Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಮುಂದಿನ 3 ದಿನ ಬಿಸಿಗಾಳಿ:...

ರಾಜ್ಯದಲ್ಲಿ ಮುಂದಿನ 3 ದಿನ ಬಿಸಿಗಾಳಿ: ಕೆಎಸ್‌ಎನ್‌ಡಿಎಂಸಿ

ವಾರ್ತಾಭಾರತಿವಾರ್ತಾಭಾರತಿ28 April 2019 10:08 PM IST
share

ಬೆಂಗಳೂರು, ಎ.28: ಉತ್ತರ ಭಾರತ ಸೇರಿ ರಾಯಲಸೀಮಾ ಪ್ರದೇಶದಲ್ಲಿ ಬಿಸಿಲಿನ ತಾಪ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. 

ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಸೇರಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸರಾಸರಿ 43 ರಿಂದ 44 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಎ.30ರವರೆಗೆ ಬಿಸಿಗಾಳಿ ಬೀಸಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್ ಗವಾಸ್ಕರ್ ಮಾಹಿತಿ ನೀಡಿದ್ದಾರೆ. ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದಂತೆ ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಾಗಲಿದೆ. ಅದರಂತೆ ಗರಿಷ್ಠ ಉಷ್ಣಾಂಶದ ಪ್ರಮಾಣ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದೆ. ಹೀಗಾಗಿ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಗಾಣ, ಆಂಧ್ರ ಸೇರಿದಂತೆ ಉತ್ತರ ಭಾರತ ಹಾಗೂ ರಾಯಲಸೀಮಾ ಪ್ರದೇಶದ ರಾಜ್ಯಗಳಲ್ಲಿ ಉಷ್ಣಾಂಶದ ಪ್ರಮಾಣ 45 ಡಿಗ್ರಿ ಸೆಲ್ಸಿಯಸ್ ದಾಟಿದೆ. ದೇಶಾದ್ಯಂತ ಬಿಸಿಗಾಳಿ ಪ್ರಭಾವ ಹೆಚ್ಚಾಗಿದೆ ಎಂದು ವಿವರಿಸಿದರು.

ಬಿಸಿಗಾಳಿ ಎಂದರೆ ಚಂಡಮಾರುತದ ಮಾದರಿಯಲ್ಲಿ ವೇಗವಾಗಿ ಬೀಸುವುದಿಲ್ಲ. ಬೀಸುವ ಗಾಳಿಯಲ್ಲಿ ಉಷ್ಣಾಂಶ ಹೆಚ್ಚಿದ್ದು, ತೀವ್ರ ಸೆಖೆಯ ಅನುಭವವಾಗಲಿದೆ. ಹೀಗಾಗಿ, ವಯೋವೃದ್ಧರು, ಮಕ್ಕಳು ಹಗಲಿನ ವೇಳೆಯಲ್ಲಿ ಹೊರಗೆ ಸುತ್ತಾಡುವುದನ್ನು ನಿಯಂತ್ರಿಸಿದರೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಹೆಚ್ಚಿನ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಮತ್ತು ನೀರು ಕುಡಿಯುವುದು ಉತ್ತಮ ಎಂದು ಸುನೀಲ್ ಸಲಹೆ ನೀಡಿದ್ದಾರೆ.

ತಿಂಗಳಾಂತ್ಯಕ್ಕೆ ಬಿಸಿಗಾಳಿ ಕಡಿಮೆ ಸಾಧ್ಯತೆ: ಹಿಂದೂ ಮಹಾಸಾಗರ ಮತ್ತು ಆಗ್ನೇಯ ಬಂಗಾಳ ಕೊಲ್ಲಿ ಪಕ್ಕದಲ್ಲಿರುವ ಕಡಿಮೆ ಒತ್ತಡ ಪ್ರದೇಶದಲ್ಲಿ ಫನಿ ಚಂಡಮಾರುತ ಶಕ್ತಿ ಗಳಿಸಿದೆ. ಇದರ ಪ್ರಭಾವದಿಂದ ಎ29 ಮತ್ತು 30 ರಂದು ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗದಲ್ಲಿ ಎ.30 ರಿಂದ ಸ್ವಲ್ಪ ಪ್ರಮಾಣದ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಆಗುವ ಸಾಧ್ಯತೆ ಇದರಿಂದ ಬಿಸಿಗಾಳಿಯ ಪ್ರಮಾಣ ಕಡಿಮೆ ಆಗುವ ಸಾಧ್ಯತೆಗಳು ಇವೆ ಎಂದು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X