Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ17ರಿಂದ: ಕಕ್ಕೆಪದವು ಗರೋಡಿ...

ಮೇ17ರಿಂದ: ಕಕ್ಕೆಪದವು ಗರೋಡಿ ಕ್ಷೇತ್ರದಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ವಾರ್ತಾಭಾರತಿವಾರ್ತಾಭಾರತಿ11 May 2019 10:28 PM IST
share

ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಕೆಪದವು ಗರೋಡಿ ಕ್ಷೇತ್ರದ ನೂತನ ಶಿಲಾಮಯ ಆಲಯದಲ್ಲಿ ಶ್ರೀ ಕಡಂಬಿಲ್ತಾಯ, ಕೊಡಮಣಿತ್ತಾಯಿ, ದೈವೊಂಕುಳು, ಬ್ರಹ್ಮಬೈದರ್ಕಳ, ಮಾಯಾಂದಲ್ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವವು  ಮೇ17ರಿಂದ 19  ರವರೆಗೆ ನಡೆಯಲಿದೆ ಎಂದು ಕಕ್ಕೆಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ಬ್ರಹ್ಮಕಲಶ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಶನಿವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟಿ-ಚನ್ನಯ್ಯರೇ ಸ್ಥಾಪಿಸಿದ ಜಿಲ್ಲೆಯ 66 ಗರೋಡಿಗಳ ಪೈಕಿ ಕಕ್ಕೆಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿಯು ಒಂದಾಗಿದೆ. ವಿಶಿಷ್ಠವಾದ  ತೌಳವ ದ್ರಾವಿಡ ಶೈಲಿಯಲ್ಲಿ ಕಕ್ಕೆಪದವು ಗರೋಡಿಯನ್ನು ಶಿಲಾಮಯವಾಗಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ  ಪುನರ್ ನಿರ್ಮಿಸಲಾಗುತ್ತಿದೆ. ಕಕ್ಕೆಪದವು ಗರೋಡಿಯ ಎರಡೂವರೆ ಎಕ್ರೆ ಜಮೀನನ್ನು ಸರಕಾರ ಕಳೆದ ಸಂಪುಟ ಸಭೆಯಲ್ಲಿ ಗರೋಡಿಯ ಹೆಸರಿಗೆ ಮಂಜೂರಾತಿ ನೀಡಿದೆ ಎಂದರು.

ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರವರ ಮಾರ್ಗದರ್ಶನ, ಕಕ್ಯ ಶ್ರೀನಿವಾಸ ಅರ್ಮುಡ್ತಾಯರವರ ಉಪಸ್ಥಿತಿಯಲ್ಲಿ ಕ್ಷೇತ್ರದ ಅಸ್ರಣ್ಣರಾದ ರಾಜೇಂದ್ರ ಅರ್ಮುಡ್ತಾಯರವರ ನೇತೃತ್ವದಲ್ಲಿ ವಿವಿಧ ವೈಧಿಕ ವಿಧಿವಿಧಾನಗಳು ನಡೆಯಲಿದ್ದು, ಮೇ 17ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸರ್ವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

ಮೇ 19 ರಂದು ಶಿಖರ, ಧ್ವಜಸ್ತಂಭ, ದೈವಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ನಡೆಯಲಿದೆ. ಬ್ರಹ್ಮಕಲಶದ ಪ್ರತಿದಿನ ನಿರಂತರವಾಗಿ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆಯ ವೇಳೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿವಿಧ ಕ್ಷೇತ್ರದ ಮಠಾಧೀಶರು ಆರ್ಶೀವಚನ ನೀಡಲಿದ್ದಾರೆ. ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ರಮಾನಾಥ ರೈ ವಿವರಿಸಿದರಲ್ಲದೆ, ಬ್ರಹ್ಮಕಲಶದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ. ಹಾಗೆಯೇ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು.

ಮೇ 19 ರಿಂದ 22 ರವರೆಗೆ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೆ, 21 ರಂದು ಬೈದರ್ ಗಳು ಗರಡಿ ಇಳಿದು, ಮಾಯಾಂದಲೇ ನೇಮ ಜರಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ ಮಾಯಿಲಪ್ಪ ಸಾಲಿಯಾನ್ ಕೆ., ವಿವಿಧ ಸಮಿತಿ ಪದಾಧಿಕಾರಿಗಳಾದ ಎ. ಚೆನ್ನಪ್ಪ ಸಾಲಿಯಾನ್, ಚಂದ್ರಶೇಖರ.ಕೆ, ವಾಸುದೇವ ಮಯ್ಯ, ಬೇಬಿಕುಂದರ್, ವಿಜಯಕುಮಾರ್ , ವೀರೇಂದ್ರಕುಮಾರ್ ಜೈನ್, ಬಾಲಕೃಷ್ಣ ಅಂಚನ್, ದಿನೇಶ್ ಬಂಗೇರ, ಧರ್ಣಪ್ಪ ಪೂಜಾರಿ, ರಾಜೀವ ಕೆ., ವಿಶ್ವನಾಥ ಸಾಲ್ಯಾನ್ ಬಿತ್ತ, ಡೀಕಯ್ಯ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X