Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆಗೆ...

​ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆಗೆ ಸಿದ್ಧತೆ: ಸಚಿವ ಖಾದರ್ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ2 May 2019 11:59 PM IST
share
​ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆಗೆ ಸಿದ್ಧತೆ: ಸಚಿವ ಖಾದರ್ ಪರಿಶೀಲನೆ

ಮಂಗಳೂರು, ಮೇ 2: ಕಂಕನಾಡಿಯ ಮಾರುಕಟ್ಟೆ ಅಭಿವೃದ್ಧಿ ನಿಟ್ಟಿನಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣಕ್ಕೆ ಭರದ ಸಿದ್ಧತೆ ನಡೆಯುತ್ತಿರುವ ಮಧ್ಯೆಯೇ ಬಸ್, ಕಾರು, ಆಟೊ ಚಾಲಕರು ಮತ್ತು ಸ್ಥಳೀಯ ತಳ್ಳುಗಾಡಿ ವ್ಯಾಪಾರಸ್ಥರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಂಕನಾಡಿ ಮೈದಾನ ಪ್ರದೇಶದಲ್ಲಿ ಬಸ್‌ಗಳನ್ನು ನಿಲುಗಡೆ ಮಾಡಲಾಗುತ್ತಿತ್ತು. ಈಗ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣದಿಂದ ಬಸ್ ನಿಲ್ಲಿಸಲಾಗದೆ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಬಸ್ ಚಾಲಕರು ದೂರಿಕೊಂಡರು.

ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ ಮಾತನಾಡಿ ಹೊಸ ಮಾರುಕಟ್ಟೆ ನಿರ್ಮಾಣದ ಹಿನ್ನಲೆಯಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುತ್ತಿದ್ದೇವೆ. ಇದು ಬಸ್ ನಿಲ್ದಾಣ ಅಲ್ಲ. ಈಗಾಗಲೇ ಬಸ್ ತಂಗುದಾಣ ಮಾಡಿದ್ದರಿಂದ ಪರಿಸರ ಹಾಳಾಗಿದೆ. ಆದ್ದರಿಂದ ಬಸ್‌ಗಳು ಮುಖ್ಯ ರಸ್ತೆಯಿಂದಲೇ ಸಂಚರಿಸುವ ವ್ಯವಸ್ಥೆ ಮಾಡಬೇಕು ಎಂದರು.

ಕಂಕನಾಡಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಲಿ ಹಸನ್ ಮಾತನಾಡಿ ಹೊಸ ಮಾರುಕಟ್ಟೆ ನಿರ್ಮಿಸುವವರೆಗೆ ಇಲ್ಲಿನ ವ್ಯಾಪಾರಿಗಳಿಗೆ ತಾತ್ಕಾಲಿಕ ವ್ಯವಸ್ಥೆ ಆಗಲೇಬೇಕಿದೆ. ಈ ಸಂದರ್ಭ ಮೈದಾನದಲ್ಲಿ ಬಸ್ ಮತ್ತಿತರ ವಾಹನಗಳ ನಿಲುಗಡೆ, ತಳ್ಳುಗಾಡಿಗಳ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.

ಕಂಕನಾಡಿ ಪ್ರದೇಶ ಅಭಿವೃದ್ಧಿಗೊಳ್ಳುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕಾರ್ಪೊರೇಟರ್ ಆಗಿದ್ದ ನವೀನ್ ಡಿಸೋಜರ ಮುತುವರ್ಜಿಯಿಂದ ರಾಜ್ಯ ಸರಕಾರದ 41 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಈ ಸಂದರ್ಭ ಸಣ್ಣ ಪುಟ್ಟ ಸಮಸ್ಯೆಗಳಾಗುವುದು ಸ್ವಾಭಾವಿಕ. ವ್ಯಾಪಾರಸ್ಥರು, ಗ್ರಾಹಕರು, ಬಸ್, ಟ್ಯಾಕ್ಸಿ, ಆಟೊ ಚಾಲಕರಿಗೆ ಸಮಸ್ಯೆ ಆಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಮುಖ್ಯ ರಸ್ತೆ ಪಕ್ಕದ ಈಗ ಆಟೊ ಪಾರ್ಕ್ ಇರುವವರೆಗೆ ರಸ್ತೆ ಅಗಲಗೊಳಿಸಿ ಅಲ್ಲಿ ನಾಲ್ಕು ಬಸ್ ನಿಲ್ಲಿಸಲು ವ್ಯವಸ್ಥೆ ಮಾಡುವಂತೆ ಮತ್ತು ಪಕ್ಕದಲ್ಲಿ ಟ್ಯಾಕ್ಸಿ ಪಾರ್ಕ್, ಪಕ್ಕದ ಶಾಲೆ ಬಳಿ ಆಟೊ ಪಾರ್ಕ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಂಜಿನಿಯರ್ ಲಿಂಗೇಗೌಡ ಮತ್ತು ಸಲಹೆಗಾರ ಧರ್ಮರಾಜ್‌ಗೆ ಸಚಿವರು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X