Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ಪಕೋಡ ಮಾರಾಟವೇ ಲಭ್ಯವಿರುವ ಉದ್ಯೋಗ:...

ಈಗ ಪಕೋಡ ಮಾರಾಟವೇ ಲಭ್ಯವಿರುವ ಉದ್ಯೋಗ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ9 May 2019 9:50 PM IST
share
ಈಗ ಪಕೋಡ ಮಾರಾಟವೇ ಲಭ್ಯವಿರುವ ಉದ್ಯೋಗ: ರಾಹುಲ್ ಗಾಂಧಿ

ಸಿರ್ಸಾ, ಮೇ 9: ನಿರುದ್ಯೋಗದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈಗ ಪಕೋಡ ಮಾರಾಟವೇ ಲಭ್ಯವಿರುವ ಉದ್ಯೋಗ ಎಂದು ವ್ಯಂಗ್ಯವಾಡಿದ್ದಾರೆ.

ಇಲ್ಲಿ ಗುರುವಾರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ನಿರುದ್ಯೋಗ ಕಳೆದ 45 ವರ್ಷಗಳಲ್ಲೇ ಈಗ ಅತ್ಯಧಿಕ ಇದೆ. ಇದು ಮೋದಿ ಅವರ ಕೊಡುಗೆ ಎಂದರು.

 ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸ್ಥಾಪಿಸಿದ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ ರಾಹುಲ್ ಗಾಂಧಿ, ಮೋದಿ ಅವರು ಆರಂಭದಲ್ಲಿ ಮೇಕ್ ಇನ್ ಇಂಡಿಯಾ, ಸ್ಮಾರ್ಟ್ ಅಪ್ ಇಂಡಿಯಾ ಯೋಜನೆ ಆರಂಭಿಸಿದರು, ಅನಂತರ ಸ್ಟಾಂಡ್ ಅಪ್ ಇಂಡಿಯಾ ಆರಂಭಿಸಿದರು. ಪಕೋಡದ ಮೂಲಕ ಕೊನೆಗೊಳಿಸಿದರು ಎಂದರು.

ಅವರು ಎಲ್ಲೆಲ್ಲಿ ಹೋಗುತ್ತಾರೋ, ಅಲ್ಲಿ ದ್ವೇಷ ಹರಡುತ್ತಾರೆ. ಹರ್ಯಾಣದಲ್ಲಿ ಎರಡು ಸಮುದಾಯದ ನಡುವೆ ಸಂಘರ್ಷ ಹುಟ್ಟು ಹಾಕುತ್ತಾರೆ. ತಮಿಳುನಾಡಿಗೆ ಹೋದರೆ, ಕೆಲವರನ್ನು ಟೀಕಿಸುತ್ತಾರೆ. ಮಹಾರಾಷ್ಟ್ರಕ್ಕೆ ಹೋದರೆ ಉತ್ತರಪ್ರದೇಶ, ಬಿಹಾರದ ಜನರ ವಿರುದ್ಧ ಮಾತನಾಡುತ್ತಾರೆ. ಒಂದು ಧರ್ಮದ ಜನರು ಇನ್ನೊಂದು ಧರ್ಮದ ಜನರೊಂದಿಗೆ ಸಂಘರ್ಷಕ್ಕಿಳಿಯುವಂತೆ ಮಾಡುತ್ತಾರೆ. ಇದರಿಂದ ನೀವು ಏನನ್ನು ಸಾಧಿಸುತ್ತೀರಿ ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ನೀವು ಏನು ಸಾಧನೆ ಮಾಡಿದ್ದೀರಿ ? ದೇಶಕ್ಕೆ ನೀವೇನು ನೀಡಿದ್ದೀರಿ ಎಂದು ನಾನು ಕೇಳಲು ಬಯಸುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದರು. ಪಕ್ಷ ಭರವಸೆ ನೀಡಿರುವ ಕನಿಷ್ಠ ಆದಾಯ ಖಾತರಿ ಯೋಜನೆ ನ್ಯಾಯ್‌ದಿಂದ ಮಧ್ಯಮ ವರ್ಗದವರಿಗೆ ಯಾವುದೇ ಹೊರೆ ಆಗದು. ದೇಶದ ಕಡು ಬಡ ಜನರಿಗೆ ವಾರ್ಷಿಕವಾಗಿ 72 ಸಾವಿರ ರೂಪಾಯಿ ಭರವಸೆಯನ್ನು ಈ ಯೋಜನೆ ನೀಡಿದೆ ಎಂದು ರಾಹುಲ್ ಗಾಂಧಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X