ಮಡಿಕೇರಿ ಅಕ್ಕಸಾಲಿಗ ಕಾರ್ಮಿಕರ ಒಕ್ಕೂಟದ ಮಹಾಸಭೆ

ಮಡಿಕೇರಿ,ಮೇ 1 :ಮಡಿಕೇರಿ ಅಕ್ಕಸಾಲಿಗ ಕಾರ್ಮಿಕರ ಒಕ್ಕೂಟದ ವಾರ್ಷಿಕ ಮಹಾಸಭೆ ನಗರದಲ್ಲಿರುವ ಒಕ್ಕೂಟದ ಕಚೇರಿಯಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷ ರವಿ ಕೆ.ಆಚಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಬಲವರ್ಧನೆ ಮತ್ತು ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಚರ್ಚಿಸಲಾಯಿತು.
ಸಭೆಗೂ ಮೊದಲು ಗಣಪತಿ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
Next Story





