ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಅದಕ್ಕೆ ರಾಹುಲ್ ಗಾಂಧಿ ಕಾರಣ: ಕೇಜ್ರಿವಾಲ್

ಹೊಸದಿಲ್ಲಿ, ಮೇ 10: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬಂದರೆ ಅದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರಣರಾಗುತ್ತಾರೆ ಎಂದು ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಿಂದಾಗಿ ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟಕ್ಕೆ ಹಾನಿಯಾಗಿದೆ. ಕೇರಳದಲ್ಲಿ ಎಡರಂಗ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ದಿಲ್ಲಿಯಲ್ಲಿ ಎಎಪಿಗೆ ಹಾನಿಯಾಗಿದೆ. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡುತ್ತಿಲ್ಲ. ವಿಪಕ್ಷಗಳ ಜೊತೆ ಹೋರಾಡುತ್ತಿದೆ ಎಂದು ಆರೋಪಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲ ಕ್ಷೇತ್ರಗಳಲ್ಲಿ ವಿಫಲರಾಗಿದ್ದಾರೆ. ಅವರದ್ದು ನಕಲಿ ರಾಷ್ಟ್ರೀಯತೆ. ಇದು ದೇಶಕ್ಕೆ ಅಪಾಯಕಾರಿ ಎಂದು ನುಡಿದರು.
Next Story





