ಮೇ 3ರಂದು ಭೀಕರ ಸ್ವರೂಪ ಪಡೆಯಲಿರುವ ಫನಿ ಚಂಡಮಾರುತ

ಹೊಸದಿಲ್ಲಿ , ಮೇ1: ದೇಶದ ಹಲವು ರಾಜ್ಯಗಳಲ್ಲಿ ಭೀತಿ ಸೃಷ್ಟಿಸಿರುವ ಫನಿ ಚಂಡಮಾರುತ ಶುಕ್ರವಾರ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ.
ಚಂಡಮಾರುತ ಪರಿಣಾಮವಾಗಿ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಫನಿ ತನ್ನ ದಿಕ್ಕನ್ನು ಬದಲಿಸಿ ಒಡಿಶಾ ಕರಾವಳಿಯತ್ತ ಮುನ್ನುಗ್ಗುತ್ತಿದೆ.
ಈಗಾಗಲೇ ಫನಿ ಕಾರಣದಿಂದಾಗಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅಲ್ಲಲ್ಲಿ ಮಳೆಯಾಗುತ್ತಿದೆ.
ಚಂಡಮಾರುತದ ಭೀತಿ ಎದುರಿಸುತ್ತಿರುವ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಎಸ್ ಡಿಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ತಂಡಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದೆ.
Next Story





