Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 18-20 ಸ್ಥಾನಗಳಲ್ಲಿ ಮೈತ್ರಿ ಅಭ್ಯರ್ಥಿಗಳ...

18-20 ಸ್ಥಾನಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು: ಎಚ್.ಡಿ.ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ6 May 2019 8:27 PM IST
share
18-20 ಸ್ಥಾನಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು: ಎಚ್.ಡಿ.ರೇವಣ್ಣ

ಬೆಂಗಳೂರು, ಮೇ 6: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು 18-20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಜೆಡಿಎಸ್ 5-6 ಸೀಟು ಗೆಲ್ಲುತ್ತೆ. 7 ಸ್ಥಾನಗಳಲ್ಲಿಯೂ ಜೆಡಿಎಸ್ ಗೆದ್ದರೆ ಆಶ್ಚರ್ಯ ಪಡಬೇಡಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಭವಿಷ್ಯ ನುಡಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌ಎಂಟಿ(ಹಾಸನ, ಮಂಡ್ಯ, ತುಮಕೂರು) ಬಗ್ಗೆ ಮಾತನಾಡದಿದ್ದರೆ ಕೆಲವರಿಗೆ ಸಮಾಧಾನನೇ ಆಗುವುದಿಲ್ಲ ಎಂದರು.

ಇಷ್ಟು ದಿನ ರಾಮ ಆಯ್ತು. ಈಗ ಎಚ್‌ಎಂಟಿ ಮೇಲೆ ಕಣ್ಣಿಟ್ಟಿದ್ದಾರೆ. ಸುಮ್ಮನೆ ಪ್ರಚಾರ ಕೊಟ್ಟರೆ ಬೇಡ ಅನ್ನೋಕೆ ಆಗುತ್ತಾ? ಈ ವಿಷಯದಲ್ಲಿ ನಾನು ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಚ್‌ಎಂಟಿ ದಿಲ್ಲಿಗೆ ಹೋಗುವುದು ಶತಸಿದ್ಧ ಎಂದು ಅವರು ಹೇಳಿದರು.

ನನ್ನ ಮಗ ಪ್ರಜ್ವಲ್‌ನನ್ನು ಗೆಲ್ಲಿಸಲು ನಾನು ಯಾವುದೇ ರೀತಿಯಲ್ಲಿ ಕಳ್ಳ ಓಟುಗಳನ್ನು ಹಾಕಿಸಿಲ್ಲ. ಈ ಬಗ್ಗೆ ದೂರು ನೀಡಿರುವವರ ಮೇಲೆ ಎರಡು ಪ್ರಕರಣಗಳು ದಾಖಲಾಗಿವೆ. ಈ ವಿಚಾರದ ಕುರಿತು ನನಗೆ ಚುನಾವಣಾ ಆಯೋಗದಿಂದ ಯಾವ ದೂರು ಬಂದಿಲ್ಲ ಎಂದು ಅವರು ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಎ.18ರಂದು ಮತದಾನ ಆಗಿದೆ. ಅವತ್ತೆ ಈ ಸಂಬಂಧ ದೂರು ಕೊಡಬಹುದಿತ್ತು. ಯಾಕೆ ಅಂದು ದೂರು ನೀಡಿಲ್ಲ. ಕಳ್ಳ ಓಟು ಹಾಕಿಸಿರುವ ಕುರಿತು ನಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ, ಯಾವುದೇ ರೀತಿಯ ತನಿಖೆ ಬೇಕಾದರೂ ಮಾಡಿಕೊಳ್ಳಲಿ ಎಂದು ರೇವಣ್ಣ ಸವಾಲು ಹಾಕಿದರು.

ಮೇ 23ರ ನಂತರ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲರೂ ಸಮಾಧಾನಗೊಳ್ಳಲಿದ್ದಾರೆ. ನಾನು ಹೇಳಿದ್ದು ಯಾವತ್ತು ಸುಳ್ಳು ಆಗಿಲ್ಲ. ಬಿಜೆಪಿಯವರು ಎಷ್ಟು ಗಡುವುಗಳನ್ನು ಕೊಟ್ಟರೂ, ಸರಕಾರದ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಅವರು ಹೇಳಿದರು.

ಯಡಿಯೂರಪ್ಪತಿರುಪತಿಗೆ ಹೋಗಿದ್ದರು. ಜಗದೀಶ್ ಶೆಟ್ಟರ್‌ಗೆ ಪಂಡರಾಪುರಕ್ಕೆ ಹೋಗೋಕೆ ಹೇಳಿ. ನಾನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯ ರೇಸ್‌ನಲ್ಲಿಲ್ಲ. ನನಗೆ ಪಕ್ಷ ಹಾಗೂ ಮುಖ್ಯಮಂತ್ರಿ, ಜವಾಬ್ದಾರಿ ನೀಡಿದ್ದಾರೆ. ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಪಕ್ಷ ನೀಡುವ ಕೆಲಸ ಮಾಡುತ್ತಿದ್ದೇನೆ. ಉಪ ಮುಖ್ಯಮಂತ್ರಿ ಹುದ್ದೆ ರೇಸಿಗೆ ಹೋಗಲು ನನ್ನ ಬಳಿ ಕುದುರೆಯೇ ಇಲ್ಲ. ಹೀಗಾಗಿ ನಾನು ಯಾವ ರೇಸ್‌ನಲ್ಲಿಯೂ ಇಲ್ಲ ಎಂದು ರೇವಣ್ಣ ಹೇಳಿದರು.

ಚಿಕ್ಕಮಗಳೂರಿನಲ್ಲಿ ದೇವೇಗೌಡರ ಪೂಜೆ: ಜೆಡಿಎಸ್ ವರಿಷ್ಠ ದೇವೇಗೌಡರ ತಂದೆಗೆ ಇಬ್ಬರು ಪತ್ನಿಯರಿದ್ದರು. ಇಬ್ಬರು ಪತ್ನಿಯರು ಹಾಗೂ ದೇವೇಗೌಡರ ಅಜ್ಜಿ ಮೂವರೂ ಪ್ಲೇಗ್ ರೋಗದಿಂದ ಅಕಾಲಿಕ ಮರಣ ಹೊಂದಿದ್ದರು. ಅವರ ಸದ್ಗತಿಗಾಗಿ ಜ್ಯೋತಿಷಿಗಳ ಸಲಹೆಯಂತೆ ನಮ್ಮ ತಂದೆ ಚಿಕ್ಕಮಗಳೂರಿನಲ್ಲಿ ಶ್ರಾದ್ಧ ಕರ್ಮ ನೆರವೇರಿಸಿದ್ದಾರೆ ಎಂದು ಅವರು ಹೇಳಿದರು.

ಇದು ನಿಖಿಲ್ ಅಥವಾ ಪ್ರಜ್ವಲ್ ಗೆಲುವಿಗೆ ಮಾಡಿಸಿದ ಪೂಜೆಯಲ್ಲ. ಆ ಪೂಜೆಯಲ್ಲಿ ನಿಖಿಲ್ ಮತ್ತು ಪ್ರಜ್ವಲ್ ಹಾಗೂ ನನ್ನ ಮತ್ತು ಕುಮಾರಸ್ವಾಮಿಯ ಪತ್ನಿಯೂ ಭಾಗಿಯಾಗಿರಲಿಲ್ಲ ಎಂದು ರೇವಣ್ಣ ಸ್ಪಷ್ಟನೆ ನೀಡಿದರು.

ಮೋದಿ ಹೇಳಿಕೆಗೆ ರೇವಣ್ಣ ಖಂಡನೆ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕರ್ನಾಟಕಕ್ಕೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಆ ಕೊಡುಗೆ ದೇವೇಗೌಡರಿಗೆ ಗೊತ್ತು. ಕಾಲ ಕೂಡಿ ಬಂದಾಗ ರಾಜೀವ್ ಗಾಂಧಿ ಅವರ ಕೆಲಸಗಳ ಬಗ್ಗೆ ಹೇಳುತ್ತೇನೆ. ಅವರೊಬ್ಬ ಪ್ರಾಮಾಣಿಕ ರಾಜಕಾರಣಿ. ತುಂಬ ಒಳ್ಳೆಯ ವ್ಯಕ್ತಿ. ಸತ್ತವರ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ. ಅದು ಪ್ರಧಾನಿಯ ಘನತೆಗೆ ತಕ್ಕುದ್ದಲ್ಲ ಎಂದು ರೇವಣ್ಣ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X