Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ...

ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ: ಸಾ.ರಾ.ಮಹೇಶ್

ಮಡಿಕೇರಿ: ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ11 May 2019 11:07 PM IST
share
ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ: ಸಾ.ರಾ.ಮಹೇಶ್

ಮಡಿಕೇರಿ, ಮೇ 11: ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಠಿ ಮತ್ತು ಅನಾವೃಷ್ಠಿ ಸಂಬಂಧಿಸಿದಂತೆ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಉಪ ಸಮಿತಿಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಕೇಂದ್ರ ಸ್ಥಾನ ಬಿಟ್ಟು ತೆರಳದಿರಿ: ಸದ್ಯದಲ್ಲೆ ಮುಂಗಾರು ಆರಂಭವಾಗುವುದರಿಂದ ಯಾರೂ ಸಹ ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ತುರ್ತು ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಯವರ ಅನುಮತಿ ಪಡೆದು ಹೊರಡಬೇಕು ಎಂದರು. 

ಅಧಿಕಾರಿಗಳು ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರನ್ನು ನೋಯಿಸುವುದು, ತೊಂದರೆ ನೀಡುವುದು ಕೇಳಿ ಬಂದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ಎಚ್ಚರಿಸಿದರು.

ಈಗಾಗಲೇ ಜಿಲ್ಲಾಡಳಿತ ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಸಾಕಷ್ಟು ಕುಟುಂಬಗಳಿಗೆ ಪರಿಹಾರ ವಿತರಿಸಿದೆ. ಜಮ್ಮಾ ಹಾಗೂ ಬಾಣೆ ಭೂಮಿಗೆ ಸಂಬಂಧಿಸಿದಂತೆ ಇನ್ನೂ ಕೆಲವು ಕುಟುಂಬಗಳಿಗೆ ಪರಿಹಾರ ನೀಡಬೇಕಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ನೊಂದ ಎಲ್ಲಾ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.   

ಮಡಿಕೇರಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣ ಬಳಿ ತಡೆಗೋಡೆ ನಿರ್ಮಾಣ ಮಾಡುವ ಕೆಲಸವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಪೌರಾಯುಕ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು. ನಗರದಲ್ಲಿ ಒಳಚರಂಡಿ ನಿರ್ಮಾಣದಿಂದಾಗಿ ರಸ್ತೆ ಹದಗೆಟ್ಟಿದೆ ಎಂದು ದೂರುಗಳು ಕೇಳಿ ಬರುತ್ತಿದ್ದು, ಕೂಡಲೇ ಇದನ್ನು ಸರಿಪಡಿಸಬೇಕು. ಮಳೆಗಾಲ ಮುಗಿಯುವವರೆಗೆ ರಸ್ತೆ ಅಗೆಯಲು ಹೋಗಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.  

ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗ, ಪಿಎಂಜಿಎಸ್‍ವೈ, ರಾಷ್ಟ್ರೀಯ ಹೆದ್ದಾರಿ ವಿಭಾಗ, ಸಣ್ಣ ನೀರಾವರಿ ಹಾಗೂ ಬೃಹತ್ ನೀರಾವರಿ ಮತ್ತಿತರ ಎಂಜಿನಿಯರಿಂಗ್ ವಿಭಾಗದ ಇಲಾಖೆಗಳು ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು.  

ಜಿಲ್ಲಾಡಳಿತ ಭವನದ ಬಳಿ ಮಂಗಳೂರು ರಸ್ತೆ ಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಈಗಾಗಲೇ 5 ಕೋಟಿ ರೂ. ಇದ್ದು, ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಆದ್ದರಿಂದ ತ್ವರಿತವಾಗಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಲೋಕೋಪಯೋಗಿ ಇಂಜಿನಿಯರ್ ಗಳಿಗೆ ಸೂಚಿಸಿದರು. ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂಬ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಇಂಜಿನಿಯರ್ ಗೆ ಸೂಚಿಸಿದರು. 

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರಕೃತಿ ವಿಕೋಪ ಹಾಗೂ ಬರ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.  
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X