ಮಂಗಳೂರು: ಹತ್ಯೆಯಾದ ಮಹಿಳೆಯ ಗುರುತು ಪತ್ತೆ

ಮಂಗಳೂರು: ಕೆಪಿಟಿ ಸಮೀಪ ರವಿವಾರ ಬೆಳಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯ ಗುರುತು ಪತ್ತೆಯಾಗಿದೆ.
ಹತ್ಯೆಗೀಡಾದ ಮಹಿಳೆಯು ಸುಮಾರು 40 ವರ್ಷ ಪ್ರಾಯದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ದೇಹವು ನಂತೂರ್ ಮತ್ತು ಕೆಪಿಟಿಯ ನಡುವಿನ ಹೆದ್ದಾರಿಯಲ್ಲಿ ಒಂದು ಗೋಣಿ ಚೀಲದಲ್ಲಿ ತುಂಬಿ ಇಡಲಾಗಿತ್ತು. ಪ್ರಾಥಮಿಕ ತನಿಖೆ ಕೊಲೆಯ ಹಿಂದಿನ ಕೆಲವು ವೈಯಕ್ತಿಕ ಕಾರಣಗಳನ್ನು ಸೂಚಿಸುತ್ತದೆ. ಮಹಿಳೆ ವಿಚ್ಚೇದಿತೆಯಾಗಿದ್ದು, ಸಮಗ್ರ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





