ಕಾರು-ದ್ವಿಚಕ್ರ ವಾಹನದ ನಡುವೆ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

ಮೈಸೂರು,ಮೇ.6: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ನಡೆದಿದೆ.
ಮೃತರನ್ನು ನಂಜನಗೂಡಿನ ಬಸವಣ್ಣ(50) ಎಂದು ಗುರುತಿಸಲಾಗಿದ್ದು, ಇವರು ಮೈಸೂರು ವಿಮಾನ ನಿಲ್ದಾಣದ ರಸ್ತೆ ವಿಭಜಕದ ಬಳಿ ತಿರುವು ಪಡೆಯುವಾಗ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





