ಟೆಗಳನ್ನು ನೋಡಿ ರೈಲ್ವೆ ಕಾರ್ಮಿಕರು ದಿಗ್ಭ್ರಮೆಗೊಂಡಿದ್ದಾರೆ. ಬಳಿಕ ಮೊಟ್ಟೆಗಳನ್ನು ಕಾರ್ಮಿಕರು ಬಿಸಾಡಿ ಪ್ರಮಾದ ಎಸಗಿದ್ದಾರೆ. ರೈಲುಹಳಿ ಪಕ್ಕದ ಮಹಿಳೆಯರು ನನಗೆ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ತೆರಳಿ ಹೆಬ್ಬಾವಿನ ಮೊಟ್ಟೆ ರಕ್ಷಿಸಿದೆ’ ಎಂದು ತೌಸಿಫ್ ಅಹ್ಮದ್ ತಿಳಿಸಿದ್ದಾರೆ.

‘25 ಮೊಟ್ಟೆಗಳ ಪೈಕಿ ಒಂದು ಮೊಟ್ಟೆ ಸಂಪೂರ್ಣ ಹಾನಿಯಾಗಿದ್ದರೆ ಮತ್ತೊಂದು ಮೊಟ್ಟೆ ಭಾಗಶಃ ಹಾನಿಯಾಗಿತ್ತು. ಉಳಿದ 23 ಮೊಟ್ಟೆಗಳು ಸಹಜಸ್ಥಿತಿಯಲ್ಲಿದ್ದವು. ಅವುಗಳನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಸಂಗ್ರಹಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದೆ’ ಎಂದು ಅವರು ಹೇಳಿದರು.

‘ಹೆಬ್ಬಾವುಗಳು ಸಾಮಾನ್ಯವಾಗಿ ಎರಡು ತಿಂಗಳುಗಳ ಕಾಲ ಮೊಟ್ಟೆಗಳಿಗೆ ಕಾವು ಕೊಟ್ಟು ಮರಿಗಳನ್ನಾಗಿಸುತ್ತವೆ. ಇಲ್ಲಿಯೂ ಮೊಟ್ಟೆಗಳು ಸಾಧಾರಣವಾಗಿ ಇದೇ ವಾರದಲ್ಲಿ ಒಡೆದು ಮರಿಗಳಾಗುವ ಸಾಧ್ಯತೆಯಿದೆ. ಮೊಟ್ಟೆಗಳನ್ನು ಬಾಕ್ಸ್‌ನಲ್ಲಿ ಕೃತಕ ಬೆಳಕಿನ ಸಹಾಯದಿಂದ ಮರಿಗಳನ್ನಾಗಿಸಲಾಗುತ್ತದೆ. ಮೊಟ್ಟೆಗಳು ತೆರೆದ ವಾತಾರಣದಲ್ಲಿದ್ದರೆ ಮೊಟ್ಟೆಯೊಳಗಿನ ಭ್ರೂಣ ಸತ್ತು ಹೋಗುವ ಸಾಧ್ಯತೆ ಇರುತ್ತದೆ ಎಂದರು.

ಹೆಬ್ಬಾವಿನ ಮೊಟ್ಟೆಗಳನ್ನು ತೌಸಿಫ್ ಅಹ್ಮದ್ ಎಂಬವರು ರಕ್ಷಿಸಿದ್ದು, ಅವುಗಳನ್ನು ಪಿಲುಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಲಾಗಿದೆ. ವಾರದಲ್ಲೇ ಮೊಟ್ಟೆಗಳು ಒಡೆದು ಮರಿಗಳಾಗುವ ಸಾಧ್ಯತೆಯಿದೆ.
- ಶ್ರೀಧರ್,ಮಂಗಳೂರು ವಲಯ ಅರಣ್ಯಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X