Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವರು-ವಿಜ್ಞಾನ ಎಣ್ಣೆ ಸೀಗೆಕಾಯಿ: ಪರಿಸರ...

ದೇವರು-ವಿಜ್ಞಾನ ಎಣ್ಣೆ ಸೀಗೆಕಾಯಿ: ಪರಿಸರ ಬರಹಗಾರ ನಾಗೇಶ್ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ13 May 2019 5:34 PM IST
share

ಬೆಂಗಳೂರು, ಮೇ 13: ದೇವರು ಮತ್ತು ವಿಜ್ಞಾನ ಎಣ್ಣೆ ಸೀಗೆಕಾಯಿ ತರಹ ಇದ್ದು, ದೇಶದಲ್ಲಿ ಸೀಗೆಕಾಯಿ ದಿನೇ ದಿನೇ ಅಧಿಕವಾಗುತ್ತಿದೆ ಎಂದು ಪರಿಸರ ಬರಹಗಾರ ನಾಗೇಶ್ ಹೆಗಡೆ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಸರಕಾರಿ ಕಲಾ ಕಾಲೇಜು ಆಯೋಜಿಸಿದ್ದ ‘ಸಂಕಥನ’ ಬಹುಶಿಸ್ತೀಯ ಅಧ್ಯಯನ ನೆಲೆಗಳ ವಿಚಾರ ಸಂಕಿರಣ ಸಪ್ತಾಹದಲ್ಲಿ ಮಾತನಾಡಿದ ಅವರು, ಎಲ್ಲವುಗಳ ಯೋಗಕ್ಷೇಮ ನೋಡಿಕೊಳ್ಳುವವ ದೇವರು. ಆದರೆ ಭೂಕಂಪನ, ಜ್ವಾಲಾಮುಖಿಯಂತಹ ಪ್ರಕೃತಿ ವಿಕೋಪಗಳು ಉಂಟಾಗಿ ಜೀವಹಾನಿ ಆಸ್ತಿ- ಪಾಸ್ತಿ ಹಾನಿ ಉಂಟಾಗುವುದು ಏಕೆ? ದೀನ ದಲಿತರಿಗೆ ಒಳ್ಳೆಯದು ಆಗಬೇಕು. ಏಕೆ ಆಗುತ್ತಿಲ್ಲ. ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿದಾಗ ದೇವರು ಇದ್ದಾನೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು.

ದೇವರ ಅಸ್ತಿತ್ವ ತಾರ್ತಿಕವಾಗಿ ಯೋಚಿಸಿದಾಗ ಇಲ್ಲ. ಆದರೆ ದೇವರು ಇದ್ದಾನೆ. ಹೇಗೆಂದರೆ ಇತ್ತೀಚಿಗೆ ಸಂಭವಿಸಿದ ಫೋನಿ ಚಂಡುಮಾರುತದ ಬಗ್ಗೆ ಮೊದಲೇ ಸುಳಿವು ನೀಡಿದ್ದು ವಿಜ್ಞಾನ. ಹೀಗಾಗಿ, ಚಂಡುಮಾರುತವನ್ನು ಅರಿತು ಸಾವಿರಾರು ಜನರು ತಮ್ಮ ಪ್ರಾಣವನ್ನು ಬದುಕಿಸಿಕೊಂಡರು. ಇದು ವಿಜ್ಞಾನದಿಂದ ಸಾಧ್ಯವಾಗಿದೆ. ಅಲ್ಲದೆ, ಅನೇಕ ಜನರು ಭೀಕರ ಖಾಯಿಲೆಗಳಿಂದ ಸಾಯುತ್ತಾರೆ. ದೇವರು ಇರುವಿಕೆ ನಿಜವಾಗಿದ್ದರೆ ಇದನ್ನೆಲ್ಲ ತಪ್ಪಿಸಬಹುದಿತ್ತು ಎಂದು ವಿವರಿಸಿದರು.

ಮನುಷ್ಯ ದೇವರು ಮಾಡಬೇಕಾದ ಸಕಲ ಕಾರ್ಯವನ್ನು ಮಾಡುತ್ತಿದ್ದು, ಸಮಾಜದಲ್ಲಿ ಎಲ್ಲರಿಗೂ ಸಮಾನತೆ ನೀಡಲು ಸೂಕ್ತವಾದ ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗವನ್ನು ರಚಿಸಿದ್ದಾನೆ. ಅಲ್ಲದೆ, ಸಾವಿರಾರು ವರ್ಷಗಳ ಹಿಂದೆ ವಿಶ್ವದ ಮಹಾಸ್ಫೋಟ (ಕಪ್ಪು ರಂಧ್ರ) ನಡೆದಾಗ ಭೂಮಿ ಸೃಷ್ಟಿಯಾಯಿತು. ಹೀಗಾಗಿ, ನಾವು ಇಲ್ಲಿ ದೇವರ ಪ್ರಾರ್ಥನೆ ಮಾಡಬೇಕಾಗಿಲ್ಲ. ವಿಜ್ಞಾನದ ಚಿಂತನೆಗಳನ್ನು ಮಾಡಬೇಕು ಎಂದರು.

ವಿಜ್ಞಾನ ಇಲ್ಲದಿದ್ದರೆ ನಾವು ಯಾರು ಇರುತ್ತಿರಲಿಲ್ಲ. ನಮ್ಮ ಜೀವನದ ಪ್ರತಿ ಗಳಿಗೆಯೂ ಪ್ರತಿ ಆಯಾಮವೂ ವಿಜ್ಞಾನವೇ ಆಗಿರುತ್ತೆ. ಜೀವಿಗಳ ಉಗಮಕ್ಕೆ ಅವಶ್ಯಕವಾದ ವಾತಾವರಣ ಇದ್ದಿದರಿಂದಲೇ ಭೂಮಿಯಲ್ಲಿ ನಾವು ಇರುವುದು. ಇತ್ತೀಚಿನ ದಿನಗಳಲ್ಲಿ ವಿಜ್ಞಾನ ತುಂಬಾ ವಿಕೃತವಾಗುತ್ತಿದೆ ಎಂದು  ಬೇಸರ ವ್ಯಕ್ತಪಡಿಸಿದರು.

ದೇಶದಲ್ಲೇ ಮೊದಲು ಅಣು ಸ್ಥಾವರವವನ್ನು ವಿರೋಧಿಸಿದ್ದು ಹಾಗೂ ಕುದುರೆ ಮುಖ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್‌ನಿಂದ ನಿಷೇಧ ತಂದಿದ್ದು ರಾಜ್ಯದವರು. ಇಷ್ಟೊಂದು ಜಾಗೃತಿ ಮೂಡಲು ಸಾಹಿತಿಗಳಾದ ಶಿವರಾಮ ಕಾರಂತ, ಬಿಜಿಎಲ್ ಸ್ವಾಮಿ, ಲಕ್ಷಣ್ ರಾವ್‌ರಂತಹವರ ಹೋರಾಟದ ಫಲ. ಇನ್ನು ತೇಜಸ್ವಿಯವರು ಪರಿಸರ ವಿಜ್ಞಾನಿಯಲ್ಲದಿದ್ದರೂ ಪಶ್ಚಿಮ ಘಟ್ಟದ ಪರಿಸರ ಸಂಪತ್ತಿನ ಅರಿವನ್ನು ತಿಳಿಸಿಕೊಟ್ಟರು ಎಂದು ಹೇಳಿದರು.

ದೇಶದಲ್ಲಿ ಶೇ.40ರಷ್ಟು ಆಹಾರ ಪದಾರ್ಥ ವ್ಯರ್ಥವಾಗುತ್ತಿದ್ದು, ರಾಜ್ಯದ ರಾಜಧಾನಿಯಲ್ಲಿನ ಕಲ್ಯಾಣ ಮಂಟಪಗಳಲ್ಲಿ ಪ್ರತಿ ವರ್ಷ 943 ಟನ್‌ನಷ್ಟು ಆಹಾರ ವ್ಯರ್ಥ ಮಾಡಲಾಗುತ್ತಿದೆ. ಅಲ್ಲದೆ, ನಗರದಲ್ಲಿರುವ ಒಂದೊಂದು ಹಸುಗಳ ಹೊಟ್ಟೆಯಲ್ಲಿ 15 ಕೆಜಿಯಷ್ಟು ಪ್ಲಾಸಿಕ್ಟ್ ಇದೆ ಎಂಬ ಆತಂಕಕಾರಿ ವಿಚಾರವನ್ನು ತಿಳಿಸಿದರು.

ಮಂಗಳ ಗ್ರಹದಲ್ಲಿನ ಉಪಗ್ರಹ 400 ಕಿಲೋಮೀಟರ್ ಅಂತರದಲ್ಲಿ ಅಲ್ಲಿನ ಮಿಥೇನ್ ಇರುವಿಕೆಯನ್ನು ಗ್ರಹಿಸುತ್ತದೆ. ಆದರೆ ಭಯೋತ್ಪಾಕ ನಿಗ್ರಹ ದಳಕ್ಕಿಂತ ಹೆಚ್ಚು ಜನ ಮೂತ್ರ ಗುಂಡಿಗಳಲ್ಲಿ ಸಾಯುತ್ತಿದ್ದಾರೆ. ಅದಕ್ಕೆ ಕಾರಣ ಮಿಥೇನ್ ಆಗಿದ್ದು, ವಿಜ್ಞಾನಿಗಳು, ಸಾಹಿತಿಗಳು ಹಾಗೂ ಮಾಧ್ಯಮದವರು ಏಕೆ ಪ್ರಶ್ನೆ ಮಾಡುತ್ತಿಲ್ಲ ?

-ನಾಗೇಶ್ ಹೆಗಡೆ, ಪರಿಸರ ಬರಹಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X