Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಸವಣ್ಣ ಈಗಿನ ರಾಜಕಾರಣಿಗಳಿಗೆ ಆದರ್ಶ:...

ಬಸವಣ್ಣ ಈಗಿನ ರಾಜಕಾರಣಿಗಳಿಗೆ ಆದರ್ಶ: ಬಸವ ಮರುಳಸಿದ್ದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ4 May 2019 8:44 PM IST
share
ಬಸವಣ್ಣ ಈಗಿನ ರಾಜಕಾರಣಿಗಳಿಗೆ ಆದರ್ಶ: ಬಸವ ಮರುಳಸಿದ್ದ ಸ್ವಾಮೀಜಿ

ಬೆಂಗಳೂರು, ಮೇ 4: ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಕಿರೀಟ ಧರಿಸಿರುವ ಬಸವಣ್ಣ ಒಬ್ಬ ರಾಜಕಾರಣಿಯಾಗಿ ಈಗಿನ ಎಲ್ಲ ರಾಜಕಾರಣಿಗಳಿಗೆ ಆದರ್ಶಪ್ರಾಯ ಎಂದು ಶಿವಮೊಗ್ಗ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ದುಬೈ ಬಸವ ಸಮಿತಿ ಇಲ್ಲಿನ ಜೆಎಸ್‌ಎಸ್ ಇಂಟರ್ ನ್ಯಾಷನಲ್ ಪ್ರೈ.ಸ್ಕೂಲ್ ನಲ್ಲಿ ಏರ್ಪಡಿಸಿದ್ದ ವಿಶ್ವಗುರು ಬಸವಣ್ಣ ಜಯಂತಿ ಕಾರ್ಯಕ್ರಮ ಸಾನಿದ್ಯ ವಹಿಸಿ ಮಾತನಾಡಿದ ಅವರು, ಅನೇಕರು ಕಿರೀಟ ಹಾಕಿರುವ ಬಸವಣ್ಣನ ಮೂರ್ತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಇಷ್ಟ ಲಿಂಗ ಪೂಜೆ ಮಾಡುವ ಬಸವಣ್ಣ ಧಾರ್ಮಿಕವಾಗಿ ಸರಳತೆ ಆಚರಣೆಯನ್ನು ತೋರಿಸಿಕೊಟ್ಟರು. ವಚನ ರಚನೆ ಮಾಡುವ ಮೂಲಕ ಕಠಿಣ ವಿಷಯಗಳನ್ನು ಸರಳ ಭಾಷೆಯಲ್ಲಿ ಹೇಳಿ ಎಲ್ಲರಿಗೂ ತಿಳಿಯುವಂತೆ ಮಾಡಿದರು. ಮೂರನೆಯದಾಗಿ ಕಿರೀಟ ಧರಿಸಿರುವ ಬಸವಣ್ಣನ ಬಗ್ಗೆ ಆಕ್ಷೇಪವಿದೆ. ಈಗಿನ ರಾಜಕಾರಣಿಗೆ ಕಿರೀಟಧಾರಿ ಬಸವಣ್ಣ ಸ್ಪೂರ್ತಿಯಾಗಬೇಕು. ಬಸವಣ್ಣ ಅಧಿಕಾರದಲ್ಲಿದ್ದಾಗ ಕೈಗೆ ಯಾವುದೇ ರೀತಿಯ ಮಸಿ ಬಳಿಸಿಕೊಳ್ಳದೆ ಅಧಿಕಾರದಿಂದ ಹೊರಗೆ ಬಂದರು. ಭ್ರಷ್ಟಾಚಾರ ರಹಿತ ಅಧಿಕಾರ ನಡೆಸಿದ ಬಸವಣ್ಣ ಇವತ್ತಿನ ರಾಜಕಾರಣಿಗಳಿಗೆ ಆದರ್ಶ ಎಂದರು.

ಬಿಜ್ಜಳ ಮಹಾರಾಜ ಬಸವಣ್ಣನ ಆಡಳಿತದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದಾಗ ಬಸವಣ್ಣ ತನ್ನ ತಲೆಯ ಮೇಲಿನ ಕಿರೀಟ ತೆಗೆದು ತನ್ನ ಅಧಿಕಾರ ತ್ಯಾಗ ಮಾಡಿದರು. ಈಗಿನ ರಾಜಕಾರಣಿಗಳ ಹಾಗೆ ಅಧಿಕಾರಕ್ಕಾಗಿ ಯಾವುದೇ ರೀತಿಯ ಕುದುರೆ ವ್ಯಾಪಾರ ಮಾಡಲಿಲ್ಲ. ಅದೇ ಕಾರಣಕ್ಕೆ ಶರಣನಾಗಿ ಕೈಯಲ್ಲಿ ಲಿಂಗ ಹಿಡಿದು ಪೂಜೆ ಮಾಡುತ್ತಿರುವ ಬಸವಣ್ಣ ಎಷ್ಟು ಮುಖ್ಯವೋ ರಾಜಕಾರಣಿಯಾಗಿ ಕಿರೀಟ ಹಾಕಿರುವ ಬಸವಣ್ಣನೂ ಈಗಿನ ಕಾಲಕ್ಕೆ ಅಷ್ಟೇ ಪ್ರಸ್ತುತ ಎಂದು ವಿಶ್ಲೇಷಿಸಿದರು.

ಬಸವಣ್ಣ ಕಾಯಕ ತತ್ವದ ಮೂಲಕ ಇಡೀ ವಿಶ್ವಕ್ಕೆ ಪ್ರೇರಣೆಯಾಗಿದ್ದಾರೆ. ಕಾಯಕ ತ್ವತ್ವ ಪಾಲಿಸಿದರೆ ಆತ್ಮವಿಶ್ವಾಸದಿಂದ ವಿಶ್ವದ ಯಾವುದೇ ದೇಶದಲ್ಲಿ ನೆಮ್ಮದಿಯಾಗಿ ಜೀವನ ಮಾಡಬಹುದು ಎಂದು ಹೇಳಿದರು. ಇದೇ ವೇಳೆ ಸದ್ಯದ ವಾತಾವರಣದಲ್ಲಿ ವಿಶ್ವದಲ್ಲಿ ನೀರಿನ ಸಮಸ್ಯೆ ದೊಡ್ಡದಾಗಿದ್ದು ಜೀವ ಸೃಷ್ಟಿಗೆ ಕಾರಣವಾಗಿರುವ ನೀರನ್ನು ಉಳಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಆನಂದಪುರ ಮುರುಘಾ ಮಠದ ಡಾ.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಸಾಗರದಾಚೆ ದುಬೈನಂತ ನಗರದಲ್ಲಿ ಬಸವಣ್ಣನ ಸಮಾನತೆ ತತ್ವ ಹಾಗೂ ಕನ್ನಡವನ್ನ ಜೀವಂತವಾಗಿಟ್ಟ ವಚನ ಸಾಹಿತ್ಯವನ್ನು ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ. ಇದು ಭಾರತದಲ್ಲಿರುವ ಬಸವಾಭಿಮಾನಿಗಳಿಗೂ ಮಾದರಿ ಎಂದು ಹೇಳಿದರು.

ಜಡೆ ಸಂಸ್ಥಾನ ಮಠದ ಮಹಾಂತಸ್ವಾಮಿ ಯೋಗ ಪ್ರದರ್ಶನದ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸರಿಗಮಪ ಕಾರ್ಯಕ್ರಮ ವಿನ್ನರ್ ಚೆನ್ನಪ್ಪಹುದ್ದಾರ್ ಸಂಗೀತ, ಮಾತನಾಡಿಸುವ ಗೊಂಬೆ ಖ್ಯಾತಿಯ ಸುಮಾ ರಾಜಕುಮಾರ್ ಅವರ ಗೊಂಬೆ ಮಾತು ಜನರ ಮನಸೂರೆಗೊಂಡವು.

ಕಾರ್ಯಕ್ರಮದಲ್ಲಿ ದುಬೈ ಬಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಲಿಂಗದಳ್ಳಿ, ಸಂಗಮೇಶ್ ಬಿಸರಳ್ಳಿ, ಮಲ್ಲಿಕಾರ್ಜುನ ಮುಳ್ಳೂರು, ಸತೀಶ್ ಹಿಂಡೇರ್, ರುದ್ರಯ್ಯ ನವಲಿ ಹಿರೇಮಠ, ಮಮತಾ ರಡ್ಡೇರ್, ಜಗದೀಶ್ ಲಾಲಿ, ಮುರುಗೇಶ್ ಗಾಜರೆ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X