ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಅರಸೀಕೆರೆ, ಮೇ 3: ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿದರೇಗುಡಿ ಸಮೀಪದ ಬೈರಾಪುರ ಗೇಟ್ ಬಳಿ ಸಂಭವಿಸಿದೆ
ಅರಸೀಕೆರೆಯಿಂದ ತಿಪಟೂರಿಗೆ ಬರುತ್ತಿದ್ದ ಟಿಪ್ಪರ್ ಲಾರಿಯು ಸಲಪರಹಳ್ಳಿ ಗ್ರಾಮದಿಂದ ಅಯ್ಯನ ಬಾವಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಗುದ್ದಿದ್ದು, ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಪರಮೇಶ್ ಮೃತಪಟ್ಟು, ಹಿಂಬದಿ ಕುಳಿತಿದ್ದ ಪರಮೇಶ್ ಅವರ ಹೆಂಡತಿ ಮಂಜುಳಾ ಹಾಗೂ ಮಕ್ಕಳಾದ ಚೇತನ್, ಸೌಂದರ್ಯ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





