Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈಯುಕ್ತಿಕ ಸಾಧನೆಯೊಂದಿಗೆ ದೇಶಕ್ಕೆ...

ವೈಯುಕ್ತಿಕ ಸಾಧನೆಯೊಂದಿಗೆ ದೇಶಕ್ಕೆ ಕೊಡುಗೆ ಎ.ಆರ್.ಸತೀಶ್ಚಂದ್ರ ಕರೆ

ವಾರ್ತಾಭಾರತಿವಾರ್ತಾಭಾರತಿ6 May 2019 10:40 PM IST
share
ವೈಯುಕ್ತಿಕ ಸಾಧನೆಯೊಂದಿಗೆ ದೇಶಕ್ಕೆ ಕೊಡುಗೆ ಎ.ಆರ್.ಸತೀಶ್ಚಂದ್ರ ಕರೆ

ಉಡುಪಿ, ಮೇ 6: ಇಂದು ಜೀವನದಲ್ಲಿ ಸಾಧನೆ ಮಾಡುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಆದರೆ ಕೇವಲ ವೈಯುಕ್ತಿಕ ಮಟ್ಟದಲ್ಲಿ ಸಾಧನೆ ಮಾಡಿದರೆ ಸಾಲದು, ದೇಶಕ್ಕೂ ಕೊಡುಗೆ ನೀಡುವಂತಹ ಸಾಧನೆಗಳನ್ನು ಮಾಡಬೇಕು ಎಂದು ಕ್ಯಾಂಪ್ಕೋದ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಕರೆ ನೀಡಿದ್ದಾರೆ.

ಮಣಿಪಾಲದ ಆರ್.ಎಸ್.ಬಿ. ಸಭಾಭವನದಲ್ಲಿ ಸಾರಸ್ವತ್ ಲರ್ನಿಂಗ್ ಫೌಂಡೇಶನ್ ವತಿಯಿಂದ ನಡೆದ 2 ದಿನಗಳ ಪ್ರೇರಣಾ -2019 ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಅವರು ತಮ್ಮ ಮಾತಿಗೆ ದಿ. ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರನ್ನು ಉದಾಹರಿಸಿದರು.

ಕುಳಿತು ಆಕಳಿಸುವವನಿಂದ ಸಾಧನೆ ಸಾಧ್ಯವಿಲ್ಲ, ಇಳಿದು ಈಸುವವನಿಂದ ಮಾತ್ರ ಸಾಧನೆ ಸಾಧ್ಯ ಎಂದ ಅವರು, ಇಂದು ಭಾರತ ಡಿಜಿಟಲ್ ಯುಗದತ್ತ ದಾಪುಗಾಲು ಹಾಕುತ್ತಿದೆ. ಅದಕ್ಕೆ ಪ್ರತಿಯೊಬ್ಬರೂ ಸಿದ್ಧರಾಗಬೇಕಾಗಿದೆ. ಆದರೆ ನಮ್ಮ ಋಷಿ ಸಂಸ್ಕೃತಿ, ಕೃಷಿ ಸಂಸ್ಕೃತಿಗಳನ್ನು ಮರೆಯಬಾರದು ಎಂದರು.

ಕಾರ್ಯಕ್ರಮದಲ್ಲಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಗ್ರೇಸ್ ಅಕಾಡೆಮಿಯ ಸುಬ್ರಹ್ಮಣ್ಯ ಕುಳೇದು, ಪೂನಾದ ವೀನಸ್ ಗ್ರೂಪ್ ಅಫ್ ಕಂಪೆನಿಯ ಮಾಳ ಸದಾನಂದ ನಾಯಕ್, ಚೆನೈಯ ರಿನೋಲ್ಟ್ಸ್ ಕಾರ್‌ನ ಉಪಾಧ್ಯಕ್ಷೆ ವಿಲಾಸಿನಿ ಕಾಮತ್, ಬೆಂಗಳೂರಿನ ಜಿಎಫ್‌ಐ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಂ.ವಾಸುದೇವ ನಾಯಕ್, ಬೆಂಗಳೂರಿನ ಮಿಂಗೋಲಜಿ ಫುಡ್ಸ್ ಬ್ರೆವೇರಿಸ್ ನ ಆಡಳಿತ ನಿರ್ದೇಶಕ ಸಂತೋಷ್ ಪ್ರಭು, ಕರ್ನಾಟಕ ಬ್ಯಾಂಕಿನ ನಿವೃತ್ತ ಮಹಾಪ್ರಬಂಧಕ ಉಪೇಂದ್ರ ಪ್ರಭು ಉಪಸ್ಥಿತ ರಿದ್ದರು.

ಸಾರಸ್ವತ್ ಲರ್ನಿಂಗ್ ಫೌಂಡೇಶನ್ ಅಧ್ಯಕ್ಷ ಸುರೇಂದ್ರ ವಾಗ್ಳೆ ಸ್ವಾಗತಿಸಿದರು, ಟ್ರಸ್ಟಿ ಗೋವಿಂದರಾಯ ಪ್ರಭು ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಪ್ರಾಧ್ಯಾಪಕ ರವೀಂದ್ರಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X