Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಶಸ್ತಿ ನಿರೀಕ್ಷೆಯಲ್ಲಿ ಸೈನಾ...

ಪ್ರಶಸ್ತಿ ನಿರೀಕ್ಷೆಯಲ್ಲಿ ಸೈನಾ ನೆಹ್ವಾಲ್

ಇಂದಿನಿಂದ ನ್ಯೂಝಿಲ್ಯಾಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ29 April 2019 11:46 PM IST
share
ಪ್ರಶಸ್ತಿ ನಿರೀಕ್ಷೆಯಲ್ಲಿ ಸೈನಾ ನೆಹ್ವಾಲ್

ಆಕ್ಲೆಂಡ್, ಎ.29: ಇತ್ತೀಚೆಗೆ ಕೊನೆಗೊಂಡ ಏಶ್ಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿನ ಕ್ವಾರ್ಟರ್ ಫೈನಲ್ ಸೋಲಿನ ನಿರಾಸೆಯನ್ನು ಮರೆತು ಮಂಗಳವಾರದಿಂದ ಆರಂಭವಾಗಲಿರುವ ನ್ಯೂಝಿಲ್ಯಾಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ ಭಾರತದ ಖ್ಯಾತ ಆಟಗಾರ್ತಿ ಸೈನಾ ನೆಹ್ವಾಲ್.

ಹೈದರಾಬಾದ್‌ನ 29ರ ಹರೆಯದ ಆಟಗಾರ್ತಿ ಸೈನಾ ಈ ವರ್ಷ ಎರಡನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ. ಮಹಿಳೆಯರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಅವರು ಚೀನಾದ ವಾಂಗ್ ಝಿಯಿ ಅವರನ್ನು ಎದುರಿಸಲಿದ್ದಾರೆ.

ವಿಶ್ವದ ನಂ.9ನೇ ಆಟಗಾರ್ತಿ ಸೈನಾ ಈ ವರ್ಷ ಇಂಡೋನೇಶ್ಯ ಮಾಸ್ಟರ್ಸ್ ಪ್ರಶಸ್ತಿ ಜಯಿಸಿರುವ ಭಾರತದ ಏಕೈಕ ಆಟಗಾರ್ತಿಯಾಗಿದ್ದಾರೆ. ಇದೀಗ ತನ್ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಏಶ್ಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿನ ಕ್ವಾರ್ಟರ್ ಫೈನಲ್‌ನಲ್ಲಿ ಸೋತಿರುವ ಭಾರತದ ಇನ್ನೋರ್ವ ಭರವಸೆಯ ಆಟಗಾರ್ತಿ ಪಿ.ವಿ.ಸಿಂಧು ಈ ಟೂರ್ನಮೆಂಟ್‌ನಲ್ಲಿ ಸ್ಪರ್ಧಿಸುವುದಿಲ್ಲ.

ಭಾರತದ ಅಷ್ಟೇನೂ ಪ್ರಸಿದ್ಧಿಯಲ್ಲಿಲ್ಲದ ಆಟಗಾರ್ತಿ ಅನುರಾ ಪ್ರಭುದೇಸಾಯಿ ಮಹಿಳೆಯರ ಸಿಂಗಲ್ಸ್‌ನ ತನ್ನ ಮೊದಲ ಪಂದ್ಯದಲ್ಲಿ ಆರನೇ ಶ್ರೇಯಾಂಕದ ಲಿ ಕ್ಸುರುಯ್ ಸವಾಲು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಬಿ.ಸಾಯಿ ಪ್ರಣೀತ್(20ನೇ ರ್ಯಾಂಕಿನಲ್ಲಿದ್ದಾರೆ) ಹಾಗೂ ಎಚ್.ಎಸ್. ಪ್ರಣಯ್(21ನೇ ರ್ಯಾಂಕ್) ಶುಭಾಂಕರ್ ಡೇ ಅವರೊಂದಿಗೆ ಪ್ರಮುಖ ಸುತ್ತಿಗೆ ನೇರ ಪ್ರವೇಶ ಪಡೆದಿದ್ದಾರೆ.

ಅಜಯ್ ಜಯರಾಮ್, ಪಾರುಪಲ್ಲಿ ಕಶ್ಯಪ್ ಹಾಗೂ ಲಕ್ಷ ಸೇನ್ ಪ್ರಮುಖ ಸುತ್ತಿಗೆ ತೇರ್ಗಡೆಯಾಗಲು ಅರ್ಹತಾ ಸುತ್ತಿನಲ್ಲಿ ಸೆಣಸಾಡಬೇಕಾಗಿದೆ.

ಈ ವರ್ಷದ ಸ್ವಿಸ್ ಓಪನ್ ಫೈನಲ್‌ನಲ್ಲಿ ಚೀನಾದ ವಿಶ್ವದ ನಂ.2ನೇ ಆಟಗಾರ್ತಿ ಶಿ ಯೂಖಿ ವಿರುದ್ಧ ಸೋತಿರುವ ಸಾಯಿ ಪ್ರಣೀತ್ ಸಹ ಆಟಗಾರ ಶುಭಾಂಕರ್ ಎದುರು ಸೆಣಸುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದ್ದಾರೆ. ಮತ್ತೊಂದೆಡೆ ಪ್ರಣಯ್ ಪುರುಷರ ಸಿಂಗಲ್ಸ್‌ನ ತನ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಗಾಪುರದ ಲೊಹ್ ಕೀನ್ ಯೀವ್‌ರನ್ನು ಎದುರಿಸಲಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ ಹಾಗೂ ಬಿ.ಸುಮೀತ್ ರೆಡ್ಡಿ ಜೋಡಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರು ಮೊದಲ ಸುತ್ತಿನಲ್ಲಿ ಕ್ವಾಲಿಫೈಯರ್ ಜೋಡಿಯನ್ನು ಎದುರಿಸಲಿದೆ.

ಮಹಿಳೆಯರ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಎನ್.ಸಿಕ್ಕಿ ರೆಡ್ಡಿ ಸೆಣಸಾಡಲಿದ್ದಾರೆ. ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಭಾರತದ ಯಾವೊಬ್ಬ ಸ್ಪರ್ಧಾಳು ಇಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X