Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೀರಜ್ ಚೋಪ್ರಾ ಮೊಣಕೈಗೆ ಶಸ್ತ್ರಚಿಕಿತ್ಸೆ...

ನೀರಜ್ ಚೋಪ್ರಾ ಮೊಣಕೈಗೆ ಶಸ್ತ್ರಚಿಕಿತ್ಸೆ ದೋಹಾ ಚಾಂಪಿಯನ್‌ಶಿಪ್‌ಗೆ ಅಲಭ್ಯ?

ವಾರ್ತಾಭಾರತಿವಾರ್ತಾಭಾರತಿ3 May 2019 11:24 PM IST
share
ನೀರಜ್ ಚೋಪ್ರಾ ಮೊಣಕೈಗೆ ಶಸ್ತ್ರಚಿಕಿತ್ಸೆ ದೋಹಾ ಚಾಂಪಿಯನ್‌ಶಿಪ್‌ಗೆ ಅಲಭ್ಯ?

ಮುಂಬೈ, ಮೇ 3: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ದೋಹಾದಲ್ಲಿ ಸೆಪ್ಟಂಬರ್ 27 ರಿಂದ ಅಕ್ಟೋಬರ್ 6ರ ತನಕ ನಡೆಯುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವುದು ಅನುಮಾನವಾಗಿದೆ.

ಕೋಕಿಲಾಬೆನ್ ಆಸ್ಪತ್ರೆಯ ಖ್ಯಾತ ಮೂಳೆ ಚಿಕಿತ್ಸೆ ತಜ್ಞ ಡಾ.ದಿನೇಶ್ ಶಾ ಅವರು ನೀರಜ್ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.

‘‘ನನಗೆ ಮುಂಬೈನಲ್ಲಿ ಮೊಣಕೈ ಶಸ್ತ್ರಚಿಕಿತ್ಸೆ ಆಗಿದೆ. ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ತಿಂಗಳ ಅಗತ್ಯವಿದೆ. ಆದಷ್ಟು ಬೇಗ ಕ್ರೀಡೆಗೆ ವಾಪಸಾಗುವೆ. ಪ್ರತಿಯೊಂದು ಹಿನ್ನಡೆಯು ಮುನ್ನಡೆಗೆ ಸಹಕಾರಿಯಾಗಲಿದೆ’’ ಎಂದು ನೀರಜ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

21ರ ಹರೆಯದ ಚೋಪ್ರಾಗೆ ಎಪ್ರಿಲ್‌ನಲ್ಲಿ ಪಾಟಿಯಾಲದ ಎನ್‌ಐಎಸ್‌ನಲ್ಲಿ ಫ್ರಾಕ್ಟೀಸ್ ನಡೆಸುವಾಗ ಮೊಣಕೈಗೆ ಗಾಯವಾಗಿತ್ತು. ಚೋಪ್ರಾ ಎಷ್ಟು ಸಮಯ ಕ್ರೀಡೆಯಿಂದ ದೂರ ಉಳಿಯುತ್ತಾರೆಂಬ ಕುರಿತು ಸ್ಪಷ್ಟವಾಗಿಲ್ಲ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಭಾಗವಹಿಸುವುದು ಅನುಮಾನ. ಮುಂದಿನ ವರ್ಷ ಒಲಿಂಪಿಕ್ಸ್ ನಡೆಯುತ್ತಿರುವ ಕಾರಣ ಅವಸರ ಪಡದಂತೆ ಕೋಚ್ ಬಹದೂರ್ ಸಿಂಗ್ ಈಗಾಗಲೇ ಚೋಪ್ರಾಗೆ ಸಲಹೆ ನೀಡಿದ್ದಾರೆ.

ಮೊಣಕೈ ನೋವಿನಿಂದಾಗಿಯೇ ಕಾಮನ್‌ವೆಲ್ತ್ ಹಾಗೂ ಏಶ್ಯನ್ ಗೇಮ್ಸ್ ಚಾಂಪಿಯನ್ ಚೋಪ್ರಾ ದೋಹಾದಲ್ಲಿ ಎ.21ರಿಂದ 24ರ ತನಕ ನಡೆದ ಏಶ್ಯನ್ ಚಾಂಪಿಯನ್‌ಶಿಪ್‌ನಿಂದ ದೂರ ಉಳಿದಿದ್ದರು. 2016ರಲ್ಲಿ ಪೊಲೆಂಡ್‌ನಲ್ಲಿ ನಡೆದ ಐಎಎಎಫ್ ವಿಶ್ವ ಅಂಡರ್-20 ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ನೀರಜ್ ಬೆಳಕಿಗೆ ಬಂದಿದ್ದರು. ಆ ನಂತರ ಹಿಂತಿದಿರುಗಿ ನೋಡದ ಅವರು 2016ರ ದಕ್ಷಿಣ ಏಶ್ಯ ಗೇಮ್ಸ್, 2017ರ ಏಶ್ಯನ್ ಚಾಂಪಿಯನ್‌ಶಿಪ್ ಹಾಗೂ ಕಳೆದ ವರ್ಷ ನಡೆದ ಕಾಮನ್‌ವೆಲ್ತ್ ಹಾಗೂ ಏಶ್ಯನ್ ಗೇಮ್ಸ್‌ಗಳಲ್ಲಿ ಚಿನ್ನದ ಪದಕ ಜಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X