'ಬೆಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಘುವೀರ್ ಗೌಡ ಅಮಾನತು'
ಬೆಂಗಳೂರು, ಮೇ 4: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬೆಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ರಘುವೀರ್ ಗೌಡ ಅವರನ್ನು ಅಮಾನತು ಮಾಡಲಾಗಿದೆ ಎಂದು ಯುವ ಕಾಂಗ್ರೆಸ್ ಬೆಂ.ನಗರ ಉಪಾಧ್ಯಕ್ಷ ಪಿ.ವಿಶ್ವನಾಥ್ ತಿಳಿಸಿದ್ದಾರೆ.
ಮಂಡ್ಯದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಸೇರಿದಂತೆ ಪ್ರಮುಖರು ನಡೆಸಿರುವ ಸಭೆಯಲ್ಲಿ ಬೆಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ರಘುವೀರ್ ಗೌಡ ಭಾಗವಹಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಆದರೆ, ಅವರನ್ನು 5 ತಿಂಗಳ ಹಿಂದೆಯೇ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲದೆ, ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ವಿಫಲ ಹಾಗೂ ಪಕ್ಷ ವಿರೋಧಿ ಕಾರ್ಯ ಚಟುವಟಿಕೆಗಳಲ್ಲಿ ಭಾಗಿ ಆರೋಪ ಅವರ ಮೇಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಪ್ರಕಟನೆಯಲ್ಲಿ ವಿಶ್ವನಾಥ್ ತಿಳಿಸಿದ್ದಾರೆ.
Next Story





