Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಮಾರ್ಟ್‌ಸಿಟಿಯಡಿ ಸ್ಮಾರ್ಟ್‌ರಸ್ತೆ...

ಸ್ಮಾರ್ಟ್‌ಸಿಟಿಯಡಿ ಸ್ಮಾರ್ಟ್‌ರಸ್ತೆ ನಿರ್ಮಿಸಿ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಮಾರ್ಟ್‌ಸಿಟಿ ಸಭೆ

ವಾರ್ತಾಭಾರತಿವಾರ್ತಾಭಾರತಿ9 May 2019 6:16 PM IST
share
ಸ್ಮಾರ್ಟ್‌ಸಿಟಿಯಡಿ ಸ್ಮಾರ್ಟ್‌ರಸ್ತೆ ನಿರ್ಮಿಸಿ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಮಂಗಳೂರು, ಮೇ 9: ಸ್ಮಾರ್ಟ್‌ಸಿಟಿ ಯೋಜನೆಯಡಿ ಏಳು ಪ್ಯಾಕೇಜ್‌ಗಳಲ್ಲಿ ನಗರ ವ್ಯಾಪ್ತಿ ಮೂಲಸೌಕರ್ಯ ಅಭಿವೃದ್ಧಿ ಜತೆ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ವಿನೂತನವಾಗಿ ಚಿಂತಿಸಿ ಕಾರ್ಯಾನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸ್ಮಾರ್ಟ್‌ಸಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ನಿರ್ಮಾಣದ ಬಳಿಕ ರಸ್ತೆಗಳನ್ನು ಅಗೆಯಲು ಅವಕಾಶ ನೀಡದೆ, ಮುನ್ನವೇ ಮೆಸ್ಕಾಂ, ಕೆಯುಐಡಿಎಫ್‌ಸಿ ಮತ್ತು ಕೆಪಿಟಿಸಿಎಲ್, ನೀರು ಸರಬರಾಜು, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ನಿರ್ಮಾಣಗೊಳ್ಳುವ ಪ್ರದೇಶಗಳಲ್ಲಿ ತಮ್ಮ ಇಲಾಖಾ ವ್ಯಾಪ್ತಿಯ ಕಾಮಗಾರಿಗಳಿದ್ದರೆ ಮೊದಲೇ ಪರಿಶೀಲಿಸಬೇಕು ಎಂದು ಡಿಸಿ ಹೇಳಿದರು.

ಸ್ಮಾರ್ಟ್‌ಸಿಟಿ ಲಿಮಿಟೆಡ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಗ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಒಂದೇ ಕಾಮಗಾರಿಯನ್ನು ವಿವಿಧ ಸಂಸ್ಥೆಗಳು ಹಲವು ಬಾರಿ ಮಾಡುವುದು; ಕಾಮಗಾರಿ ಮುಗಿದ ಬಳಿಕ ಮತ್ತೆ ಅಗೆಯುವುದಕ್ಕೆ ಅವಕಾಶ ನೀಡದೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಸಮಗ್ರ ಅಭಿವೃದ್ಧಿಗೆ ನಿಮ್ಮ ಕೊಡುಗೆಯನ್ನು ನೀಡಬೇಕು ಎಂದರು.

ಮಂಗಳೂರು ಮಹಾನಗರ ಪಾಲಿಕೆಯಿಂದ ಮೇ ಅಂತ್ಯದೊಳಗೆ ಸಂಪೂರ್ಣಗೊಳಿಸುವ ರಸ್ತೆ ಕಾಮಗಾರಿಗಳನ್ನು ಸಮಯ ಮಿತಿಯೊಳಗೆ ಮುಗಿಸಿ, ಮುಂದಿನ ಸ್ಮಾರ್ಟ್‌ಸಿಟಿ ಸಭೆಗಿಂತ ಮುಂಚಿತವಾಗಿ ಅಂತರ್ ಇಲಾಖೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಹಾನಗರ ಪಾಲಿಕೆ ಅಭಿವೃದ್ಧಿ ಪಡಿಸಿದ ಹಾಗೂ ಪಡಿಸುತ್ತಿರುವ ಮಾಹಿತಿಯನ್ನು ಪಡೆದ ಜಿಲ್ಲಾಧಿಕಾರಿ, ಮಂಗಳಾದೇವಿ ರಸ್ತೆ, ಭವಂತಿ ರಸ್ತೆಯಲ್ಲಿರುವ ಬಾಕಿ ಇರಿಸಿರುವ ಕಾಮಗಾರಿಯನ್ನು ಟಿಡಿಆರ್ ಮೂಲಕ ಅಥವಾ ಮಾತುಕತೆ ಮೂಲಕ ಬಗೆಹರಿಸಿ ಸಂಪೂರ್ಣಗೊಳಿಸಲು ಸೂಚನೆ ನೀಡಿದರು.
ಕಂಕನಾಡಿ ಮಾರ್ಕೆಟ್ ಬಳಿ ಬಸ್ ನಿಲ್ಲಿಸುವ ಸಂಬಂಧ ಉಂಟಾಗಿರುವ ಸಮಸ್ಯೆಯನ್ನು ಆರ್‌ಟಿಒ ಮೂಲಕ ಬಗೆಹರಿಸಲು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

‘ಪಾದಾಚಾರಿ ಸುರಕ್ಷೆಗೆ ಆದ್ಯತೆ’
ರಸ್ತೆ ನಿರ್ಮಾಣಕ್ಕೆ ಮುನ್ನ ಬಿಎಸ್‌ಎನ್‌ಎಲ್, ಮೆಸ್ಕಾಂ ಇಂಜಿನಿಯರ್‌ಗಳು ತಮ್ಮ ಕೇಬಲ್‌ಗಳನ್ನು ಅಳವಡಿಸಲಿದೆ ಎಂಬ ಮಾಹಿತಿಯನ್ನು ಕೆಎಂಝಡ್ ಫಾರ್ಮಾಟ್‌ನಲ್ಲಿ ಸಲ್ಲಿಸಬೇಕು. ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುವ ರಸ್ತೆಗಳು ಜನಸ್ನೇಹಿಯಾಗಿರಬೇಕೇ ಹೊರತು ವಾಹನ ಸ್ನೇಹಿಯಾಗಿರಬಾರದು.
ಫುಟ್‌ಪಾತ್‌ಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡಬಾರದು. ಪಾದಾಚಾರಿ ಸುರಕ್ಷೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X