Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಗುತ್ತಿಗೆದಾರರಿಂದ ಕಾರ್ಮಿಕರ ಶೋಷಣೆ:...

​ಗುತ್ತಿಗೆದಾರರಿಂದ ಕಾರ್ಮಿಕರ ಶೋಷಣೆ: ಎಚ್.ಕೆ. ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 May 2019 4:38 PM IST
share
​ಗುತ್ತಿಗೆದಾರರಿಂದ ಕಾರ್ಮಿಕರ ಶೋಷಣೆ: ಎಚ್.ಕೆ. ಪಾಟೀಲ್‌

ಬೆಂಗಳೂರು, ಮೇ 1: ವಿಧಾನ ಸೌಧದಲ್ಲಿ ಸೇವೆ ಸಲ್ಲಿಸುವ ಲೀಫ್ಟ್ ಆಪರೇಟರ್ ಸೇರಿದಂತೆ ಇತರೆ ವಲಯಗಳ ಕಾರ್ಮಿಕರಿಗೆ ಹೊರ ಗುತ್ತಿಗೆ ಆಧಾರದಲ್ಲಿ ವೇತನ ನೀಡುತ್ತಿರುವುದು ಕಾರ್ಮಿಕರ ಶೋಷಣೆಗೆ ಕಾರಣವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಕೆ. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ರೇಸ್‌ಕೋರ್ಸ್‌ನ ಮುಖ್ಯರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರ ಗುತ್ತಿಗೆದಾರರಿಗೆ ಹೆಚ್ಚು ಹಣವನ್ನು ನೀಡಿದ್ದರೂ ಗುತ್ತಿಗೆದಾರರು ಕಾರ್ಮಿಕರಿಗೆ ಪಿಎಫ್, ಇಎಸ್‌ಐ ನಂತಹ ಸೌಲಭ್ಯಗಳನ್ನು ನೀಡದೆ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಹೊರ ಗುತ್ತಿಗೆ ಪದ್ಧತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿಗೆ ಕಾರ್ಮಿಕ ನಿಯೋಗವೊಂದು ತೆರಳಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಇದಕ್ಕೆ ನನ್ನ ಬೆಂಬಲ ಸಂಪೂರ್ಣವಾಗಿ ಇರುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ಗೆ ಅಂಬಾನಿಯಂತಹ ದೊಡ್ಡ ಉದ್ದಿಮೆಗಳ ಬೆಂಬಲವಿಲ್ಲ. ಆದರೆ, ಕೃಷಿ, ಕಟ್ಟಡ, ಗಾರ್ಮೆಂಟ್ಸ್, ಕೈಗಾರಿಕಾವಲಯದ ಕಾರ್ಮಿಕರೇ ದೊಡ್ಡ ಬೆಂಬಲಿಗರು. ಕಾರ್ಮಿಕರು ಘೋಷಣೆ ಕೂಗಿದರೆ ಸರಕಾರ ಮತ್ತು ಉದ್ದಿಮೆದಾರರು ಅಂಜುತ್ತಿದ್ದರು. ಆದರೆ, ಇಂದು ಕೇಂದ್ರ ಬಿಜೆಪಿ ಸರಕಾರದ ಅವಧಿಯಲ್ಲಿ ಕಾರ್ಮಿಕ ಸಂಘಟನೆಗಳನ್ನು ಧಮನ ಮಾಡಲಾಗಿದೆ ಎಂದು ಅವರು ಕಿಡಿಕಾರಿದರು. ಈ ವೇಳೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಉಪಸ್ಥಿತರಿದ್ದರು.

''ಪ್ರಧಾನಿ ಮೋದಿ ಸರಕಾರದ ಮೂರ್ಖತನದ ಆರ್ಥಿಕ ನೀತಿಗಳೆ ದೇಶದಲ್ಲಿ ಉದ್ಯೋಗ ಸೃಷ್ಟಿಯಾಗದಿರಲು ಮುಖ್ಯ ಕಾರಣವಾಗಿದೆ. ದೊಡ್ಡ ಉದ್ದಿಮೆಗಳ ಪರವಾಗಿ ನೀತಿಗಳನ್ನು ರೂಪಿಸಿ, ಕಾರ್ಮಿಕರನ್ನು ಬೀದಿಗೆ ತಳ್ಳಲಾಗಿದೆ. ಜೆಟ್ ಏರ್‌ವೇಸ್, ಎಚ್‌ಎಎಲ್, ಬಿಎಸ್‌ಎನ್‌ಎಲ್ ನಂತಹ ಸರಕಾರಿ ಉದ್ದಿಮೆಗಳ ಜಾಗದಲ್ಲಿ ಖಾಸಗಿ ಉದ್ದಿಮೆಗಳನ್ನು ಕೂರಿಸಲು ಕಾನೂನುಗಳನ್ನು ರೂಪಿಸಲಾಗುತ್ತಿದೆ. ಇದೆಲ್ಲವನ್ನು ದೇಶದ ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು''.

- ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X