ಮೂಡ್ಲಕಟ್ಟೆ: ಸಾಂಸ್ಕೃತಿಕ ಹಬ್ಬ ‘ಮೃದುಲ -2019’

ಕುಂದಾಪುರ, ಮೇ 11: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಹಬ್ಬ ‘ಮೃದುಲ -2019’ ಇತ್ತೀಚೆಗೆ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾ.ಕಾಟಯ್ಯ ಜಿ.ಎಸ್. ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಮಾತ್ರ ಮುಂದುವರೆಯದೆ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆಗಳಲ್ಲಿ ಕೂಡ ಭಾಗವಹಿಸಿ ಯಶಸ್ಸಿನ ಹಾದಿುಲ್ಲಿ ಸಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಂಯೋಜಕಿ ಪ್ರೊ.ಶಶಿಕಲಾ, ಅಕಾಡೆಮಿಕ್ ನಿರ್ದೇಶಕ ಡಾ.ಚಂದ್ರರಾವ್ ಮದನೆ ಮತ್ತು ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿ ದ್ದರು. ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
Next Story





