ಬೆಂಗಳೂರಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ

ಬೆಂಗಳೂರು, ಎ.30: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳ ನಡುವೆ ಐಪಿಎಲ್ ಟ್ವೆಂಟಿ-20 ಟೂರ್ನಿಯ 49ನೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಜಯಿಸಿದ ರಾಜಸ್ಥಾನ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ರಾತ್ರಿ 8 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ನಿಗದಿತ ಸಮಯಕ್ಕಿಂತ ಮೂರು ಗಂಟೆ ಕಳೆದರೂ ಆಟ ಆರಂಭವಾಗಿಲ್ಲ.
Next Story





