Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾಟ್ಸ್ ಆ್ಯಪ್ ಸಂದೇಶ ಡೆತ್‌ನೋಟ್ ಎಂದು...

ವಾಟ್ಸ್ ಆ್ಯಪ್ ಸಂದೇಶ ಡೆತ್‌ನೋಟ್ ಎಂದು ಪರಿಗಣಿಸಲಾಗದು: ಹೈಕೋರ್ಟ್ ಅಭಿಪ್ರಾಯ

ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ11 May 2019 8:12 PM IST
share
ವಾಟ್ಸ್ ಆ್ಯಪ್ ಸಂದೇಶ ಡೆತ್‌ನೋಟ್ ಎಂದು ಪರಿಗಣಿಸಲಾಗದು: ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು, ಮೇ 11: ವಾಟ್ಸ್ ಆ್ಯಪ್ ಮೂಲಕ ಕಳುಹಿಸಲಾದ ಸಂದೇಶವನ್ನು ಡೆತ್‌ನೋಟ್ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತಂತೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಹೊತ್ತ ಶ್ರೀನಿವಾಸ ನಗರದ ಬಿ.ಸಿ.ರಾಜಶೇಖರ್, ಬಾಪೂಜಿ ನಗರದ ಬಿ.ಸಿ.ರಾಮಕೃಷ್ಣ ಮತ್ತು ಹನುಮಂತ ನಗರದ ಎಚ್.ಶಿವಯೋಗಿ ಅವರಿಗೆ ನ್ಯಾ.ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಜಾಮೀನು ನೀಡಿದೆ. ಅರ್ಜಿದಾರರು ತಲಾ 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಎಂಬ ಷರತ್ತು ವಿಧಿಸಿದೆ. 

ಪ್ರಕರಣವೇನು: ರಾಜಶೇಖರ್ ಅವರು ನಗರದ ಕಬ್ಬನ್‌ಪೇಟೆಯಲ್ಲಿರುವ ಶ್ರೀಚಂಪಕಧಾಮ ಚಿನ್ನಾಭರಣ ಮಾರಾಟ ಮಳಿಗೆ ಮಾಲಕರು. ಇವರು, ತಮ್ಮ ಅಂಗಡಿಯಲ್ಲಿ 2019ರ ಜ.21ರಂದು 200 ಗ್ರಾಂ ತೂಕದ ಬಂಗಾರ ಕಳುವಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಇದರ ಮಧ್ಯೆ ಇವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಧನಂಜಯ(38) ಅವರು, 2019ರ ಮಾ.15ರಂದು ಬೆಳಗ್ಗೆ 10.30ರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ, ಧನಂಜಯ ಅವರ ಪತ್ನಿ ರಾಜಶೇಖರ್, ರಾಮಕೃಷ್ಣ ಮತ್ತು ಶಿವಯೋಗಿ ವಿರುದ್ಧ ಪೊಲೀಸರಿಗೆ ದೂರು ನೀಡಿ, ಈ ಮೂವರೂ ನನ್ನ ಪತಿಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದರು.

ಬಂಗಾರವನ್ನು ಧನಂಜಯ ಅವರೆ ಕದ್ದಿದ್ದಾರೆ ಎಂದು ಶಂಕಿಸಿ ರಾಜಶೇಖರ್ ಅವರು ಕೆಟ್ಟದಾಗಿ ನಡೆಸಿಕೊಂಡು ಹಿಂಸೆ ನೀಡಿದ್ದರು. ಇದರಿಂದ ಧನಂಜಯ ಮಾನಸಿಕ ಮತ್ತು ದೈಹಿಕ ಆಘಾತಕ್ಕೆ ಒಳಗಾಗಿ ಖಿನ್ನತೆಗೆ ಜಾರಿದ್ದರು ಎಂದು ದೂರಿನಲ್ಲಿ ವಿವರಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನೂ ಬಂಧಿಸಿದ್ದರು. ಕೋರ್ಟ್ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಹೀಗಾಗಿ, ಮೂವರೂ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿ ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಧನಂಜಯ ವಾಟ್ಸ್ ಆ್ಯಪ್‌ನಲ್ಲಿ ಕಳುಹಿಸಿದ ಸಂದೇಶಗಳನ್ನೇ ಡೆತ್‌ನೋಟ್ ಎಂದು ವ್ಯಾಖ್ಯಾನಿಸಲಾಗಿದೆ. ಇದನ್ನು ಹೊರತುಪಡಿಸಿದಂತೆ ಬೇರಾವುದೇ ಸಾಕ್ಷ ಇಲ್ಲ ಎಂದು ಪ್ರತಿಪಾದಿಸಿದ್ದರು. ಆದರೆ, ಪ್ರಾಸಿಕ್ಯೂಷನ್ ಪರ ವಕೀಲರು, ಕಿರುಕುಳ ಮತ್ತು ಖಿನ್ನತೆಗೆ ಮೊಬೈಲ್‌ನಲ್ಲಿ ಕಳುಹಿಸಿರುವ ಸಂದೇಶಗಳನ್ನು ಡೆತ್‌ನೋಟ್ ಎಂದೇ ಪರಿಗಣಿಸಬೇಕಾಗುತ್ತದೆ. ಆರೋಪಿಗಳು ಧನಂಜಯ ಅವರಿಗೆ ದೈಹಿಕ, ಮಾನಸಿಕ ಹಿಂಸೆ ನೀಡಿರುವುದು ಇದರಿಂದ ತಿಳಿದು ಬರುತ್ತದೆ. ಹೀಗಾಗಿ, ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪಿಸಿದರು.

ಇದಕ್ಕೆ ನ್ಯಾಯಪೀಠ, ಧನಂಜಯ್ಯ ಸಾವಿಗೆ ಶರಣಾಗುವ ಮುನ್ನ ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ಬೇಸತ್ತಿದ್ದರು. ಅದರಿಂದಾಗಿಯೇ ಖಿನ್ನತೆಗೆ ಜಾರಿದ್ದರು ಎಂಬುದೇನೋ ಸರಿ. ಆದರೆ, ಅವರು ತಮ್ಮ ಮೊಬೈಲ್ ಫೋನ್‌ನಿಂದ ಕಳುಹಿಸಿದ ವ್ಯಾಟ್ಸ್ ಆ್ಯಪ್ ಸಂದೇಶವನ್ನು ದೈಹಿಕ ಸಾಕ್ಷಿ ಎಂದು ಪರಿಗಣಿಸಬೇಕಾಗುತ್ತದೆಯೇ ಹೊರತು ಅದನ್ನೇ ಡೆತ್‌ನೋಟ್ ಎಂದು ಪರಿಗಣಿಸಬೇಕು ಎಂಬ ವಾದ ವಿಚಿತ್ರ ಸಂಗತಿಯೇ ಸರಿ ಎಂಬ ಅಭಿಪ್ರಾಯದೊಂದಿಗೆ ಪ್ರಾಸಿಕ್ಯೂಷನ್ ವಾದವನ್ನು ತಳ್ಳಿ ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X