Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಪರೀಕ್ಷೆ: ಪುತ್ತೂರಿಗೆ ಶೇ....

ಎಸೆಸೆಲ್ಸಿ ಪರೀಕ್ಷೆ: ಪುತ್ತೂರಿಗೆ ಶೇ. 80.44 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ30 April 2019 8:32 PM IST
share

ಪುತ್ತೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿಗೆ ಶೇ.80.44 ಫಲಿತಾಂಶ ಬಂದಿದ್ದು, ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

ತಾಲೂಕಿನ ಮೂರು ಸರ್ಕಾರಿ ಪ್ರೌಢ ಶಾಲೆ ಹಾಗೂ 7 ಖಾಸಗಿ ಪ್ರೌಢಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ. ತಾಲೂಕಿನಲ್ಲಿ ಈ ಬಾರಿ ಕಳೆದ ಬಾರಿಗಿಂತ ಶೇ.5.83 ಕಡಿಮೆ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ ಶೇ.86.27 ಫಲಿತಾಂಶ ಪಡೆದು ಕೊಂಡಿದ್ದರೂ ಜಿಲ್ಲೆ ಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಪುತ್ತೂರು ಈ ಬಾರಿ ಕಡಿಮೆ ಫಲಿತಾಂಶ ಪಡೆದಿದ್ದರೂ 3ನೇ ಸ್ಥಾನಕ್ಕೇರಿದೆ.

ಪುತ್ತೂರು ತಾಲೂಕಿನ ಮಂಜುನಾಥ ನಗರ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಮಣಿಕ್ಕರ, ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ದರ್ಬೆ, ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ನೆಲ್ಯಾಡಿ, ಪ್ರಗತಿ ಕನ್ನಡ ಮಾಧ್ಯಮ ಪ್ರೌಢಶಾಲೆ ಕಾಣಿಯೂರು, ಸೈಂಟ್ ಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆ ನೆಲ್ಯಾಡಿ, ಬೆಥನಿ ಆಂಗ್ಲಮಾಧ್ಯಮ ಪ್ರೌಢಶಾಲೆ ಪಾಂಗ್ಲಾಯಿ ದರ್ಬೆ, ಆಯಿಶಾ ಬಾಲಕಿಯರ ಪ್ರೌಢಶಾಲೆ ಆತೂರು ರಾಮಕುಂಜ, ಖಲೀಲ್ ಸಲಾಹ್ ಆಂಗ್ಲಮಾಧ್ಯಮ ಪ್ರೌಢಶಾಲೆ ಗಾಳಿಮುಖ ಕರ್ನೂರು ಮತ್ತು ಪ್ರಿಯದರ್ಶನಿ ಆಂಗ್ಲಮಾಧ್ಯಮ ಪ್ರೌಢಶಾಲೆ ಬೆಟ್ಟಂಪಾಡಿ ಶೇ. 100 ಫಲಿತಾಂಶ ಪಡೆದುಕೊಂಡಿವೆ.

ಇರ್ದೆ ಉಪ್ಪಳಿಗೆ ಸರ್ಕಾರಿ ಪ್ರೌಢಶಾಲೆ ಶೇ,96.29 ಫಲಿತಾಂಶ ಪಡೆದಿದ್ದರೆ, ಹಿರೇಬಂಡಾಡಿ ಸರ್ಕಾರಿ ಪ್ರೌಢಶಾಲೆ ಶೇ.95 ಫಲಿತಾಂಶ ಪಡೆದುಕೊಂಡಿದೆ.

ಸರ್ಕಾರಿ ಪ್ರೌಢಶಾಲೆಗಳ ಪೈಕಿ ಅತ್ಯಂತ ಕನಿಷ್ಠ ಶೇ.50 ಫಲಿತಾಂಶ ಕುಂಬ್ರ ಸರ್ಕಾರಿ ಪ್ರೌಢಶಾಲೆಯಿಂದ ದಾಖಲಾಗಿದೆ. ಕಳೆದ ಬಾರಿ ಶೇ.100 ಫಲಿತಾಂಶ ಪಡೆದಿದ್ದ ಸರ್ಕಾರಿ ಪ್ರೌಢಶಾಲೆ ಕಬಕ ಈ ಬಾರಿ ಶೇ.54.29 ಫಲಿತಾಂಶ ಪಡೆದುಕೊಂಡಿದೆ. ಮಂಜುನಾಥನಗರ ಸರ್ಕಾರಿ ಪ್ರೌಢಶಾಲೆಯಲ್ಲಿ 3 ಹೆಣ್ಣು ಮತ್ತು 3 ಗಂಡು ಮಕ್ಕಳು ಸೇರಿದಂತೆ ಕೇವಲ 6 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6 ಮಂದಿಯೂ ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಾಗಿದೆ.

ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆ

ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಗೆ ಶೇ.100 ಫಲಿತಾಂಶ ಬಂದಿದ್ದು, ಶಾಲೆಯಿಂದ 17 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 6 ಮಂದಿ ಪ್ರಥಮ ಶ್ರೇಣಿ, 11 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಮುಖ್ಯಗುರು ರಾಜೇಶ್ ಎನ್ ತಿಳಿಸಿದ್ದಾರೆ.

ಶ್ರೀ ರಾಮಕೃಷ್ಣ ಪ್ರೌಢಶಾಲೆ

ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಆಂಗ್ಲ ಮಾದ್ಯಮ ವಿಭಾಗಕ್ಕೆ ಶೇ.98.41 ಫಲಿತಾಂಶ ಬಂದಿದ್ದು, ಕನ್ನಡ ಮಾಧ್ಯಮ ವಿಭಾಗಕ್ಕೆ ಶೇ. 86 ಫಲಿತಾಂಶ ದಾಖಲೆಯಾಗಿದೆ. ಆಂಗ್ಲ ಮಾಧ್ಯಮದಿಂದಪರೀಕ್ಷೆಗೆ ಹಾಜರಾಗಿದ್ದ 63 ವಿದ್ಯಾರ್ಥಿಗಳಲ್ಲಿ 62 ಮಂದಿ ತೇರ್ಗಡೆಯಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 100 ವಿದ್ಯಾರ್ಥಿಗಳಲ್ಲಿ 86 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮತ್ತು ಮುಖ್ಯಗುರು ರೂಪಕಲಾ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆ

ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಗೆ ಶೇ. 93 ಫಲಿತಾಂಶ ಬಂದಿದ್ದು, ಶಾಲೆಯಿಂದ ಪರೀಕ್ಷೆಗೆ ಹಾಜರಾಗಿದ್ದ 43 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 11 ಡಿಸ್ಟಿಂಕ್ಷನ್, 25 ಪ್ರಥಮ ಶ್ರೇಣಿ ಮತ್ತು 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಸಂಚಾಲಕ ಅಬ್ದುಲ್ ಅಝೀಝ್ ಬುಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X