Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿಕಿತ್ಸೆಯ ಬಗ್ಗೆ ಸಮಿತಿ ಶಂಕೆ...

ಚಿಕಿತ್ಸೆಯ ಬಗ್ಗೆ ಸಮಿತಿ ಶಂಕೆ ವ್ಯಕ್ತಪಡಿಸಿದರೆ ಸಿಬಿಐ ತನಿಖೆಯಾಗಲಿ: ಹಿರಿಯ ವಕೀಲರ ಆಗ್ರಹ

ಡಾ.ಮಧುಕರ ಶೆಟ್ಟಿ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 May 2019 4:39 PM IST
share
ಚಿಕಿತ್ಸೆಯ ಬಗ್ಗೆ ಸಮಿತಿ ಶಂಕೆ ವ್ಯಕ್ತಪಡಿಸಿದರೆ ಸಿಬಿಐ ತನಿಖೆಯಾಗಲಿ: ಹಿರಿಯ ವಕೀಲರ ಆಗ್ರಹ

ಮಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಅಕಾಲಿಕ ಮರಣ ಸಂಶಯಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ನೀಡಲಾದ ಚಿಕಿತ್ಸೆಯ ಬಗ್ಗೆ ಪರಿಶೀಲನೆ ನಡೆಸಲು ರಾಜ್ಯ ಸರಕಾರ ನೇಮಿಸಿದ ಸಮಿತಿ ಸಲ್ಲಿಸುವ ವರದಿಯಲ್ಲಿ ಚಿಕಿತ್ಸೆ ಬಗ್ಗೆ ಅನುಮಾನ ವ್ಯಕ್ತವಾದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಬೇಕು. ತೆಲಂಗಾಣ ಸರಕಾರ ಕೂಡಾ ಸಿಬಿಐ ತನಿಖೆಗೆ ಕೈಜೋಡಿಸಬೇಕು ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚಂಗಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಕರ ಶೆಟ್ಟಿ ಹೃದಯ ಸಂಬಂಧಿ ರೋಗಕ್ಕೆ ಒಳಗಾಗಿ ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಅವರಿಗೆ 36 ಗಂಟೆಗಳ ಕಾಲ ಅವರ ಅನಾರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆ ನೀಡಲಿಲ್ಲ. ಬದಲಾಗಿ ಎಚ್1ಎನ್1ಗೆ ಚಿಕಿತ್ಸೆ ನೀಡಲಾಗಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರವು ಐವರು ತಜ್ಞರ ಸಮಿತಿಯೊಂದನ್ನು ನೇಮಿಸಿ ಮಧುಕರ ಶೆಟ್ಟಿಗೆ ನೀಡಲಾದ ಚಿಕಿತ್ಸೆಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಸೂಚಿಸಿದೆ.

ಡಾ.ದೇವಿಪ್ರಸಾದ್ ಶೆಟ್ಟಿ ಹಾಗೂ ಡಾ.ಪಿ.ಜಿ.ಗಿರೀಶ್ ಅವರನ್ನೊಳಗೊಂಡ ಸಮಿತಿ ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದೆ ಎಂದವು ಹೇಳಿದರು.

ರಾಜ್ಯದ ಪ್ರತಿಷ್ಠಿತ ಪೊಲೀಸ್ ತರಬೇತಿ ಸಂಸ್ಥೆಯೊಂದಕ್ಕೆ ಮಧುಕರ ಶೆಟ್ಟಿ ಸ್ಮರಣಾರ್ಥ ಅವರ ಹೆಸರಿನಲ್ಲಿ ‘ಡಾ.ಮಧುಕರ ಶೆಟ್ಟಿ ಪೊಲೀಸ್ ತರಬೇತಿ ಕೇಂದ್ರ’ ಎಂದು ನಾಮಕರಣ ಮಾಡಲಾಗುವುದು ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದರು. ಈ ವಿಚಾರವನ್ನು ಕಾರ್ಯರೂಪಕ್ಕೆ ತರಬೇಕು. ಮಧುಕರ ಶೆಟ್ಟಿ ತಮ್ಮ ಪೊಲೀಸ್ ಇಲಾಖೆ ಸೇವೆಯ ಸಂದರ್ಭ ಪ್ರತಿಪಾದಿಸಿದ ಮೌಲ್ಯಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಮತ್ತು ಮುಂದಿನ ಪೀಳಿಗೆಗೆ ಅವರು ಪ್ರತಿಪಾದಿಸಿದ ಮೌಲ್ಯವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಅವರ ಸ್ಮರಣಾರ್ಥ ಶಾಶ್ವತ ಕಾರ್ಯಕ್ರಮ ರೂಪಿಸಬೇಕು ಎಂದು ಚಂಗಪ್ಪ ಸರಕಾರವನ್ನು ಒತ್ತಾಯಿಸಿದರು.

ವಕೀಲರಾದ ಕಿಶೋರ್ ಡಿ., ಪ್ರಮೋದ್ ಕುಮಾರ್, ವಿಜಯ್ ಮಹಂತೇಶ್ ಹಿರೇಮಠ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X