Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನೋಳಿ: ಬಿಐಟಿಯಲ್ಲಿ ಬ್ಯಾರೀಸ್...

ಇನೋಳಿ: ಬಿಐಟಿಯಲ್ಲಿ ಬ್ಯಾರೀಸ್ ಪ್ರತಿಭಾನ್ವೇಷಣೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 May 2019 6:25 PM IST
share
ಇನೋಳಿ: ಬಿಐಟಿಯಲ್ಲಿ  ಬ್ಯಾರೀಸ್ ಪ್ರತಿಭಾನ್ವೇಷಣೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಕೊಣಾಜೆ: ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್ ವತಿಯಿಂದ 'ಪ್ರತಿಭಾನ್ವೇಷಣೆ ಮತ್ತು ವಿದ್ಯಾರ್ಥಿವೇತನ ವಿತರಣೆ- 2019' ಕಾರ್ಯಕ್ರಮ ಶನಿವಾರ ಬ್ಯಾರೀಸ್ ಕಾಲೇಜಿನ ಅಂತರ್ ರಾಷ್ಟ್ರೀಯ ಸೆಮಿನಾರ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಸೈಯದ್ ಸಿದ್ದೀಕ್  ಬ್ಯಾರಿ ಅವರು, ನಾವು ಜೀವನ ದಲ್ಲಿ ಯಾವುದೇ ಸಾಧನೆ ಮಾಡಬೇಕಾದರೆ ನಮ್ಮ ಶೈಕ್ಷಣಿಕ ಅಡಿಗಲ್ಲು ಗಟ್ಟಿಯಾಗಿರಬೇಕು. ಬ್ಯಾರೀಸ್ ಕಾಲೇಜಿನಲ್ಲಿ ಆಯೋಜಿಸಿರುವ ಪ್ರತಿಭಾನ್ವೇಷಣೆಯಂತಹ ಕಾರ್ಯಕ್ರಮಗಳು ನಮ್ಮಲ್ಲಿ ಶೈಕ್ಷಣಿಕ ಆಯ್ಕೆಯ ಬಗ್ಗೆ ಅರಿವನ್ನು ಹೆಚ್ಚಿಸುವುದರೊಂದಿಗೆ ಭವಿಷ್ಯದ ಯೋಜನೆ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಭಾರತವು ಯುವ ಸಮುದಾಯದ ರಾಷ್ಟ್ರವಾಗಿದ್ದು ಪ್ರತಿಭಾನ್ವಿತ ಯುವ ಸಮುದಾಯ ದೇಶದ ಸುಸ್ಥಿರ  ಅಭಿವೃದ್ಧಿಯಲ್ಲಿ  ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆಗೈದ ರಾಜ್ಯದ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳಿಗೆ ಬಿಐಟಿಯ ಸ್ಕಾಲರ್ಶಿಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿದಾಯತ್ ಫೌಂಡೇಶನ್ ನ ಶಾದ್ ಅಹ್ಮದ್, ಕೆಎಂಡಿಸಿಯ ಜಿಲ್ಲಾ ಅಧಿಕಾರಿ ಮುಹಮ್ಮದ್ ಯೂನುಸ್, ಅಲ್ಪಸಂಖ್ಯಾತ ಇಲಾಖೆಯ ಮುಹಮ್ಮದ್ ನಝೀರ್, ನಸ್ರೀನ್ ಬಿಂತ್ ಅಹ್ಮದ್ ಬಾವ, ಬಿಐಟಿ ಪ್ರಾಂಶುಪಾಲರಾದ ಡಾ. ಮಹಾಬಲೇಶ್ವರಪ್ಪ, ಬೀಟ್ಸ್ ಪ್ರಾಂಶುಪಾಲರಾದ ಅಶೋಕ್ ಮೆಂಡೋನ್ಸಾ, ಪಾಲಿಟೆಕ್ನಿಕ್ ನ ಡಾ.ಅಝೀಝ್ ಮುಸ್ತಫಾ, ಅಬ್ದುಲ್ಲಾ ಗುಬ್ಬಿ, ಮಮತಾ ಭಂಡಾರಿ, ಬಸವರಾಜು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐಎಸ್ ಟಿಡಿ ಪ್ರಾಯೋಜಿತ ಪ್ರೊಜೆಕ್ಟ್ ಎಕ್ಸಿಬಿಷನ್ ಆ್ಯಂಡ್ ಕಾಂಪಿಟಿಷನ್ ಅಡಿಯಲ್ಲಿ ವಿವಿಧ ವಿಭಾಗದ ವಿದ್ಯಾರ್ಥಿಗಳು ಮಾಡಿದಂತಹ ಪ್ರೊಜೆಕ್ಟ್ ಗಳನ್ನು ಪ್ರದರ್ಶಿಸಲಾಯಿತು.

ಬಿಐಟಿ ಮತ್ತು ಬ್ಯಾರೀಸ್ ಎನ್‌ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬಿಇಎಡಿಎಸ್)ನಲ್ಲಿ ಇಂಜಿನಿಯರಿಂಗ್/ ಆರ್ಕಿಟೆಕ್ಟರ್ ವಿಭಾಗದಲ್ಲಿ ದಾಖಲಾತಿ ಪಡೆಯಲಿರುವ ಎಲ್ಲಾ ಧರ್ಮಗಳ ಪ್ರತಿಭಾನ್ವಿತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶೇ. 100ರಷ್ಟು ವಿದ್ಯಾರ್ಥಿವೇತನ ದೊರಕುವಂತೆ ಮಾಡುವ ಉದ್ದೇಶದಿಂದ ಪ್ರತಿಭಾನ್ವೇಷಣೆ ಕಾರ್ಯಕ್ರಮವ  ಆಯೋಜಿಸಲಾಗಿತ್ತು.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಸಾಮಾನ್ಯ ಜ್ಞಾನದ ಕುರಿತಂತೆ 75 ನಿಮಿಷಗಳ ಪ್ರಶ್ನೆಗಳನ್ನು ಒಳಗೊಂಡ ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರಿನ ಕೆಎಂಡಿಸಿ (ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮ) ಸಹಭಾಗಿತ್ವದಲ್ಲಿ ಅರಿವು ಲೋನ್ ಶಿಬಿರವನ್ನೂ ಆಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X