Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ನಿಯಮ ಉಲ್ಲಂಘಿಸಿ ಸಂಚರಿಸುವ ಸರಕು...

'ನಿಯಮ ಉಲ್ಲಂಘಿಸಿ ಸಂಚರಿಸುವ ಸರಕು ಸಾಗಾಟದ ವಾಹನಗಳ ವಿರುದ್ಧ ಕ್ರಮ'

ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಆಯುಕ್ತ ಸಂದೀಪ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 May 2019 6:11 PM IST
share
ನಿಯಮ ಉಲ್ಲಂಘಿಸಿ ಸಂಚರಿಸುವ ಸರಕು ಸಾಗಾಟದ ವಾಹನಗಳ ವಿರುದ್ಧ ಕ್ರಮ

ಮಂಗಳೂರು, ಮೇ 10: ನಗರದ ಹಲವು ಕಡೆಗಳಲ್ಲಿ ಸಂಚರಿಸುವ ಮರಳು, ಯೂರಿಯಾ, ಸಲ್ಫರ್ ಹಾಗೂ ಸಿಮೆಂಟ್ ಸಾಗಾಟದ ಲಾರಿಗಳಿಗೆ ಟರ್ಪಾಲು ಮುಚ್ಚಲಾಗುತ್ತಿಲ್ಲ. ಇದರಿಂದಾಗಿ ರಸ್ತೆಯಲ್ಲಿ ಇತರೆ ವಾಹನ ಸವಾರರು ಹಾಗೂ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗು ತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನಿಯಮ ಉಲ್ಲಂಘಿಸಿ ಸಂಚರಿಸುವ ಇಂತಹ ವಾಹನಗಳ ವಿರುದ್ಧ ಸೂಕ್ತ ಕ್ರಮ ಜರುಗಿ ಸಲಾಗುವುದು ಎಂದು ಪೊಲೀಸ್ ಸಂದೀಪ್ ಪಾಟೀಲ್ ಹೇಳಿದರು.

ಸರಕು ಸಾಗಾಟದ ವಾಹನಗಳು ಟರ್ಪಾಲ್ ಮುಚ್ಚದೆ ಸಂಚರಿಸುವುದರಿಂದ ಆ ವಾಹನಗಳ ಹಿಂದಿರುವ ಇತರ ವಾಹನಿಗರು, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಸುರತ್ಕಲ್‌ನ ನಾಗರಿಕರೊಬ್ಬರು ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್ ಫೋನ್ ಇನ್ ಕಾರ್ಯ ಕ್ರಮದಲ್ಲಿ ದೂರಿಕೊಂಡ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಸಂದೀಪ್ ಪಾಟೀಲ್ ಟರ್ಪಾಲು ಮುಚ್ಚದೆ ಮರಳು, ಸಿಮೆಂಟ್, ಯೂರಿಯಾ, ಸಲ್ಫರ್ ಸಾಗಾಟ ಮಾಡುವ ಲಾರಿಗಳು ಮತ್ತು ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲುತ್ತಾ ಸಾಗುತ್ತಿರುವ ಮೀನು ಸಾಗಾಟದ ಲಾರಿಗಳ ವಿರುದ್ಧ ಕಾರ್ಯಾ ಚರಣೆಯ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಮೀನು ಲಾರಿಗಳ ಉಪಟಳ: ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲುತ್ತಾ ಸಾಗುತ್ತಿರುವ ಮೀನು ಸಾಗಾಟ ಲಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವುಗಳ ಸಂಚಾರಕ್ಕೆ ರಾತ್ರಿ ಸಮಯವನ್ನು ನಿಗದಿಪಡಿಸಬೇಕು. ಸಣ್ಣ ಲಾರಿಗಳ ಬದಲು ಕಂಟೈನರ್ ಮೂಲಕ ತ್ಯಾಜ್ಯ ನೀರು ಸೋರಿಕೆ ಯಾಗದಂತೆ ಮೀನು ಸಾಗಾಟ ಮಾಡಲು ಸೂಚನೆ ನೀಡಬೇಕು ಎಂದು ನಾಗರಿಕರೊಬ್ಬರು ಸಲಹೆ ನೀಡಿದರು.

ಇದಕ್ಕೆ ಉತ್ತರಿಸಿದ ಕಮಿಷನರ್ ಸಂದೀಪ್ ಪಾಟೀಲ್ ಕೇರಳದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುತ್ತಿದೆ. ಅದೇ ರೀತಿ ಇಲ್ಲಿ ಕೂಡ ಮೀನು ತಾಜ್ಯ ಸೋರಿಕೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಲಾರಿ ಮಾಲಕರಿಗೆ ನೋಟಿಸ್ ಜಾರಿಗೊಳಿಸಿ ಒಂದು ತಿಂಗಳ ಗಡುವು ವಿಧಿಸಲಾಗಿದೆ. ಈಗಾಗಲೇ 8 ಮೀನು ಸಾಗಾಟ ಲಾರಿಗಳ ವಿರುದ್ಧ ಕೇಸು ದಾಖಲಿಸಿದ್ದು, ಇಂದು ಮತ್ತೆ 5 ಲಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಫುಟ್‌ಪಾತ್‌ನಲ್ಲೇ ಪಾರ್ಕಿಂಗ್: ನಗರದ ಕೊಟ್ಟಾರ ಚೌಕಿಯಲ್ಲಿ ರಸ್ತೆಯಲ್ಲೇ ಬಸ್‌ಗಳನ್ನು ನಿಲ್ಲಿಸುತ್ತಾರೆ, ಬೈಕಂಪಾಡಿ-ಚಿತ್ರಾಪುರ ರಸ್ತೆ, ಮೀನು ಮಾರುಕಟ್ಟೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಹಿಂಭಾಗ, ಮಂಗಳಾ ಸ್ಟೇಡಿಯಂ ಬಳಿ ಫುಟ್‌ಪಾತ್‌ನಲ್ಲೇ ದ್ವಿಚಕ್ರ ವಾಹನ ಪಾರ್ಕಿಂಗ್, ಹೂವು ಮಾರಾಟ ನಡೆಯುತ್ತಿದೆ. ಇದರಿಂದಾಗಿ ಪಾದಚಾರಿಗಳ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಇವುಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದರು. ಈ ಬಗ್ಗೆ ಸಂಚಾರ ಪೊಲೀಸರಿಂದ ಕ್ರಮ ಕೈಗೊಳ್ಳುವುದಾಗಿ ಕಮಿಷನರ್ ತಿಳಿಸಿದರು.

ಅಂಡರ್‌ಪಾಸ್‌ಗೆ ಬೆಳಕು ಬೇಕು: ನಗರದ ಪಡೀಲ್‌ನಲ್ಲಿ ರೈಲ್ವೆ ಕೆಳಸೇತುವೆ ಹಗಲು ಹೊತ್ತಿನಲ್ಲಿ ಕತ್ತಲಿನಿಂದ ಕೂಡಿರುತ್ತದೆ. ಅಲ್ಲಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ವಾಹನಗಳು ಮಿತಿಮೀರಿದ ವೇಗದಿಂದ ಸಂಚರಿಸುತ್ತವೆ. ಇದಕ್ಕೆ ಕಡಿವಾಣ ಹಾಕಲು ವೇಗ ತಡೆಯನ್ನು ಅಳವಡಿಸಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದರು.

ನಗರ ಸಾರಿಗೆ ಸಮಸ್ಯೆ: ಸ್ಟೇಟ್‌ಬ್ಯಾಂಕ್, ನಂತೂರು, ಬಿಕರ್ನಕಟ್ಟೆ ನಡುವೆ ಸರಿಯಾಗಿ ಬಸ್ ಸೌಲಭ್ಯ ಇಲ್ಲ. ಇಲ್ಲಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಬೇಕು. ಮುಲ್ಕಿ-ಕಾರ್ನಾಡ್ ಮಧ್ಯೆ ಬಸ್ ಸಂಚಾರ ಇಲ್ಲ. ಇಲ್ಲಿನ ಬೈಪಾಸ್ ತಿರುವಿನಲ್ಲಿ ಪದೇ ಪದೇ ಅಪಘಾತಗಳಾಗುತ್ತಿವೆ ಎಂದು ದೂರುಗಳೂ ಕೇಳಿ ಬಂತು.

ಮುಡಿಪು-ದೇರಳಕಟ್ಟೆಯಿಂದ ಮಂಗಳೂರಿಗೆ ಆಗಮಿಸುವ ಬಸ್‌ಗಳು ಪಂಪ್‌ವೆಲ್, ಕಂಕನಾಡಿಯವರೆಗೆ ಮಾತ್ರ ಪರವಾನಗಿಯನ್ನು ಹೊಂದಿರು ತ್ತವೆ. ಆದರೆ ಬಸ್ ನಿರ್ವಾಹಕರು ಸ್ಟೇಟ್‌ಬ್ಯಾಂಕ್ ಎಂದು ಕರೆದು ಹತ್ತಿಸಿಕೊಳ್ಳುತ್ತಾರೆ. ಬಳಿಕ ಪಂಪ್‌ವೆಲ್‌ನಲ್ಲಿ ಬೇರೆ ಬಸ್‌ಗೆ ಕಳುಹಿಸುತ್ತಾರೆ. ಇದರಿಂದಾಗಿ ರೋಗಿಗಳು ಸೇರಿದಂತೆ ವೃದ್ಧರು, ಮಹಿಳೆಯರಿಗೆ ಪಂಪ್‌ವೆಲ್‌ನಲ್ಲಿ ಇನ್ನೊಂದು ಬಸ್ ಬದಲಾಯಿಸುವ ತೊಂದರೆ ಎದುರಾ ಗುತ್ತದೆ. ಈ ಸಮಸ್ಯೆ ಕಳೆದ 10 ವರ್ಷದಿಂದ ನಿರಂತರವಾಗಿ ನಡೆಯುತ್ತಿದೆ. ಇದನ್ನು ಸರಿಪಡಿಸುವಂತೆ ದೇರಳಕಟ್ಟೆ ನಿವಾಸಿಯೊಬ್ಬರು ಆಗ್ರಹಿಸಿದರು.

ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಮಿಷನರ್ ಭರವಸೆ ನೀಡಿದರು. ಡಿಸಿಪಿಗಳಾದ ಹನುಮಮಂತರಾಯ, ಲಕ್ಷ್ಮೀ ಗಣೇಶ್ ಉಪಸ್ಥಿತರಿದ್ದರು.

ನಗರದ ಶಾಲಾ ಕಾಲೇಜುಗಳಲ್ಲಿ ಫಸ್ಟ್ ಕ್ಲಾಸ್‌ನಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಉಳಿದ ವಿದ್ಯಾರ್ಥಿಗಳನ್ನು ಕಡೆಗಣಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸುವಂತೆ ವ್ಯಕ್ತಿಯೊಬ್ಬರು ಆಗ್ರಹಿಸಿದರು.

ವಾಟ್ಸ್‌ಆ್ಯಪ್ ನಂಬರಿಗೆ ದೂರು ನೀಡಿ

ನಗರದ ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದರೂ ಕೂಡ ಖಾಸಗಿ ಬಸ್ ಚಾಲಕರು ಬಸ್ ಚಲಿಸುತ್ತಿರುವಾಗಲೇ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಪತ್ತೆಯಾಗದಿರುವುದು ವಿಪರ್ಯಾಸ. ಮೊಬೈಲ್‌ನಲ್ಲಿ ಮಾತನಾಡುವುದನ್ನು ಪ್ರಯಾಣಿಕರು ಫೋಟೋ ತೆಗೆದು ದೂರು ನೀಡಲು ಮುಂದಾದರೆ ಗಲಾಟೆಗೆ ಕಾರಣವಾಗುತ್ತದೆ. ಹಾಗಾಗಿ ಈ ಬಗ್ಗೆ ಸಂಚಾರ ಪೊಲೀಸರು ತೀವ್ರ ನಿಗಾ ವಹಿಸಬೇಕು ಎಂದು ಹಿರಿಯ ನಾಗರಿಕರೊಬ್ಬರು ದೂರಿದರು.

ಸಂಚಾರ ನಿಯಮ ಉಲ್ಲಂಘಿಸುವ ಬಸ್‌ಗಳ ರೂಟ್ ನಂಬರನ್ನು ಸಂಚಾರ ಪೊಲೀಸರ ವಾಟ್ಸ್‌ಆ್ಯಪ್ ನಂಬರ್‌ಗೆ (9480802300) ಮಾಹಿತಿ ನೀಡಬಹುದು. ಹೀಗೆ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿರಿಸಲಾಗುವುದು ಎಂದು ಕಮಿಷನರ್ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X