Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರೈತರ ಹೊಲಗಳ ರಕ್ಷಣೆಯೂ ರಾಷ್ಟ್ರವಾದವೇ’:...

‘ರೈತರ ಹೊಲಗಳ ರಕ್ಷಣೆಯೂ ರಾಷ್ಟ್ರವಾದವೇ’: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ3 May 2019 9:11 PM IST
share
‘ರೈತರ ಹೊಲಗಳ ರಕ್ಷಣೆಯೂ ರಾಷ್ಟ್ರವಾದವೇ’: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸಲಹೆ

ರಾಯಬರೇಲಿ(ಉ.ಪ್ರ),ಮೇ 3: ರೈತರ ಹೊಲಗಳನ್ನು ರಕ್ಷಿಸುವಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಿವಿಮಾತು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು,ಅದೂ ಕೂಡ ರಾಷ್ಟ್ರವಾದವಾಗಿದೆ ಎಂದರು.

ರಾಯಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ತನ್ನ ತಾಯಿ ಸೋನಿಯಾ ಗಾಂಧಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ,ನೀವು(ಮೋದಿ) ಜನರನ್ನು ಪಾಕಿಸ್ತಾನದ ಆಕ್ರಮಣದಿಂದ ರಕ್ಷಿಸುತ್ತಿದ್ದೀರಿ. ಇದೊಂದು ದೊಡ್ಡ ಸಾಧನೆ. ಆದರೆ ನೀವು ರೈತರ ಹೊಲಗಳನ್ನೂ ರಕ್ಷಿಸಬೇಕು. ಅದು ಕೂಡ ರಾಷ್ಟ್ರವಾದವಾಗಿದೆ ಎಂದು ಹೇಳಿದರು.

ಜನರನ್ನು ಪ್ರೀತಿಸುವುದು ಎಂದರೆ ಅವರನ್ನು ಗೌರವಿಸುವುದು ಎಂದೂ ಅರ್ಥವಾಗುತ್ತದೆ. ಅವರು ಏನಾದರೂ ಹೇಳುತ್ತಿದ್ದರೆ ಅದು ಪ್ರಜಾಪ್ರಭುತ್ವದ ಧ್ವನಿಯಾಗಿರುವುದರಿಂದ ಪ್ರಧಾನಿಯಾಗಿ ನೀವು ಅದನ್ನು ಆಲಿಸಬೇಕಾಗುತ್ತದೆ. ನೀವು ರೈತರು,ಯುವಜನರು ಮತ್ತು ಮಹಿಳೆಯರನ್ನು ಕಡೆಗಣಿಸುತ್ತಿದ್ದೀರಿ. ಇದು ಯಾವ ಬಗೆಯ ರಾಷ್ಟ್ರವಾದ ಎಂದು ಅವರು ಪ್ರಶ್ನಿಸಿದರು.

ನಿಮ್ಮ ಹಕ್ಕುಗಳಿಗಾಗಿ ನೀವು ಪ್ರತಿಭಟನೆಯನ್ನು ನಡೆಸಿದಾಗ ನಿಮ್ಮ ಧ್ವನಿಯನ್ನು ಉಡುಗಿಸಲಾಗುತ್ತದೆ. ಏಕೆಂದರೆ ಸರಕಾರಕ್ಕೆ ನಿಮ್ಮ ಶಕ್ತಿಯ ಬಗ್ಗೆ ಹೆದರಿಕೆಯಿದೆ, ಕಳೆದ ಐದು ವರ್ಷಗಳಲ್ಲಿ ತಾವು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಅವರದು ಬಹುಮತದ ಸರಕಾರವಾಗಿತ್ತು,ಆದರೆ ಅವರು ಜನರ ಹಿತಾಸಕ್ತಿಗಾಗಿ ಏನನ್ನೂ ಮಾಡಲಿಲ್ಲ ಎಂದು ಪ್ರಿಯಾಂಕಾ ನುಡಿದರು.

ರಾಯಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸೋಮವಾರ ಮತದಾನ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X