ಶೈಕ್ಷಣಿಕ ಸಾಲ ಮಂಜೂರಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 9: 2019-20ನೆ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ 1 ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಮತು ಪ್ರವರ್ಗ-3ಬಿ ಗೆ ಸೇರಿದ್ದು (ವಿಶ್ವಕರ್ಮ ಮತ್ತು ಉಪ ಜಾತಿಗಳು, ಅಲ್ಪಸಂಖ್ಯಾತರು ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ. ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಈ ಕೆಳಕಂಡ ಷರತ್ತು ಮತ್ತು ನಿಬಂಧನೆಗೊಳಪಟ್ಟು ಆನ್-ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‌ಸೈಟ್ www.karnataka.gov.in/dbcdc ರಲ್ಲಿ ಲಾಗಿನ್ ಆಗಿ ವೆಬ್‌ಸೈಟ್‌ನಲ್ಲಿ ಲಭ್ಯವಿರುವ Username-arivu-arivu ಮತ್ತುpassward-arivu@123 ನ್ನು ನಮೂದಿಸಿ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡುವುದು. ಅರ್ಜಿಯೊಂದಿಗೆ ಆನ್‌ಲೈನ್‌ನಲ್ಲಿ ಮೇ 24 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.







