‘ಮೈ ಚೌಕಿದಾರ್’ ಬದಲು ‘ಮೈ ಪಾಗಲ್’ ಎಂದು ಘೋಷಿಸಿಕೊಳ್ಳಿ: ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯ ವ್ಯಂಗ್ಯ ಸಲಹೆ
"ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ"

ಬೆಂಗಳೂರು, ಮೇ 6: ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮುಖಂಡರಿಗೆ ವ್ಯಂಗ್ಯ ಸಲಹೆ ನೀಡಿದ್ದಾರೆ.
‘ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ. ಸೋಲಿನ ಭೀತಿಯಲ್ಲಿರುವ ನರೇಂದ್ರ ಮೋದಿಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಈಶ್ವರಪ್ಪರ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಗಾಂಧಿಯವರ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
Next Story





