ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಸಿಎಂ ಕುಮಾರಸ್ವಾಮಿ ಪ್ರಚಾರ

ಬೆಂಗಳೂರು, ಮೇ 10: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಮೇ 19ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎರಡು ದಿನಗಳ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೇ 13ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮುಖ್ಯಮಂತ್ರಿ, ಕುಂದಗೋಳದಲ್ಲಿ ಆಯೋಜಿಸಲಾಗಿರುವ ಉಪ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 14ರಂದು ಕಲಬುರಗಿಗೆ ಭೇಟಿ ನೀಡಿ, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story