Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಕುಡಿಯುವ ನೀರು, ಉದ್ಯೋಗ ಒದಗಿಸಲು...

ಮಂಡ್ಯ: ಕುಡಿಯುವ ನೀರು, ಉದ್ಯೋಗ ಒದಗಿಸಲು ಜಿ.ಪಂ. ಸಿಇಓ ಸೂಚನೆ

ಇಓ, ಪಿಡಿಓ ಹಾಗೂ ಎಇಇ (ಆರ್.ಡಬ್ಲ್ಯೂ.ಎಸ್)ಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ10 May 2019 11:01 PM IST
share
ಮಂಡ್ಯ: ಕುಡಿಯುವ ನೀರು, ಉದ್ಯೋಗ ಒದಗಿಸಲು ಜಿ.ಪಂ. ಸಿಇಓ ಸೂಚನೆ

ಮಂಡ್ಯ, ಮೇ 10: ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಉದ್ಯೋಗ ಬೇಡಿಕೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಜಿಪಂ ಸಿಇಓ (ಪ್ರಭಾರ) ಎನ್.ಡಿ. ಪ್ರಕಾಶ್ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ನಡೆದ ಇಓ, ಪಿಡಿಓ ಹಾಗೂ ಎಇಇ (ಆರ್.ಡಬ್ಲ್ಯೂ.ಎಸ್)ಗಳ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಮತ್ತು ಉದ್ಯೋಗ ಬೇಡಿಕೆ ಸಂಬಂಧಿಸಿದಂತೆ ದೂರುಗಳು ಸ್ವೀಕೃತವಾಗದಂತೆ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದರು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮವಹಿಸಬೇಕು. ಇಓ, ಪಿಡಿಓ ಹಾಗೂ ಸಹಾಯಕ ಕಾರ್ಯಪಾಲಕ(ಎಇಇ) ಇಂಜಿನಿಯರ್ ಗಳು ಜಂಟಿಯಾಗಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮಕೈಗೊಂಡು ವಸ್ತುಸ್ಥಿತಿ ಅರಿಯಬೇಕು ಹಾಗೂ ಈ ಕುರಿತು ವರದಿ ಸಲ್ಲಿಸಬೇಕು ಎಂದರು.

ಕೈಪಂಪು ದುರಸ್ತಿ, ಟ್ಯಾಂಕರ್ ಮೂಲಕ ನೀರು ಸರಬರಾಜು, ಖಾಸಗಿ ಕೊಳವೆ ಬಾವಿಯಿಂದ ನೀರು ಪೂರೈಕೆ, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿ ಕೊರೆಯುವುದು ಸೇರಿದಂತೆ ಇನ್ನಿತರೆ ಪರಿಹಾರೋಪಾಯ ಕ್ರಮಗಳನ್ನು ಅನುಸರಿಸುವ ಮೂಲಕ ಕುಡಿಯುವ ನೀರು ಪೂರೈಕೆಗೆ ಪ್ರಥಮಾಧ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕೇಂದ್ರ ಸ್ಥಾನದಲ್ಲೇ ಇದ್ದು ಸಂಭವನೀಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು. ಬೇಸಿಗೆ ಮುಗಿಯುವವರೆಗೆ ಯಾವುದೇ ಅಧಿಕಾರಿಗಳು ತುರ್ತು ಸಂದರ್ಭ ಹೊರತುಪಡಿಸಿ ರಜೆ ಪಡೆಯುವಂತಿಲ್ಲ ಎಂದರು.

3.25 ಕೋಟಿ ಅನುದಾನ ಹಂಚಿಕೆ: ಆರ್.ಡಬ್ಲ್ಯೂ.ಎಸ್. ಎಇಇ ಬಿ.ಬಸವರಾಜು ಮಾತನಾಡಿ, ಮಂಡ್ಯ ಜಿಲ್ಲೆಗೆ ಸರಕಾರದಿಂದ ಟಾಸ್ಕ್ ಫೋರ್ಸ್ 3ನೇ ಹಂತದಲ್ಲಿ 325 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, 160 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಕುಡಿಯುವ ನೀರು ಸಮಸ್ಯೆಗಳು ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಬೇಸಗೆ ಸಮಯ ಆಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು ನೈರ್ಮಲ್ಯಕ್ಕೆ ಒತ್ತು ನೀಡಬೇಕು. ಕಿರು ನೀರು ಸರಬರಾಜು ಸ್ಥಾವರಗಳು, ಓವರ್ ಹೆಡ್ ಟ್ಯಾಂಕ್, ಚರಂಡಿ ಶುಚಿಗೊಳಿಸಬೇಕು. ಪೈಪ್ ಲೈನ್‍ಗಳಲ್ಲಿ ನೀರು ಸೋರಿಕೆ ಆಗದಂತೆ ದುರಸ್ತಿಗೊಳಿಸಬೇಕು ಎಂದು ಎನ್.ಡಿ. ಪ್ರಕಾಶ್ ಹೇಳಿದರು.

ನರೇಗಾದಲ್ಲಿ ಉದ್ಯೋಗ ನೀಡಿ:
ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ದೀರ್ಘಕಾಲಿಕ ಆಸ್ತಿ ಸೃಜನೆ ಜೊತೆಗೆ ಸ್ಥಳೀಯವಾಗಿ ಜನರಿಗೆ ಉದ್ಯೋಗ ಒದಗಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ಸೂಚಿಸಿದರು. ಜನರು ಉದ್ಯೋಗಕ್ಕಾಗಿ ಬೇರೆಡೆಗೆ ಹೋಗದ ರೀತಿ ಹಾಗೂ ಯೋಜನೆಯಡಿ ಉದ್ಯೋಗ ನೀಡುತ್ತಿಲ್ಲ ಎನ್ನುವ ನರೇಗಾ ಯೋಜನೆ ಕುರಿತಂತೆ ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವ ಜೊತೆಗೆ ಜಲಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಸುವ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕುಡಿಯುವ ನೀರು: ಸಹಾಯವಾಣಿ ಸೌಲಭ್ಯ
ಮಂಡ್ಯ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರು ಪೂರೈಕೆ ಸಂಬಂಧ ತೊಂದರೆಗಳಿದ್ದಲ್ಲಿ ಆಯಾಯ ತಾಲೂಕಿನ ತಾಲೂಕು ಪಂಚಾಯತ್ ಕಚೇರಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಗಮನ ಸೆಳೆಯಬಹುದು. ದಿನದ 24 ತಾಸು ಈ ಸಹಾಯವಾಣಿಗಳು ಕಾರ್ಯನಿರ್ವಹಿಸಲಿವೆ. 

ಜಿಲ್ಲಾ ಪಂಚಾಯತ್, ಮಂಡ್ಯ ಕಚೇರಿ ಸಹಾಯವಾಣಿ ಸಂಖ್ಯೆ: 08232-221443, ತಾಲೂಕು ಪಂಚಾಯತ್ ಸಹಾಯವಾಣಿ ಸಂಖ್ಯೆ: ಮಂಡ್ಯ 08232-224003, ಶ್ರೀರಂಗಪಟ್ಟಣ 08232-252037, ಮದ್ದೂರು 08232-232177, ಮಳವಳ್ಳಿ 08231-242078,  ನಾಗಮಂಗಲ 08234-286031, ಪಾಂಡವಪುರ 08236-255123, ಕೆ.ಆರ್. ಪೇಟೆ 08230-262230. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ. ಸಹಾಯವಾಣಿ ಸಂಖ್ಯೆ: ಮಂಡ್ಯ 08232-221551, ಶ್ರೀರಂಗಪಟ್ಟಣ 08232-252028, ಮದ್ದೂರು 08232-233440, ಮಳವಳ್ಳಿ 08231-244100, ನಾಗಮಂಗಲ 08234-286120, ಕೆ.ಆರ್.ಪೇಟೆ 08234-286120.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X