Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಬೆಲೆ...

ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಬೆಲೆ ತಾರತಮ್ಯ; ಆರೋಪ

ಬಲ್ಮಠ ಆಟೊರಿಕ್ಷಾ ಚಾಲಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 May 2019 11:10 PM IST
share
ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಬೆಲೆ ತಾರತಮ್ಯ; ಆರೋಪ

ಮಂಗಳೂರು, ಮೇ 10: ನಗರದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಬೆಲೆ ಒಂದು ರೀತಿ ಇದ್ದರೆ, ಬಲ್ಮಠದ ಬಂಕ್‌ವೊಂದರಲ್ಲಿ ಮತ್ತೊಂದು ಬೆಲೆ ಇರುತ್ತದೆ. ಹೆಚ್ಚುವರಿ ದರ ವಿಧಿಸುವುದರ ಮೂಲಕ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಬಲ್ಮಠದ ಆಟೊರಿಕ್ಷಾ ಚಾಲಕರು ಪೆಟ್ರೋಲ್ ಬಂಕ್ ಎದುರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಮಂಗಳೂರು ರಿಕ್ಷಾ ಘಟಕದ ಗೌರವ ಸಲಹೆಗಾರ ಅರುಣ್‌ಕುಮಾರ್, ಮಂಗಳೂರಿನಲ್ಲಿರುವ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರತಿ ಲೀಟರ್‌ ಆಟೊ ಎಲ್ ಪಿಜಿಗೆ 42.50 ರೂ. ದರವಿದ್ದರೆ, ಆಟೋರಿಕ್ಷಾ ಚಾಲಕರು ಮತ್ತು ಮಾಲಕರ ಮೈಕ್ರೋ ಸೊಸೈಟಿಯಿಂದ ನಡೆಸಲಾಗುತ್ತಿರುವ ಬಂಕ್‌ನಲ್ಲಿ 43.19 ರೂ.ನಂತೆ ಹೆಚ್ಚುವರಿ ವಸೂಲಿ ಮಾಡಲಾಗುತ್ತಿದೆ. ಪ್ರತಿ ಲೀಟರ್‌ಗೆ ಹೆಚ್ಚವರಿ ಹಣ ಪಡೆಯುತ್ತಿರುವ ಬಗ್ಗೆ ಪ್ರಶ್ನಿಸಿದರೆ ಸಿಬ್ಬಂದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಹೇಳಿದರು.

ಮಂಗಳೂರಿನ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನದ ಬೆಲೆಯು ಏಕರೂಪದಲ್ಲಿರಬೇಕು. ಬಂಕ್‌ಗೆ ಸಂಬಂಧಿಸಿದವರು ಮನಸೋ ಇಚ್ಛೆ ಬೆಲೆ ಹೆಚ್ಚಳ ಮಾಡುವಂತಾದರೆ, ರಿಕ್ಷಾ ಚಾಲಕರು ಕೂಡ ಪ್ರಯಾಣಿಕರಿಂದ ಹೆಚ್ಚುವರಿ ಬಾಡಿಗೆ ವಸೂಲಿ ಮಾಡಬಹುದಾಗಿದೆ. ಬಂಕ್‌ನವರಿಗೆ ಒಂದು ಕಾನೂನು, ನಮಗೊಂದು ಕಾನೂನು ಎಂದರೆ ಹೇಗಾಗುತ್ತದೆ ? ಇದು ಯಾವ ನ್ಯಾಯ ? ಆಟೊ ಚಾಲಕರಿಗೆ ಕೂಡಲೇ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ಲೀಟರ್‌ಗೆ 69 ಪೈಸೆ ಹೆಚ್ಚುವರಿ ಹಣ ವಸೂಲಿ ಮಾಡಿದರೆ 10 ಲೀಟರ್‌ಗೆ 6.90 ರೂ. ಪೋಲಾಗುತ್ತದೆ. ಮೈಕ್ರೋ ಸೊಸೈಟಿಯು ಚಾಲಕರಿಂದ ಹಾಡುಹಗಲೇ ದರೋಡೆ ಮಾಡುತ್ತಿದೆ. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯೊಬ್ಬರಿಗೆ ಸೇರಿದ ಬಂಕ್‌ನಲ್ಲಿಯೇ ಇಂತಹ ಅವ್ಯವಹಾರ ನಡೆಯುತ್ತಿದ್ದು, ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಂಗಳೂರು ರಿಕ್ಷಾ ಘಟಕದ ಅಧ್ಯಕ್ಷ ಸಂತೋಷ್‌ಕುಮಾರ್, ಉಪಾಧ್ಯಕ್ಷ ರೋಶನ್, ಜೆರಾಲ್ಡ್ ಡಿಕುನ್ಹ, ಉಮೇಶ್, ವಸಂತ್, ಆನಂದ್, ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X