Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜಕ್ಕೆ ಒಳಿತು ತರುವ ಬದಲಾವಣೆ ಮಾಧ್ಯಮ...

ಸಮಾಜಕ್ಕೆ ಒಳಿತು ತರುವ ಬದಲಾವಣೆ ಮಾಧ್ಯಮ ರಂಗದಲ್ಲಿ ಆಗಲಿ: ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ8 May 2019 6:16 PM IST
share
ಸಮಾಜಕ್ಕೆ ಒಳಿತು ತರುವ ಬದಲಾವಣೆ ಮಾಧ್ಯಮ ರಂಗದಲ್ಲಿ ಆಗಲಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ಮೇ 8: ಎಲ್ಲ ರಂಗಗಳಂತೆ ಮಾಧ್ಯಮ ರಂಗವೂ ಬದಲಾಗುತ್ತಿದೆ. ಕೇವಲ ಪತ್ರಿಕೆಗಳು ಇದ್ದ ಕಾಲವಿತ್ತು. ನಂತರ ಎಲೆಕ್ಟ್ರಾನಿಕ್ ಮೀಡಿಯಾ ಹಾಗೂ ಈಗ ಡಿಜಿಟಲ್ ಮೀಡಿಯಾ ಯುಗ ಬಂದಿದೆ. ಈ ಬದಲಾವಣೆಯು ಸಮಾಜಕ್ಕೆ ಒಳಿತನ್ನು ತರುವ ಬದಲಾವಣೆ ಆಗಲಿ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಆಶಿಸಿದ್ದಾರೆ.

ನಗರದಲ್ಲಿಂದು ಪ್ರಗತಿ ಮೀಡಿಯಾ ಹೌಸ್ ಹಾಗೂ ಇನ್ಸ್‌ಪೈಯರ್ ಕರಿಯರ್ ಇನ್ಸ್‌ಟಿಟ್ಯೂಟ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿಡಿದ ಅವರು, ಒಂದು ಕಾಲದಲ್ಲಿ ಸುದ್ದಿಗಾಗಿ ಕೇವಲ ಪಿಟಿಐ ಹಾಗೂ ಯುಎನ್‌ಐ ಸುದ್ದಿ ಸಂಸ್ಥೆಗಳನ್ನು ಅವಲಂಬಿಸಬೇಕಿತ್ತು. ಆದರೆ ಈಗ ಜಗತ್ತು ಚಿಕ್ಕದಾಗಿದ್ದು ಯಾವುದೇ ಸುದ್ದಿಯಾದರೂ ಕ್ಷಣಾರ್ಧದಲ್ಲಿ ಜನರಿಗೆ ತಲುಪುವಂತಾಗಿದೆ ಎಂದರು.

ಈ ತಾಂತ್ರಿಕತೆಯು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ. ಈ ಭಾಗದ ಜ್ವಲಂತ ಸಮಸ್ಯೆಗಳಾದ ಮಹಾದಾಯಿ, ಕೃಷ್ಣಾ ಸಮಸ್ಯೆ ಸೇರಿದಂತೆ ಇನ್ನುಳಿದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಡಿಜಿಟಲ್ ಮೀಡಿಯಾ ಮುಂದಾಗಲಿ ಎಂದು ಅವರು ನುಡಿದರು.

ಸಂಸದ ಸುರೇಶ್ ಅಂಗಡಿ ಮಾತನಾಡಿ, ಬೆಳಗಾವಿಯು ಐದು ಭಾಷೆಗಳನ್ನಾಡುವ ಜನರ ಸಾಂಸ್ಕೃತಿಕ ಸಂಗಮದ ಜಿಲ್ಲೆಯಾಗಿದೆ. ಬೆಳಗಾವಿಯನ್ನು ಗಡಿನಾಡು ಎಂದು ಸಂಬೋಧಿಸುವ ಪರಿಪಾಠವನ್ನು ತಪ್ಪಿಸಬೇಕಿದೆ. ಬೆಳಗಾವಿ ದಕ್ಷಿಣ ಭಾರತದ ಹೆಬ್ಬಾಗಿಲು. ಹಾಗೆಯೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಪ್ರತ್ಯೇಕಿಸುವ ಹಾಗೂ ಇಲ್ಲಿನ ನಾಯಕರನ್ನು ಉತ್ತರ ಕರ್ನಾಟಕಕ್ಕೆ ಸೀಮಿತಗೊಳಿಸುವುದನ್ನು ನಿಲ್ಲಿಸಬೇಕಿದೆ ಎಂದರು.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ನಾನು 20 ವರ್ಷಗಳಲ್ಲಿ ಖಾನಾಪುರದಿಂದ ರಾಜ್ಯಮಟ್ಟದ ರಾಜಕಾರಣಿಯಾಗಿ ಬೆಳೆಯಲು ಮಾಧ್ಯಮದ ಪಾತ್ರ ಬಹು ದೊಡ್ಡದು. ನಮ್ಮ ವಿಚಾರಗಳನ್ನು ಜನರಿಗೆ ತಿಳಿಸಲು, ನಮ್ಮ ಬಗ್ಗೆ ಅಭಿಪ್ರಾಯ ಮೂಡಿಸಲು ಮಾಧ್ಯಮಗಳು ಮುಖ್ಯ ಪಾತ್ರ ವಹಿಸುತ್ತವೆ. ಹಾಗೆಯೇ ನಾವು ತಪ್ಪು ಮಾಡಿದಾಗ ಅದನ್ನು ಎತ್ತಿ ತೋರಿಸಿ ತಿದ್ದಿಕೊಳ್ಳಲು ಸಹಾಯ ಮಾಡುತ್ತವೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಗತಿ ಮೀಡಿಯಾ ಹೌಸ್ ಮುಖ್ಯಸ್ಥ ಎಂ.ಕೆ. ಹೆಗಡೆ, ಇಂದು ಸುದ್ದಿ ಮಾಧ್ಯಮವು ಸಿಬ್ಬಂದಿ ಕೊರತೆ, ಸಮಯದ ಅಭಾವ, ಅನುಭವದ ಸಿಬ್ಬಂದಿ ಕೊರತೆಯಂತಹ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ಧಪಡಿಸಿದ ಗುಣಮಟ್ಟದ ಸುದ್ದಿಯನ್ನು ಮಾಧ್ಯಮಗಳಿಗೆ ತಲುಪಿಸಲು ಪ್ರಗತಿ ಮೀಡಿಯಾ ಹೌಸ್ ಶ್ರಮಿಸಲಿದೆ. ಸಮಾಜ ಹಾಗೂ ಮಾಧ್ಯಮ ಎರಡಕ್ಕೂ ಸಹಾಯಕವಾಗುವ ರೀತಿಯಲ್ಲಿ ಮೀಡಿಯಾ ಹೌಸ್ ಕೆಲಸ ಮಾಡಲಿದೆ ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಲಂಕೇಶ್ ಪತ್ರಿಕೆ ಒಂದು ಕಾಲದಲ್ಲಿ ಇಡೀ ರಾಜಕೀಯ ವ್ಯವಸ್ಥೆಯನ್ನೆ ಬದಲಾವಣೆ ಮಾಡಿತ್ತು. ಅಂತಹ ಶಕ್ತಿ ಮಾಧ್ಯಮಗಳಿಗೆ ಇದೆ. ಅದೇ ರೀತಿ ಈಗಲೂ ಮಾಧ್ಯಮಗಳು ಕೆಲಸ ಮಾಡಬೇಕಿದೆ.

-ಮಹಾಂತೇಶ್ ಕವಟಗಿಮಠ, ವಿಧಾನಪರಿಷತ್ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X