Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಅಧಿಕಾರಕ್ಕೆ ಬರುವುದು ಬೇಡ...

ಬಿಜೆಪಿ ಅಧಿಕಾರಕ್ಕೆ ಬರುವುದು ಬೇಡ ಅಂದವರು ಯಾರು: ಡಿಕೆಶಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ11 May 2019 7:42 PM IST
share
ಬಿಜೆಪಿ ಅಧಿಕಾರಕ್ಕೆ ಬರುವುದು ಬೇಡ ಅಂದವರು ಯಾರು: ಡಿಕೆಶಿ ಪ್ರಶ್ನೆ

ಹುಬ್ಬಳ್ಳಿ, ಮೇ 11: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಬಿಜೆಪಿ ನಾಯಕರು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಆದರೆ, ಬಿಜೆಪಿ ಸರಕಾರ ರಚಿಸಲು ಬೇಡ ಅಂದವರು ಯಾರು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ಶನಿವಾರ ಕುಂದಗೋಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ಸರಕಾರ ರಚಿಸಲು ರಾಜ್ಯಪಾಲರಿಗೆ ಮನವಿ ಮಾಡಿ, ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದವರು ಯಡಿಯೂರಪ್ಪ. ಬಿಜೆಪಿ ಸರಕಾರ ರಚನೆ ಮಾಡದಂತೆ ಯಾರೂ ತಡೆದಿಲ್ಲ. ಅವರಿಗೆ ಬಹುಮತವೇ ಇಲ್ಲ ಎಂದು ಲೇವಡಿ ಮಾಡಿದರು. ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇದೆ. ಹೀಗಾಗಿ ಈ ಸಮಸ್ಯೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸಮಸ್ಯೆ ನಿವಾರಣೆಗಾಗಿ ನನ್ನನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇಂದು ಸಂಜೆ ಬೆಂಗಳೂರಿಗೆ ಹೋಗಿ, ಒಪ್ಪಂದಕ್ಕೆ ಸಹಿ ಹಾಕಿ ನಾಳೆ ಪುನಃ ಕುಂದಗೋಳಕ್ಕೆ ಬರುತ್ತೇನೆ ಎಂದು ಅವರು ಹೇಳಿದರು.

ಶ್ರೀಮಂತ ಪಾಟೀಲ ಇದನ್ನು ಹೊರತುಪಡಿಸಿ ಬೇರೆ ಯಾವ ಬೇಡಿಕೆಯನ್ನು ನಮ್ಮ ಮುಂದೆ ಇಟ್ಟಿಲ್ಲ. ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತರು. ರಮೇಶ್ ಜಾರಕಿಹೊಳಿ ಜೊತೆ ಅವರು ಗುರುತಿಸಿಕೊಂಡಿಲ್ಲ. ಅವರು ಪಕ್ಷವನ್ನು ಬಿಡುವುದೆಲ್ಲ ಸುಳ್ಳು ಎಂದು ಶಿವಕುಮಾರ್ ತಿಳಿಸಿದರು.

ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ನಮ್ರತೆಯಿಂದ ಮನೆ-ಮನೆಗೆ ತೆರಳಿ ಮನವಿ ಮಾಡುವ ಮೂಲಕ ಮತಯಾಚಿಸುತ್ತದೆ. ಭರಾಟೆಯ ಪ್ರಚಾರ ಕಾಂಗ್ರೆಸ್ ನಡೆಸುವುದಿಲ್ಲ. ಸನ್ನಡತೆಯ ಪ್ರಚಾರದ ಮೂಲಕ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕುಸುಮಾ ಶಿವಳ್ಳಿ ಅವರನ್ನು ಕ್ಷೇತ್ರದ ಜನ ಗೆಲ್ಲಿಸಿ ಎಂಎಲ್ಎ ಮಾಡುತ್ತಾರೆ ಎಂದು ಶಿವಕುಮಾರ್ ಹೇಳಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಂಸದರನ್ನಾಗಿ ಮಾಡುತ್ತಾರೆ. ಹೀಗಾಗಿ ಕುಂದಗೋಳ ಕ್ಷೇತ್ರ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಆತಂಕ ಪಡುವ ಅಗತ್ಯವಿಲ್ಲ ಶಿವಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಶಾಸಕರಾದ ನಂಜಯ್ಯನಮಠ, ಕೋನರೆಡ್ಡಿ, ಎಂ.ಎಸ್.ಅಕ್ಕಿ, ಮುಖಂಡರಾದ ಹಝ್ರತ್ ಅಲಿ ಜೊಡಮನಿ, ಜಗದೀಶ್ ಉಪ್ಪಿನ, ಸುರೇಶ್‌ಗೌಡ್ರ ಪಾಟೀಲ, ಮಂಜುರೆಡ್ಡಿ, ಅರವಿಂದ ಕಟಗಿ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X