Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಫಲಿತಾಂಶ : ಪುತ್ತೂರಿನ ಸಿಂಚನ...

ಎಸೆಸೆಲ್ಸಿ ಫಲಿತಾಂಶ : ಪುತ್ತೂರಿನ ಸಿಂಚನ ಲಕ್ಷ್ಮೀ ರಾಜ್ಯಕ್ಕೆ ದ್ವಿತೀಯ

ವಾರ್ತಾಭಾರತಿವಾರ್ತಾಭಾರತಿ30 April 2019 4:24 PM IST
share
ಎಸೆಸೆಲ್ಸಿ ಫಲಿತಾಂಶ : ಪುತ್ತೂರಿನ ಸಿಂಚನ ಲಕ್ಷ್ಮೀ ರಾಜ್ಯಕ್ಕೆ ದ್ವಿತೀಯ

ಪುತ್ತೂರು: ಮಾರ್ಚ್ ತಿಂಗಳಲ್ಲಿ ನಡೆದ 2018-19ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಪುತ್ತೂರು ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಸಿಂಚನ ಲಕ್ಷ್ಮೀ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಧ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ಸಿಂಚನ ಲಕ್ಷ್ಮೀ ಪುತ್ತೂರು ತಾಲೂಕಿನ ಮುಂಡೂರು ಬಂಗಾರಡ್ಕ ನಿವಾಸಿಯಾಗಿರುವ ಕೃಷಿಕ ಮುರಳೀಧರ ಭಟ್ ಹಾಗೂ ಶೋಭಾ ಎಂ.ಬಿ ದಂಪತಿಯ ಪುತ್ರಿ.

ಸಣ್ಣ ಪ್ರಾಯದಲ್ಲಿಯೇ ಕುತ್ತಿಗೆಯಲ್ಲಿ ಎಲುಬಿನ ಹೆಚ್ಚುವರಿ ಬೆಳವಣಿಗೆಯಾಗಿದ್ದು, ಇದನ್ನು ಸರಿಪಡಿಸಲು ಕೊಯಂಬತ್ತೂರಿನಲ್ಲಿ ಸರ್ಜರಿಗಾಗಿ ತುಂಬಾ ಸಮಯ ಎಸೆಸೆಲ್ಸಿ ತರಗತಿ ಬಿಟ್ಟು ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಮಾಡಿಸಿಕೊಳ್ಳಬೇಕಾಗಿ ಬಂದಿತ್ತು.

''ಹುಟ್ಟಿನಿಂದಲೇ ಸ್ಕೋಲಿಯೋಸಿಸ್ ಎಂಬ ಖಾಯಿಲೆಗೆ ಒಳಗಾಗಿದ್ದ ಸಿಂಚನ ಇದರ ಪರಿಣಾಮವಾಗಿ ಬೆನ್ನುಹುರಿಯ ಎಳುಬು ಬೆಳವಣಿಗೆಯಲ್ಲಿ ಸಮಸ್ಯೆ ಕಾಡುತ್ತಿತ್ತು. ಮಗುವಿಗೆ ಒಂದು ವರ್ಷವಾದಾಗ ಇದರ ಬಗ್ಗೆ ಅರಿವಿಗೆ ಬಂದಿದೆ. ಎರಡು ವರ್ಷವಾದಾಗ ಕುತ್ತಿಗೆಯೂ ವಾಲಲು ಆರಂಭವಾಗಿತ್ತು. ಚಿಕ್ಕ ಮಗುವಾಗಿರುವ ಕಾರಣ ಎಂಆರ್ ಐ ಸ್ಕ್ಯಾನ್ ಮಾಡಲು ನಾವು ಮುಂದಾಗಲಿಲ್ಲ. 5 ನೇ ತರಗತಿಗೆ ಬಂದಾಗ ಆಕೆಯ ಕೈಯಲ್ಲೂ ನೋವು ಕಾಣಿಸಿಕೊಂಡಿದ್ದು ಇದರ ಬಗ್ಗೆ ಕೆಲವರ ಸಲಹೆಗಳನ್ನು ಪಡೆದುಕೊಂಡು ಏಷ್ಯಾದ ಪ್ರಮುಖ ಅರ್ಥೋ ವೈದ್ಯಕೀಯ ಸಂಸ್ಥೆ ಕೊಯಮತ್ತೂರಿನ ಗಂಗಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದೆವು. ಅಲ್ಲಿನ ತಜ್ಞ ವೈದ್ಯರ ಮೂಲಕ ಪ್ರತಿ 6 ತಿಂಗಳಿಗೆ ಒಂದು ಬಾರಿಯಂತೆ ಆಕೆ 9ನೆ ತರಗತಿ ತಲುಪುವ ತನಕ 6 ಬಾರಿ ಬೆನ್ನುಹುರಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರತಿ ಬಾರಿ ಶಸ್ತ್ರ ಚಿಕಿತ್ಸೆ ಮಾಡುವಾಗಲೂ ಬೆನ್ನು ಮೂಳೆಯನ್ನು ಎಳೆದು ಎತ್ತರಿಸಿ ಕೂರಿಸಿ ಕಸಿ ಮಾಡಬೇಕಾಗಿತ್ತು. ಪ್ರತಿ ಬಾರಿ ಆಪರೇಷನ್ ಆದ ಬಳಿಕ ಕುತ್ತಿಗೆಗೆ ಪ್ಲಾಸ್ಟರ್ ಹಾಕಲಾಗುತ್ತಿತ್ತು. ಚಿಕಿತ್ಸೆಗಾಗಿ ಸುಮಾರು 25 ಲಕ್ಷ ರೂ. ಹೆಚ್ಚು ಖರ್ಚಾಗಿದ್ದರೂ ನಾವು ಯಾರಲ್ಲೂ ಸಹಾಯ ಪಡೆದುಕೊಂಡಿರಲಿಲ್ಲ. ಈಗ ದೈಹಿಕವಾಗಿ ಬೆಳವಣಿಗೆಯಲ್ಲಿ ಗಿಡ್ಡವಾಗಿರುವುದನ್ನು ಬಿಟ್ಟರೆ ಆರೋಗ್ಯವಾಗಿದ್ದಾಳೆ.

- ಶೋಭಾ ಎಂ.ಬಿ, ಸಿಂಚನಾಲಕ್ಷ್ಮೀ ತಾಯಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸಿಂಚನ ಲಕ್ಷ್ಮೀ ಅವರನ್ನು ಶಾಸಕ ಸಂಜೀವ ಮಠಂದೂರು ಶಾಲೆಯಲಿ ಭೇಟಿಯಾಗಿ ಅಭಿನಂದಿಸಿದರು.

ಕ್ಷೇತ್ರ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಮುಖ್ಯಗುರು ಸತೀಶ್ ಕುಮಾರ್ ರೈ ಸಿಂಚನ ಲಕ್ಷ್ಮೀ ಅವರ ತಾಯಿ ಶೋಭಾ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X