Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಅನುಪಮಾಗೆ ಐಐಟಿಯಲ್ಲಿ ಕಲಿತು...

ಬಂಟ್ವಾಳ: ಅನುಪಮಾಗೆ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ30 April 2019 8:19 PM IST
share
ಬಂಟ್ವಾಳ: ಅನುಪಮಾಗೆ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

ಬಂಟ್ವಾಳ, ಎ. 30: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳದ ವಿದ್ಯಾಗಿರಿಯ ಎಸ್‍ವಿಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ಅವರು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. 

ಕನ್ನಡ 125, ಗಣಿತ 100, ಸಮಾಜ100, ಸಂಸ್ಕೃತ 100, ಇಂಗ್ಲಿಷ್ 100, ವಿಜ್ಞಾನದಲ್ಲಿ 99 ಅಂಕ ಗಳಿಸುವ ಮೂಲಕ ಒಟ್ಟು 625 ರಲ್ಲಿ 624ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈಕೆ ಬಿ.ಸಿ.ರೋಡಿನ ಕೈಕುಂಜೆ ನಿವಾಸಿ, ಡಾ. ಅನುರಾದ ಕಾಮತ್ ಹಾಗೂ ಡಾ.ದಿನೇಶ್ ಕಾಮತ್ ವೈದ್ಯ ದಂಪತಿಯ ಅವರ ಪುತ್ರಿ.

ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ

"ನನ್ನ ತಾಯಿಯ ತಂದೆ ಇಸ್ರೋದಲ್ಲಿದ್ದವರು. ನನಗೂ ಐಐಟಿಯಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾಗುವ ಆಸೆ. ಪಿಸಿಎಂಬಿ ತೆಗೆದುಕೊಂಡು ಶಾರದಾ ವಿದ್ಯಾಲಯಲದಲ್ಲಿ ಪಿಯುಸಿ ವಿಜ್ಞಾನ ವಿಷಯ ಆಯ್ಕೆ ಮಾಡುವೆ. ಡಾಕ್ಟರ್ ಆಗುವ ಆಸಕ್ತಿ ಇಲ್ಲ" ಎಂದು ವಿದ್ಯಾರ್ಥಿನಿ ಅನುಪಮಾ ಕಾಮತ್ ತಿಳಿಸಿದ್ದಾರೆ.

ಕೈಕುಂಜೆಯಲ್ಲಿ ಮನೆ ಮಾಡಿರುವ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಅವರ ಪ್ರಥಮ ಪುತ್ರಿ ಅನುಪಮಾ ನೃತ್ಯ, ಸಂಗೀತಗಳನ್ನೂ ಕಲಿತಿದ್ದಾಳೆ. ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದಾಳೆ. ಸದ್ಯ ಮಂಗಳೂರಿನ ಸಿಎಫ್ ಎಎಲ್‍ನಲ್ಲಿ ಐಐಟಿ ಕೋಚಿಂಗ್ ಪಡೆಯುತ್ತಿರುವ ಅನುಪಮಾ, ಈ ಯಶಸ್ಸಿಗೆ ಬಂಟ್ವಾಳ ವಿದ್ಯಾಗಿರಿಯ ಶಿಕ್ಷಕ, ಶಿಕ್ಷಕೇತರ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದಳು.

"ಶಾಲೆಯಲ್ಲಿ ಕೊಡುವ ಕೋಚಿಂಗ್ ಅಷ್ಟೇ ನನಗೆ ಮಾರ್ಗದರ್ಶಿ. ನನ್ನ ಸಹಪಾಠಿಗಳೊಂದಿಗೆ ಗ್ರೂಪ್ ಸ್ಟಡಿ ಮಾಡ್ತಿದ್ದೆ. ನನ್ನೊಡನೆ ಗ್ರೂಪ್ ಸ್ಟಡಿ ಮಾಡುತ್ತಿದ್ದ ಎಲ್ಲರಿಗೂ ಉತ್ತಮ ಅಂಕ ಬಂದಿವೆ ಎಂದು ಅನುಪಮಾ ತಿಳಿಸಿದ್ದಾರೆ.

"ಮಾರ್ಕ್ ಗಳಿಕೆಗೆಂದು ನಾವೆಂದೂ ಒತ್ತಡ ಹೇರಲಿಲ್ಲ. ಎಂಟು ಗಂಟೆ ನಿದ್ರೆ, ಓದುವ ಸಂದರ್ಭ ಶ್ರದ್ಧೆ, ಏಕಾಗ್ರತೆಯಲ್ಲಿ ಅಭ್ಯಸಿಸುತ್ತಿದ್ದ ಅನುಪಮಾ, ಇಂದು ಉತ್ತಮ ಅಂಕ ಗಳಿಸಿರಲು ಆಕೆಯ ಶಾಲೆಯ ಎಲ್ಲ ಶಿಕ್ಷಕ ವೃಂದ ಮತ್ತು ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ" ಎಂದು ಆಕೆಯ ಪೋಷಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X