ಸಿಎ ನರಸಿಂಹ ನಾಯಕ್ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಉಡುಪಿ, ಮೇ 6: ಆರ್ಯಭಟ ಕಲ್ಚರಲ್ ಆರ್ಗನೈಸೇಶನ್ ಸಂಸ್ಥೆ ನೀಡುವ ಪ್ರತಿಷ್ಟಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಸಾಸ್ತಾನದ ಸಿಎ ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ.
1996ರಲ್ಲಿ ಸಿಎ ಪದವಿ ಪಡೆದ ಬಳಿಕ ಇವರು, ಪ್ರಸ್ತುತ 2019-20ರ ಸಾಲಿನ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಉಡುಪಿ ಶಾಖೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಮೇ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





