Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜ ಪತ್ರಕರ್ತರ ಮೇಲಿಟ್ಟಿರುವ ನಂಬಿಕೆ...

ಸಮಾಜ ಪತ್ರಕರ್ತರ ಮೇಲಿಟ್ಟಿರುವ ನಂಬಿಕೆ ಹುಸಿಯಾಗದಿರಲಿ : ಶಿವಾನಂದ ತಗಡೂರು ಸಲಹೆ

ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 April 2019 5:08 PM IST
share
ಸಮಾಜ ಪತ್ರಕರ್ತರ ಮೇಲಿಟ್ಟಿರುವ ನಂಬಿಕೆ ಹುಸಿಯಾಗದಿರಲಿ : ಶಿವಾನಂದ ತಗಡೂರು ಸಲಹೆ

ಮಡಿಕೇರಿ,ಎ.30 : ಪತ್ರಕರ್ತರು ತಮ್ಮ ಜವಬ್ದಾರಿಯನ್ನು ಮರೆತರೆ ಸಮಾಜ ಕ್ಷಮಿಸುವುದಿಲ್ಲ, ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜ ನಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲಹೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪತ್ರಕರ್ತರೇ ಸುದ್ದಿಯಾಗುತ್ತಿರುವುದು ವಿಷಾದನೀಯ, ನಮ್ಮನ್ನೇ ನಾವು ಆತ್ಮವಲೋಕನ ಮಾಡಿಕೊಳ್ಳಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಶ್ರಮಿಸುವ ವೈದ್ಯರಿದ್ದಂತೆ, ಸಮಾಜದಲ್ಲಿ ನಡೆಯುವ ಲೋಪಗಳನ್ನು ತಿದ್ದುವ ಕೆಲಸ ನಿರಂತರವಾಗಿ ನಡೆಯಬೇಕು. ಯಾವುದೇ ಜಾತಿಗೆ ಸೀಮಿತವಾಗಿರದೆ ಎಲ್ಲಾ ವರ್ಗದ ಜನರ ಪರವಾಗಿ ಕಾರ್ಯನಿರ್ವಹಿಸುವ ಜವಬ್ದಾರಿ ಪತ್ರಕರ್ತರ ಮೇಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪತ್ರಕರ್ತರ ಭವನ ಆಗಬೇಕೆನ್ನುವ ಅಭಿಲಾಷೆ ಇದೆ. ಈಗಾಗಲೇ ಕೆಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಭವನ ನಿರ್ಮಾಣವಾಗಿದೆ ಎಂದರು. 

ಪತ್ರಕರ್ತರ ಸಂಘಟನೆ ಕೇವಲ ವೃತ್ತಿಗೆ ಸೀಮಿತವಾಗಿರದೆ ಸಂಕಷ್ಟದ ಸಂದರ್ಭ ಸ್ಪಂದಿಸುವ ಗುಣ ಹೊಂದಿರಬೇಕೆಂದು ಶಿವಾನಂದ ತಗಡೂರು ಹೇಳಿದರು.

ಕೊಡಗು ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪತ್ರಕರ್ತರು ವಾಸ್ತವಾಂಶದ ವರದಿಗಳಿಗೆ ಆದ್ಯತೆ ನೀಡುವುದರೊಂದಿಗೆ ಸಾಮಾಜಿಕ ಕಳಕಳಿಯನ್ನು ಕೂಡ ಮೆರೆಯಬೇಕೆಂದು ಕಿವಿಮಾತು ಹೇಳಿದರು. ಸಮಾಜದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು ಎಂದರು.

ಕೊಡಗು ಪ್ರೆಸ್‍ಕ್ಲಬ್‍ನ ಮಾಜಿ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಮುಂದಿನ ವರ್ಷದಿಂದ ತಮ್ಮ ತಾತ ದಿ. ಡಿ.ಎಂ.ಕೃಷ್ಣಯ್ಯ ಅವರ ಹೆಸರಿನಲ್ಲಿ ಮಹಿಳಾ ಪತ್ರಕರ್ತರಿಗೆ ಪ್ರಶಸ್ತಿಯನ್ನು ನೀಡಲಾಗುವುದೆಂದರು.

ಪ್ರಕೃತಿ ವಿಕೋಪದ ಸಂದರ್ಭ ಪತ್ರಕರ್ತರು ಸುದ್ದಿಯ ಜೊತೆಗೆ ಮಾನವೀಯತೆಯನ್ನು ಮೆರೆದಿರುವುದು ಶ್ಲಾಘನೀಯ. ಸಂತ್ರಸ್ತರಿಗೆ ಅಗತ್ಯ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ಮಾಧ್ಯಮದವರ ಪಾತ್ರ ದೊಡ್ಡದಾಗಿತ್ತು. ಆದರೆ ಪತ್ರಕರ್ತರನ್ನು ಗುರುತಿಸದೇ ಇರುವುದು ವಿಷಾದಕರವೆಂದು ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ಮಾನಸಗಂಗೋತ್ರಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಸಪ್ನಾ ನಾಯಕ್ “ಪರ್ತಕರ್ತರ ಹೊಣೆಗಾರಿಕೆ” ಎಂಬ ವಿಷಯದ ಬಗ್ಗೆ ಮುಖ್ಯ ಭಾಷಣ ಮಾಡಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಉಪಸ್ಥಿತರಿದ್ದರು. 

ಅತ್ಯುತ್ತಮ ವರದಿಗಳಿಗಾಗಿ 13 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X