ಬಾಲಕ ಆತ್ಮಹತ್ಯೆಗೆ ಶರಣು: ಮಗನ ಸಾವಿನ ಸುದ್ದಿ ಕೇಳಿ ಬಾವಿಗೆ ಹಾರಿದ ತಾಯಿ

ಶಿವಮೊಗ್ಗ, ಮೇ 3: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಗ್ರಾಮದ ಬಾಲಕನೋರ್ವ ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇತ್ತೀಚೆಗೆ ನಡೆದಿದೆ.
ಕಮ್ಮರಡಿಯ ವಿಶ್ವತೀರ್ಥ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ (14) ಆತ್ಮಹತ್ಯೆಗೆ ಶರಣಾದ ಬಾಲಕ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯತ್ನ: ಪುತ್ರನ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ತೀವ್ರ ಮನನೊಂದ ತಾಯಿ ಜ್ಯೋತಿಯು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಸ್ಥಳೀಯರು ಬಾವಿಗೆ ಬಿದ್ದ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





