Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಚ್.ವಿಶ್ವನಾಥ್ ಹೇಳಿಕೆ ಮೈತ್ರಿ ಸರಕಾರದ...

ಎಚ್.ವಿಶ್ವನಾಥ್ ಹೇಳಿಕೆ ಮೈತ್ರಿ ಸರಕಾರದ ಆರೋಗ್ಯಕ್ಕೆ ಮಾರಕ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 May 2019 12:57 PM IST
share
ಎಚ್.ವಿಶ್ವನಾಥ್ ಹೇಳಿಕೆ ಮೈತ್ರಿ ಸರಕಾರದ ಆರೋಗ್ಯಕ್ಕೆ ಮಾರಕ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 13: ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ನೀಡಿರುವ ಹೇಳಿಕೆಯನ್ನು ವಿರೋಧಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಇಂತಹ ಹೇಳಿಕೆಗಳು ಮೈತ್ರಿ ಸರಕಾರದ ಆರೋಗ್ಯಕ್ಕೆ ಮಾರಕ ಎಂದರು.

ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಬೆಂಗಳೂರಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು, ಸಂಸದರು, ಮೇಯರ್, ಉಪಮೇಯರ್ ಜೊತೆ ಮುಂದಿನ ಸಾಲಿನಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆ, ಬಿಬಿಎಂಪಿ ಬಜೆಟ್ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವೆ ವೈಯಕ್ತಿಕವಾದ ವ್ಯತ್ಯಾಸಗಳು, ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ರಾಜಕೀಯವಾಗಿ ಮೈತ್ರಿ ಸರಕಾರದ ಪಕ್ಷವಾಗಿ ಒಟ್ಟಿಗೆ ಇರುವಾಗ ಸಮನ್ವಯ ಸಮಿತಿ ಅಧ್ಯಕ್ಷರ ಬಗ್ಗೆಯೆ ಲಘುವಾಗಿ ವಿಶ್ವನಾಥ್ ಮಾತನಾಡಿದ್ದು ಸರಿಯಿಲ್ಲ ಎಂದು ಅವರು ಹೇಳಿದರು.

ಮೈತ್ರಿ ಆರೋಗ್ಯಕರವಾಗಿ ಮುಂದುವರೆಯಬೇಕಾದರೆ ಇಂತಹ ಹೇಳಿಕೆಗಳು ಸಹಾಯ ಮಾಡುವುದಿಲ್ಲ. ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಇದನ್ನು ಗಮನಿಸಬೇಕಾಗುತ್ತದೆ. ಸರಕಾರ ಇನ್ನೂ ನಾಲ್ಕು ವರ್ಷ ಕೆಲಸ ಮಾಡಬೇಕು. ಮೈತ್ರಿ ಮುಂದುವರೆಯಬೇಕಾದರೆ ಇಂತಹ ಹೇಳಿಕೆಗಳು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.

ಆಂತರಿಕವಾಗಿ ಭಿನ್ನಾಭಿಪ್ರಾಯ ಇದ್ದರೆ ಸಂಬಂಧಪಟ್ಟ ಮುಖಂಡರ ಜೊತೆ ಚರ್ಚೆ ಮಾಡಲಿ. ಕೆಪಿಸಿಸಿ ಅಧ್ಯಕ್ಷರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚಿಸಲಿ. ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಜೊತೆ ಚರ್ಚಿಸಿ ನಾವು ಸಮ್ಮಿಶ್ರ ಸರಕಾರ ರಚನೆ ಮಾಡಿಲ್ಲ. ಜನತಾ ದಳದ ಜೊತೆ ಸಮ್ಮಿಶ್ರ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು.

ನಮ್ಮ ರಾಷ್ಟ್ರೀಯ ಮಟ್ಟದ ನಾಯಕರಿಂದ ಸಮ್ಮಿಶ್ರ ಸರಕಾರ ರಚನೆಯಾಗಿದೆ. ಕುಪೇಂದ್ರ ರೆಡ್ಡಿಯವರಿಂದ ಆಗಿದ್ದಲ್ಲ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇರುತ್ತದೆ. ವಿಶ್ವನಾಥ್ ಕ್ರಿಯೆ ಮಾಡಿದ್ದಾರೆ, ಕಾಂಗ್ರೆಸಿಗರು ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಆದರೆ, ಇದು ಒಳ್ಳೆಯದಲ್ಲ. ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಇಲ್ಲಿ ಅವಕಾಶವಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ಮೇ 23ಕ್ಕೆ ಸರಕಾರ ಪತನ ಆಗುತ್ತದೆ ಎಂದು ಬಿಜೆಪಿ ನಾಯಕರು ಜಪ ಮಾಡುತ್ತಿದ್ದಾರೆ. ಜಪ ಮಾಡುವವರೂ ಮಾಡುತ್ತಿರಲಿ, ನಾವು ಅವರಿಗೆ ತೊಂದರೆ ಕೊಡುವುದಿಲ್ಲ. ಬಿಬಿಎಂಪಿ ಬಜೆಟ್ ವಿಚಾರದಲ್ಲಿ ಬಿಜೆಪಿ ನಾಯಕರು ಏನಾದರೂ ಹೇಳಿಕೆ ಕೊಡಲಿ. ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಮೈತ್ರಿ ಸರಕಾರದಲ್ಲಿ ಬೆಂಗಳೂರಿಗೆ ಸಂಬಂಧಪಟ್ಟ ಹಾಗೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರುತ್ತಿದ್ದು, ಅದರ ಬಗ್ಗೆಯೂ ಕೂಡ ಇಂದು ಬೆಂಗಳೂರಿನ ಎರಡೂ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಪರಮೇಶ್ವರ್ ಹೇಳಿದರು. ಎರಡೂ ಪಕ್ಷದ ಪಾಲಿಕೆ ಸದಸ್ಯರ ಜೊತೆ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಎಲ್ಲ ಶಾಸಕರಿಗೆ ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಶಾಸಕರು, ಸಂಸದರು, ಮೇಯರ್ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ಬಜೆಟ್ ಸರಕಾರದ ಮಟ್ಟದಲ್ಲಿ ಬಂದಿದೆ, ಅದಕ್ಕೂ ಕೂಡ ಕೆಲವೇ ದಿನಗಳಲ್ಲಿ ಒಪ್ಪಿಗೆ ಸಿಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ಪತ್ರೆ, ಪಾರ್ಕ್, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸದಸ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ನಿರ್ಮಿಸಲು ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲ ಅಭಿಪ್ರಾಯವನ್ನು ಪರಿಗಣಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X