Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿಲ್ಲೆಯಲ್ಲಿ ಮಿತಿಮೀರಿರುವ...

ಶಿವಮೊಗ್ಗ ಜಿಲ್ಲೆಯಲ್ಲಿ ಮಿತಿಮೀರಿರುವ ಮರಳು ಮಾಫಿಯಾ: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ1 May 2019 6:56 PM IST
share

ಶಿವಮೊಗ್ಗ, ಮೇ 1: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಿತಿಮೀರಿದೆ. ನೀತಿ ಮರಳು ಮಾಫಿಯಾ ಮಿತಿಮೀರಿದ್ದು, ತಕ್ಷಣವೇ ಹತೋಟಿಗೆ ತರಬೇಕೆಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾವಿರಾರು ಮರಳು ಲಾರಿಗಳು ಕಾನೂನುಬಾಹಿರವಾಗಿ ಮರಳು ಸಾಗಾಣೆ ಮಾಡುತ್ತಿವೆ. ನೂರಾರು ಕೋಟಿ ರೂ. ಮೌಲ್ಯದ ವಂಚನೆಯಿದಾಗಿದೆ. ಈ ಮರಳು ಮಾಫಿಯಾ ಜಾಲದೊಳಗೆ ಅಧಿಕಾರಿಗಳು, ರಾಜಕಾರಣಿಗಳು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಶಾಮೀಲಾಗಿವೆ ಎಂದು ದೂರಿದರು.

ವಿಶೇಷವಾಗಿ ಸಾಗರ ಮತ್ತು  ಹೊಸನಗರ ಭಾಗದಲ್ಲಿ ಈ ಮರಳು ಮಾಫಿಯಾ ಅತಿ ಹೆಚ್ಚಾಗಿದೆ. ಒಂದೆಡೆ ಜಿಲ್ಲೆಯಲ್ಲಿ ಮರಳು ಇಲ್ಲದೇ ಕಟ್ಟಡ ಕೆಲಸಗಳೇ ನಿಂತುಹೋಗಿವೆ. ಕೆಲಸಗಾರರು ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಮರಳು ಇಲ್ಲದಿದ್ದರೆ ಇದರ ಜೊತೆಗೆ ಇನ್ನಿತರ ಕುಶಲಕರ್ಮಿಗಳು ಕೆಲಸ ಕಳೆದುಕೊಳ್ಳುತ್ತಾರೆ. ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿದ್ದಾರೆ. ಜೊತೆಗೆ ಅವರ ಅವಲಂಬಿತ ಕುಟುಂಬಗಳಿವೆ. ಅವರ ಬದುಕು ಈಗ ದುಸ್ತರವಾಗಿದೆ ಎಂದರು.

ಶರಾವತಿ ಹಿನ್ನೀರಿನಲ್ಲಿ ಒಂದು ಮರಳಿನ ಕ್ವಾರೆಯನ್ನು ಹರಾಜು ಮಾಡಲಾಗಿದೆ. ಹರಾಜು ಮಾಡಿದ್ದು 1.8 ಕಿಮೀ. ವಿಸ್ತೀರ್ಣವಾಗಿದೆ. ಆದರೆ ಹರಾಜುದಾರ 9 ಕಿ.ಮೀ.ಗೆ ವಿಸ್ತರಿಸಿದ್ದಾನೆ. ಜೆಸಿಬಿ, ಇಟಾಚಿ ಬಳಸುವಂತಿಲ್ಲ ಎಂದರೂ ಕೂಡ 5 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿದ್ದಾನೆ. 
ಪೊಲೀಸ್, ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ ಹೀಗೆ ಎಲ್ಲರು ಶಾಮೀಲಾಗಿದ್ದಾರೆ. ಸಾವಿರಾರು ಲಾರಿಯ ಮರಳನ್ನು ಸ್ಟಾಕ್ ಮಾಡಲಾಗಿದೆ. ಆದರೆ ಈ ಸ್ಟಾಕ್ ಯಾರ್ಡ್‍ಗೆ ಅನುಮತಿಯನ್ನೇ ನೀಡಿಲ್ಲ. ಇಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಲ್ಲ. ಒಟ್ಟಾರೆ ಮರಳು ಮಾಫಿಯಾ ಮಿತಿಮೀರಿ ಮಲೆನಾಡಿನಲ್ಲಿ ಬೆಳೆಯುತ್ತಿರುವುದು ಆತಂಕಕಾರಿಯಾಗಿದೆ ಎಂದರು. 

ಗೋಷ್ಟಿಯಲ್ಲಿ ಪ್ರಮುಖರಾದ ಮಧುಸೂದನ್, ರತ್ನಾಕರ ಶೆಣೈ, ಅಣ್ಣಪ್ಪ, ಹಿರಣ್ಣಯ್ಯ ಸೇರಿದಂತೆ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X