ಮಡಿಕೇರಿ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ, ಮೇ 10 : ಕಳೆದ ವರ್ಷದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಮಡಿಕೇರಿ ನಗರ ಚಾಮುಂಡೇಶ್ವರಿ ನಗರ, ಇಂದಿರಾನಗರ, ಗ್ರಾಮಗಳಾದ ಕಾಲೂರು ಮತ್ತು ತಂತಿಪಾಲಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಸಮಸ್ಯೆಗಳ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಸ್ಥಳೀಯರಿಂದ ಮಾಹಿತಿ ಪಡೆದು ಸೂಕ್ತ ಕ್ರಮದ ಭರವಸೆ ನೀಡಿದರು. ತಹಶೀಲ್ದಾರ್ ನಟೇಶ್, ಪಿಡಿಒ ಮತ್ತಿತರ ಅಧಿಕಾರಿಗಳು ಹಾಜರಿದ್ದರು.












