Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಕ್ಕೆ ಕುಡಿಯುವ ನೀರು...

ಉಡುಪಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ

ಸದ್ಯ ಆರು ದಿನಕ್ಕೊಮ್ಮೆ ನೀರು;ವಾರ್ಡಿಗೆ ನೋಡೆಲ್ ಸಿಬ್ಬಂದಿ ನೇಮಕ

ವಾರ್ತಾಭಾರತಿವಾರ್ತಾಭಾರತಿ9 May 2019 7:42 PM IST
share

ಉಡುಪಿ, ಮೇ 9: ಉಡುಪಿ ನಗರಸಭೆಗೆ ಕುಡಿಯುವ ನೀರು ಪೂರೈಸುವ ಬಜೆ ಅಣೆಕಟ್ಟಿನಲ್ಲಿ ನೀರು ಸಂಪೂರ್ಣ ಖಾಲಿಯಾಗಿರುವುದರಿಂದ ಬಜೆ ಅಣೆಕಟ್ಟು ಮತ್ತು ಶೀರೂರು ಅಣೆಕಟ್ಟಿನ ನಡುವೆ ಇರುವ ದೊಡ್ಡ ಹೊಂಡಗಳಲ್ಲಿ ಶೇಖರಣೆಗೊಂಡಿರುವ ನೀರನ್ನು ಡ್ರೆಡ್ಜಿಂಗ್ ಮೂಲಕ ಜಾಕ್‌ವೆಲ್‌ಗೆ ಹಾಯಿಸಿ ಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ಹಿಂದಿನಂತೆ ಮೂರು ದಿವಸಗಳಿಗೊಮ್ಮೆ ನೀರು ಸರಬರಾಜು ಮಾಡುವ ಪ್ರಮಾಣದಲ್ಲಿ ನೀರು ದೊರಕುತ್ತಿಲ್ಲವಾದ್ದರಿಂದ, ನಗರವನ್ನು ಆರು ವಿಭಾಗಗಳಾಗಿ ವಿಂಗಡಿಸಿ ಪ್ರತಿ ದಿನ ಒಂದೊಂದು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಉಡುಪಿ ನಗರಸಭೆಯ ಆಡಳಿತಾಧಿಕಾರಿಯಾಗಿರುವ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಉಡುಪಿ ನಗರಸಭೆಯ 35 ವಾರ್ಡ್‌ಗಳಿಗೆ ಕುಡಿಯುವ ನೀರಿನ ಸರಬರಾಜಿಗೆ ಸಂಬಂಧಿಸಿ 35 ಮಂದಿ ಸಿಬ್ಬಂದಿಗಳನ್ನು ನೋಡಲ್ ಸಿಬ್ಬಂದಿ ಯಾಗಿ ನೇಮಿಸಿದ್ದು, ಸಾರ್ವಜನಿಕರು ಕುಡಿಯುವ ನೀರಿಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಆಯಾ ವಾರ್ಡಿನ ನೋಡಲ್ ಸಿಬ್ಬಂದಿಗೆ ತಿಳಿಸಬಹುದಾಗಿದೆ. ನೋಡಲ್ ಸಿಬ್ಬಂದಿ ಸಾರ್ವಜನಿಕ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅತೀ ಅಗತ್ಯವಾದ್ದಲ್ಲಿ ಟ್ಯಾಂಕರ್ ಮುಖಾಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಿದ್ದಾರೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಪಡಿತರ ಪದ್ದತಿಯಲ್ಲಿ ನೀರು ವಿತರಣೆ ಮಾಡುತ್ತಿ ರುವುದರಿಂದ ಒಂದು ಮನೆಗೆ ಒಂದು ಸಾವಿರ ಲೀಟರ್ ನೀರನ್ನು ಸರಬರಾಜು ಮಾಡಲಾಗುವುದು.ಸಾರ್ವಜನಿಕರು ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡಲು ಬಂದ ಟ್ಯಾಂಕರ್ ಟ್ರಿಪ್‌ಶೀಟ್‌ನ ವಿವರವನ್ನು ಭರ್ತಿ ಮಾಡಿ ಕಡ್ಡಾಯವಾಗಿ ಸಹಿ ಮಾಡಬೇಕು.ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹಳೆಯ ಬೋರ್ ವೆಲ್ ಹಾಗೂ ತೆರದ ಬಾವಿಗಳ ಪುನಶ್ಚೇತನ ಮತ್ತು ಮಣ್ಣಪಳ್ಳ ಕೆರೆಯಲ್ಲಿ ತುಂಬಿರಬಹುದಾದ ಹೂಳನ್ನು ತೆಗೆಸುವುದಕ್ಕೆ ಪ್ರಸ್ತಾವನೆ ತಯಾರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಜೆಯಲ್ಲಿರುವ ಕುಡಿಯುವ ನೀರಿನ ಅಣೆಕಟ್ಟಿನಲ್ಲಿ ಶೇಖರಣೆಗೊಂಡಿರುವ ಹೂಳು ತೆಗೆಯುವುದಕ್ಕೆ ಟೆಂಡರ್ ಕರೆಯಲು ಸೂಚಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ದೊಡ್ಡ ತೋಡುಗಳ (ರಾಜಕಾಲುವೆ) ಹೂಳು ತೆಗೆಯುವ ಬಗ್ಗೆ ಸರ್ವೇ ನಡೆಸಿ ಅಂದಾಜು ಪಟ್ಟಿ ತಯಾರಿಸಿ ಟೆಂಡರ್ ಕರೆಯಲು ಸೂಚಿಸಲಾಗಿದೆ. ಅದೇ ರೀತಿ ಬಜೆ ಅಣೆಕಟ್ಟಿನ ಗೇಟುಗಳ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಉಡುಪಿ ನಗರಕ್ಕೆ ಕುಡಿಯುವ ನೀರಿನ ಅಭಾವ ನೀಗಿಸಲು ಸರಕಾರದಿಂದ ಬಿಡುಗಡೆಯಾದ 25 ಲಕ್ಷ ರೂ. ಹಾಗೂ ಕಳೆದ ವರ್ಷದ ಉಳಿಕೆ ಅನುದಾನ ದಲ್ಲಿ ತುರ್ತು ಕ್ರಮ ಕೈಗೊಳ್ಳಲು ಕಾರ್ಯಪಡೆ ಸೂಚಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಅಭಾವ ತೀವ್ರವಾಗಿರುವುದರಿಂದ ನೀರನ್ನು ದುರುಪಯೋಗ ಪಡಿಸಿಕೊಳ್ಳದೇ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಶೇಷ ಸೂಚನೆ
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮನೆಗಳಿಗೆ ನಗರಸಭೆಯ ವಿತರಣಾ ಜಾಲದಿಂದ ನೀರು ಪೂರೈಕೆಯಾದ ದಿನದಿಂದ ಮೂರು ದಿನಗಳ ನಂತರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಇಂದು ಕರಂಬಳ್ಳಿ, ಅಂಬಾಗಿಲು, ನಿಟ್ಟೂರು, ಗುಂಡಿಬೈಲು ಮುಂತಾದ ವಾರ್ಡುಗಳಿಗೆ ನೀರು ಸರಬರಾಜು ಆದ ಬಗ್ಗೆ ಮಾಹಿತಿಗಳು ಬಂದಿದ್ದು, ಮಣಿಪಾಲಕ್ಕೆ ನೀರು ಬಂದಿಲ್ಲ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X