Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೋಷಪೂರಿತ ಹಿಪ್ ಇಂಪ್ಲಾಂಟ್: ರೂ. 1.90...

ದೋಷಪೂರಿತ ಹಿಪ್ ಇಂಪ್ಲಾಂಟ್: ರೂ. 1.90 ಕೋಟಿ ಪರಿಹಾರ ನೀಡುವಂತೆ ಜಾನ್ಸನ್ &ಜಾನ್ಸನ್ ಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ1 May 2019 12:43 PM IST
share
ದೋಷಪೂರಿತ ಹಿಪ್ ಇಂಪ್ಲಾಂಟ್: ರೂ. 1.90 ಕೋಟಿ ಪರಿಹಾರ ನೀಡುವಂತೆ ಜಾನ್ಸನ್ &ಜಾನ್ಸನ್ ಗೆ ಆದೇಶ

ಹೊಸದಿಲ್ಲಿ : ಜಾನ್ಸನ್&ಜಾನ್ಸನ್ ಕಂಪೆನಿಯ ದೋಷಪೂರಿತ ಹಿಪ್ ಇಂಪ್ಲಾಂಟ್ (ಪ್ರಸ್ಠದ ಕೀಲು ಬದಲಾವಣೆ) ಅಳವಡಿಸಲ್ಪಟ್ಟು ನಂತರ ಸಮಸ್ಯೆ ಎದುರಿಸಿದ ಇಬ್ಬರು ರೋಗಿಗಳಿಗೆ ಒಟ್ಟು ರೂ 1.90 ಕೋಟಿಗೂ ಅಧಿಕ  ಪರಿಹಾರ ಪಾವತಿಸುವಂತೆ ಕಂಪೆನಿಗೆ  ಕೇಂದ್ರ ಔಷಧಿ ಗುಣಮಟ್ಟ ನಿಯಂತ್ರಣ ಸಂಘಟನೆ (ಸೆಂಟ್ರಲ್ ಡ್ರಗ್ಸ್ ಸ್ಟಾಂಡರ್ಡ್ ಕಂಟ್ರೋಲ್  ಆರ್ಗನೈಝೇಶನ್- ಸಿಡಿಎಸ್‍ಸಿಒ ) ಆದೇಶಿಸಿದೆ. ಭಾರತದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣವೊಂದರಲ್ಲಿ ಗರಿಷ್ಠ ಪರಿಹಾರ ಘೋಷಿಸಿದ ಆದೇಶ ಇದಾಗಿದೆ. ಪರಿಹಾರ ಪಡೆಯಲಿರುವ ಇಬ್ಬರು ರೋಗಿಗಳೂ ಉತ್ತರ ಪ್ರದೇಶದವರಾಗಿದ್ದಾರೆ. ಈ ಇಬ್ಬರು ರೋಗಿಗಳು ರೂ. 90.27  ಲಕ್ಷ ಹಾಗೂ ರೂ. 1.01 ಕೋಟಿ ಪರಿಹಾರ ಪಡೆಯಲಿದ್ದಾರೆ.

ಈ ಎರಡೂ ಪ್ರಕರಣಗಳು ಸೇರಿದಂತೆ ಇಲ್ಲಿಯ ತನಕ ಸಿಡಿಎಸ್‍ಸಿಒ ಒಟ್ಟು ನಾಲ್ಕು ರೋಗಿಗಳಿಗೆ ಇಂತಹ ಪ್ರಕರಣಗಳಲ್ಲಿ ಪರಿಹಾರ ಘೋಷಿಸಿದೆ. ಮೇಲಿನ ಪ್ರಕರಣದಲ್ಲಿ 30 ದಿನಗಳೊಳಗೆ ಪರಿಹಾರ ಮೊತ್ತ ಪಾವತಿಸುವಂತೆ ಆದೇಶಿಸಲಾಗಿದೆ.

ಜಾನ್ಸನ್ & ಜಾನ್ಸನ್ ಕಂಪೆನಿಯ ಅಂಗ ಸಂಸ್ಥೆಯಾದ ಡಿಪುಯ್ ಇಂಟರನ್ಯಾಷನಲ್ ಲಿಮಿಟೆಡ್ ತಯಾರಿಸಿದ ಎಎಸ್‍ಆರ್ ಹಿಪ್ ಇಂಪ್ಲಾಂಟ್  ಅನ್ನು ಆಗಸ್ಟ್ 2010ಕ್ಕಿಂತ ಮೊದಲು ಅಳವಡಿಸಲ್ಪಟ್ಟು ಸಮಸ್ಯೆಗೊಳಗಾದ ರೋಗಿಗಳಿಗೆ ಪರಿಹಾರ ಮೊತ್ತ ನಿಗದಿ ಪಡಿಸಲು ಒಂದು ಸೂತ್ರವನ್ನು ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಅನುಮೋದಿಸಿತ್ತು. ಇದರಂತೆ ಸಮಸ್ಯೆಗೀಡಾದ ರೋಗಿಗಳಿಗೆ ರೂ. 30 ಲಕ್ಷದಿಂದ ರೂ .1.23 ಕೋಟಿ ತನಕ ಪರಿಹಾರ ಒದಗಿಸಬೇಕೆಂದು ನಿರ್ಧರಿಸಲಾಗಿತ್ತು.

ದೇಶದಲ್ಲಿ 2004 ಹಾಗೂ 2010ರ ನಡುವಿನ ಅವಧಿಯಲ್ಲಿ 4,700 ಹಿಪ್ ಇಂಪ್ಲಾಂಟ್ ಶಸ್ತ್ರಕ್ರಿಯೆಗಳ ನಡೆದಿದ್ದರೂ  ಸಹಾಯವಾಣಿಯ ಮುಖಾಂತರ ಅವರಲ್ಲಿ ಕೇವಲ 1,080 ಮಂದಿಯನ್ನು ಮಾತ್ರ ಪತ್ತೆ ಹಚ್ಚುವುದು ಸಾಧ್ಯವಾಗಿತ್ತು.

2017ರಲ್ಲಿ ಸರಕಾರ ಮೌಲಾನ ಆಝಾದ್ ಮೆಡಿಕಲ್ ಕಾಲೇಜಿನ ಮಾಜಿ ಡೀನ್ ಡಾ ಅರುಣ್ ಅಗರ್ವಾಲ್ ಅವರ ನೇತೃತ್ವದ ಸಮಿತಿಯನ್ನು ರಚಿಸಿ ಪ್ರತಿಯೊಬ್ಬ ಸಮಸ್ಯೆಗೀಡಾದ ರೋಗಿಗೆ ಎಷ್ಟು ಪರಿಹಾರ ನೀಡಬೇಕೆಂದು ಶಿಫಾರಸು ಮಾಡುವ ಕೆಲಸವನ್ನು ಅದಕ್ಕೆ ವಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X