Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ವಿಶ್ವ ಕಾರ್ಮಿಕ ದಿನಾಚರಣೆ

ದಾವಣಗೆರೆ: ವಿಶ್ವ ಕಾರ್ಮಿಕ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 May 2019 6:35 PM IST
share
ದಾವಣಗೆರೆ: ವಿಶ್ವ ಕಾರ್ಮಿಕ ದಿನಾಚರಣೆ

ದಾವಣಗೆರೆ: ಪ್ರತಿಯೊಬ್ಬ ಕಾರ್ಮಿಕರು ಸರ್ಕಾರದ ಯೋಜನೆಗಳ ಅರಿವು ಹೊಂದಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಂಬಾದಾಸ್ ಜಿ ಕುಲಕರ್ಣಿ ತಿಳಿಸಿದರು. 

ನಗರದ ಹಳೇ ನ್ಯಾಯಾಲಯಗಳ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ನೆರಳು ಬೀಡಿ ಕಾರ್ಮಿಕರ ಯೂನಿಯನ್, ಕರ್ನಾಟಕ ಗಾರ್ಮೆಂಟ್ಸ್ ವರ್ಕಸ್ಸ್  ಯೂನಿಯನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ಏರ್ಪಡಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರು ತಮ್ಮ ಪರವಾಗಿರುವ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಧರ್ಮ, ಜಾತಿ, ವರ್ಗ, ಭಾಷೆ, ಗಡಿಗಳನ್ನ ದಾಟಿ ಪ್ರಪಂಚದಾದ್ಯಂತ ಎಲ್ಲಾ ಕಾರ್ಮಿಕರು ಇಂದು ಈ ದಿನವನ್ನು ಆಚರಿಸುತ್ತಿದ್ದಾರೆ. ಒಗ್ಗಟ್ಟಾಗಿ ತಮ್ಮ ಹೋರಾಟಕ್ಕೆ ಹುತಾತ್ಮರಾದವರನ್ನು ಸ್ಮರಿಸುವುದರ ಜೊತೆಗೆ ಹಕ್ಕುಗಳ ಪರವಾಗಿ ಹೋರಾಟ ಮಾಡಲು ಸ್ಪೂರ್ತಿಯಾದವರನ್ನು ನೆನೆಯುವ ದಿನ ಇದು. ಕಾರ್ಮಿಕರಿಗೆ ಯಾವುದೇ ರೀತಿಯ ಕಾನೂನಿನ ತೊಡಕುಗಳು ಅಥವಾ ಇಲಾಖೆಯಲ್ಲಿ ತೊಂದರೆಗಳು ಕಂಡುಬಂದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ. ಅದರೊಂದಿಗೆ ಸಲಹೆ ಹಾಗೂ ಪರಿಹಾರ ಪಡೆಯಬಹುದಾಗಿದೆ ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾಬಪ್ಪ ಮಾತನಾಡಿ, ದೇಶದಲ್ಲಿ ಇಂದು ಅಸಂಘಟಿತ ಕಾರ್ಮಿಕರ ಸಂಖ್ಯೆ ಬಹಳಷ್ಟಿದೆ. ಅವರು ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದರು. ಸಹಾಯಕ ಕಾರ್ಮಿಕ ಆಯುಕ್ತ ಮಹಮದ್ ಜಹೀರ್ ಬಾಷಾ ಮಾತನಾಡಿ, ಬಡತನ ಮತ್ತು ಅನಕ್ಷರತೆಯಿಂದ ಕಾರ್ಮಿಕರು ತಮ್ಮ ಪರವಾದ ಯೋಜನೆಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಕಾರ್ಮಿಕ ಇಲಾಖೆ ಕಾರ್ಮಿಕರ ಹಿತ ಕಾಯುವಲ್ಲಿ ಕಟಿಬದ್ದವಾಗಿದೆ ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣ್ ಕುಮಾರ್ ಮಾತನಾಡಿ, ಮೇ. 1 1986 ರಂದು ಕಾರ್ಮಿಕ ಹೋರಾಟದಲ್ಲಿ ಹುತಾತ್ಮರಾದ ನೆನಪಿಗಾಗಿ ಮೇ 1 ರಂದು ಕಾರ್ಮಿಕ ದಿನಾಚರಣೆ ಎಂದು ಆಚರಣೆ ಮಾಡಲಾಗುತ್ತಿದೆ. ಈ ಮೂಲಕ ಪ್ರಪಂಚದ ಎಲ್ಲಾ ದುಡಿಯುವ ವರ್ಗ ಐಕ್ಯತೆಯಿಂದ ಹೋರಾಟದಲ್ಲಿ ಮುನ್ನುಗ್ಗಬೇಕು. ಇಂದು ದೇಶದಲ್ಲಿ ಶೇ. 9 ರಷ್ಟು ದುಡಿಯುವ ವರ್ಗದ ಶ್ರಮವನ್ನು ಶೇ. 10 ರಷ್ಟು ಜನ ಪಡೆಯುತ್ತಿದ್ದಾರೆ. ಬಂಡವಾಳ ಶಾಹಿಗಳು ದುಡಿಯುವ ವರ್ಗದ ಲಾಭ ಪಡೆಯುತ್ತಿದ್ದಾರೆ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಮಹಮದ್ ಜಹೀರ್ ಭಾಷ, ವಕೀಲರ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ್, ಕರಿಬಸಪ್ಪ ಎಂ, ಜಬೀನಾಖಾನಂ, ಅನ್ವರ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X