Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಆ್ಯಂಟಿಬಯಾಟಿಕ್‌ಗಳನ್ನು ಸೇವಿಸುವಾಗ ಈ...

ಆ್ಯಂಟಿಬಯಾಟಿಕ್‌ಗಳನ್ನು ಸೇವಿಸುವಾಗ ಈ ವಿಷಯಗಳು ನಿಮ್ಮ ಗಮನದಲ್ಲಿರಲಿ

ವಾರ್ತಾಭಾರತಿವಾರ್ತಾಭಾರತಿ13 May 2019 7:15 PM IST
share
ಆ್ಯಂಟಿಬಯಾಟಿಕ್‌ಗಳನ್ನು ಸೇವಿಸುವಾಗ ಈ ವಿಷಯಗಳು ನಿಮ್ಮ ಗಮನದಲ್ಲಿರಲಿ

ಆ್ಯಂಟಿಬಯಾಟಿಕ್ ಅಥವಾ ಪ್ರತಿಜೀವಕ ಮಾತ್ರೆಗಳನ್ನು ಸೇವಿಸುವ ಮುನ್ನ ನಿಮಗೆ ತಿಳಿದಿರಲೇಬೇಕಾದ ಕೆಲವು ಆಸಕ್ತಿದಾಯಕ ವಿಷಯಗಳಿವೆ. ಆ್ಯಂಟಿಬಯಾಟಿಕ್‌ಗಳನ್ನು ಶೋಧಿಸಿದಾಗಿನಿಂದ ಅವುಗಳ ಬಳಕೆ ಹೆಚ್ಚುತ್ತಲೇ ಇದೆ. ಪ್ರತಿದಿನ ಅದೆಷ್ಟೋ ವೈದ್ಯರು ತಮ್ಮ ರೋಗಿಗಳಿಗೆ ಇವುಗಳನ್ನು ಶಿಫಾರಸು ಮಾಡುತ್ತಲೇ ಇರುತ್ತಾರೆ,ಹೀಗಾಗಿ ಆ್ಯಂಟಿಬಯಾಟಿಕ್‌ಗಳ ಸೇವನೆಯ ಬಗ್ಗೆ ಚಿಂತಿಸಬೇಕಿಲ್ಲ ಎಂದು ಅನಿಸುವುದು ಸಹಜವೇ ಆಗಿದೆ. ಆದರೆ ಆ್ಯಂಟಿಬಯಾಟಿಕ್‌ಗಳು ಶಕ್ತಿಶಾಲಿ ಔಷಧಿಗಳಾಗಿವೆ ಎಂಬ ಅಂಶವನ್ನು ಕಡೆಗಣಿಸುವುದು ಅಪ್ಪಟ ಮೂರ್ಖತನವಾಗುತ್ತದೆ. ಈ ಮಾತ್ರೆಗಳನ್ನು ಸೇವಿಸುವ ಮುನ್ನ ನಮಗೆ ಅಗತ್ಯವಾಗಿ ತಿಳಿದಿರಬೇಕಾದ ಮಾಹಿತಿಗಳಿಲ್ಲಿವೆ.......

►ಆ್ಯಂಟಿಬಯಾಟಿಕ್‌ಗಳು ಎಲ್ಲವನ್ನೂ ಗುಣಪಡಿಸುವುದಿಲ್ಲ

 ಆ್ಯಂಟಿಬಯಾಟಿಕ್‌ಗಳು ಪ್ರತಿಯೊಂದೂ ಕಾಯಿಲೆಯನ್ನು ಗುಣಪಡಿಸುವುದಿಲ್ಲ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ. ಶರೀರದಲ್ಲಿ ಬ್ಯಾಕ್ಟೀರಿಯಾಗಳಿಂದ ಸೋಂಕುಗಳುಂಟಾದಾಗ ಇವು ಕೆಲಸಕ್ಕೆ ಬರುತ್ತವೆ. ವೈದ್ಯರು ವೈರಲ್ ಸೋಂಕುಗಳಿಗೆ ಆ್ಯಂಟಿಬಯಾಟಿಕ್‌ಗಳನ್ನು ಶಿಫಾರಸು ಮಾಡುವುದಿಲ್ಲ.

►ಆ್ಯಂಟಿಬಯಾಟಿಕ್ ನಿರೋಧಕ ಬ್ಯಾಕ್ಟೀರಿಯಾ

 ಆ್ಯಂಟಿಬಯಾಟಿಕ್‌ಗಳನ್ನು ಪದೇ ಪದೇ ಸೇವಿಸುತ್ತಿದ್ದರೆ ಶರೀರದಲ್ಲಿ ಆ್ಯಂಟಿಬಯಾಟಿಕ್ ನಿರೋಧಕ ಬ್ಯಾಕ್ಟೀರಿಯಾ ಸೃಷ್ಟಿಯಾಗುವ ಸಾಧ್ಯತೆಯಿರುತ್ತದೆ. ಆ್ಯಂಟಿಬಯಾಟಿಕ್‌ಗಳಿಗೆ ಈ ಬ್ಯಾಕ್ಟೀರಿಯಾಗಳು ಬಗ್ಗುವುದಿಲ್ಲವಾದ್ದರಿಂಂದ ಚಿಕಿತ್ಸೆ ಕಠಿಣವಾಗುತ್ತದೆ ಮತ್ತು ಇವು ವ್ಯಕ್ತಿಯ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿ ಹಾನಿಯನ್ನುಂಟು ಮಾಡಬಹುದು.

►ಒಳ್ಳೆಯ ಬ್ಯಾಕ್ಟೀರಿಯಾಗಳನ್ನು ನಾಶಗೊಳಿಸುತ್ತವೆ

 ಆ್ಯಂಟಿಬಯಾಟಿಕ್‌ಗಳಿಗೆ ಆಯ್ಕೆ ಸಾಮರ್ಥ್ಯವಿಲ್ಲ,ಅಂದರೆ ಅವು ಕೆಟ್ಟ ಬ್ಯಾಕ್ಟೀರಿಯಾಗಳ ಜೊತೆಗೆ ಒಳ್ಳೆಯ ಬ್ಯಾಕ್ಟೀರಿಯಾಗಳನ್ನೂ ಕೊಲ್ಲುತ್ತವೆ. ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಗೊಳಿಸುವ ಉದ್ದೇಶದಿಂದ ಆ್ಯಂಟಿಬಯಾಟಿಕ್‌ಗಳನ್ನು ಸೇವಿಸಲಾಗುತ್ತದೆಯಾದರೂ ಕರುಳುಗಳಲ್ಲಿನ ಒಳ್ಳೆಯ ಬ್ಯಾಕ್ಟೀರಿಯಾಗಳ ನಾಶವು ವ್ಯಕ್ತಿಯ ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ.

►ನಿರೋಧಕ ಶಕ್ತಿ ಕುಂಠಿತ

  ಅಚ್ಚರಿಯ ವಿಷಯವೆಂದರೆ ಆ್ಯಂಟಿಬಯಾಟಿಕ್‌ಗಳ ಅತಿಯಾದ ಸೇವನೆಯು ಶರೀರದ ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವುದರಿಂದ ನಾವು ಸೋಂಕುಗಳಿಗೆ ಸುಲಭವಾಗಿ ತುತ್ತಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆ್ಯಂಟಿಬಯಾಟಿಕ್‌ಗಳು ನಿರೋಧಕ ಶಕ್ತಿಯ ಕಾರ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಜೊತೆಗೆ ಕರುಳುಗಳಲ್ಲಿಯ ಒಳ್ಳೆಯ ಬ್ಯಾಕ್ಟೆರಿಯಾಗಳನ್ನು ಕೊಲ್ಲುವ ಮೂಲಕ ವಿಷಮಚಕ್ರವೊಂದನ್ನು ಸೃಷ್ಟಿಸುತ್ತವೆ. ಅಂದರೆ ಹೆಚ್ಚೆಚ್ಚು ಆ್ಯಂಟಿಬಯಾಟಿಕ್‌ಗಳ ಸೇವನೆಯಿಂದ ನಿರೋಧಕ ಶಕ್ತಿಯು ಹೆಚ್ಚೆಚ್ಚು ದುರ್ಬಲಗೊಳ್ಳುತ್ತದೆ ಮತ್ತು ಅವುಗಳನ್ನು ಹೆಚ್ಚೆಚ್ಚು ಸೇವಿಸುವ ಅಗತ್ಯವುಂಟಾಗುತ್ತದೆ.

►ಅನಾರೋಗ್ಯದ ಕಾರಣವನ್ನು ನಿವಾರಿಸುವುದಿಲ್ಲ

ಆ್ಯಂಟಿಬಯಾಟಿಕ್‌ಗಳ ಸೇವನೆಯು ಬ್ಯಾಕ್ಟೀರಿಯಾ ಸೋಂಕುಗಳನ್ನು ಗುಣಪಡಿಸುತ್ತದೆಯಾದರೂ,ಅನಾರೋಗ್ಯದ ಮೂಲಕಾರಣವನ್ನು ನಿವಾರಿಸುವುದಿಲ್ಲ. ಖನಿಜಗಳು ಮತ್ತು ವಿಟಾಮಿನ್‌ಗಳ ಕೊರತೆ ಅನಾರೋಗ್ಯಕ್ಕೆ ಪ್ರಮುಖ ಕಾರಣಗಳಲ್ಲೊಂದಾಗಿದೆ ಮತ್ತು ಇಂತಹ ಸ್ಥಿತಿಯಲ್ಲಿ ಆ್ಯಂಟಿಬಯಾಟಿಕ್‌ಗಳು ಕೆಲಸಕ್ಕೆ ಬರುವುದಿಲ್ಲ.

►ಅಲರ್ಜಿಕ್ ಪ್ರತಿಪರಿಣಾಮಗಳು

ಆ್ಯಂಟಿಬಯಾಟಿಕ್‌ಗಳು ಹೆಚ್ಚು ಸಾಮಾನ್ಯವಾಗಿ ಬಳಕೆಯಾಗುವ ಔಷಧಿಗಳಾಗಿರುವುದರಿಂದ ಅವುಗಳು ಅತ್ಯಂತ ಸುರಕ್ಷಿತ ಎಂದು ಕಂಡರೂ ಅವು ಶರೀರದಲ್ಲಿ ಅಲರ್ಜಿಯನ್ನುಂಟು ಮಾಡುವ ಪ್ರತಿಪರಿಣಾಮಗಳಿಗೆ ಕಾರಣವಾಗುವ ಹೆಚ್ಚಿನ ಸಾಧ್ಯತೆಯಿರುತ್ತದೆ. ವ್ಯಕ್ತಿಯೋರ್ವ ಯಾವುದೇ ಆ್ಯಂಟಿಬಯಾಟಿಕ್‌ಗೆ ಅಲರ್ಜಿಯನ್ನು ಹೊಂದಿರಬಹುದು ಮತ್ತು ಅಲರ್ಜಿಕ್ ಪ್ರತಿಪರಿಣಾಮಗಳು ಸೌಮ್ಯದಿಂದ ತೀವ್ರ ಸ್ವರೂಪದ್ದಾಗಿರಬಹುದು.

►ಗಂಭೀರ ಬ್ಯಾಕ್ಟೀರಿಯಾ ಸೋಂಕುಗಳನ್ನು ತಡೆಯಬಲ್ಲವು

ಆ್ಯಂಟಿಬಯಾಟಿಕ್‌ಗಳು ನಿರೋಧಕ ವ್ಯವಸ್ಥೆಯ ಸಾಮಾನ್ಯ ಕಾರ್ಯ ನಿರ್ವಹಣೆಗೆ ವ್ಯತ್ಯಯವುಂಟು ಮಾಡಬಲ್ಲವಾದರೂ ಬ್ಯಾಕ್ಟೀರಿಯಾ ಸೋಂಕುಗಳುಂಟು ಮಾಡುವ ಗಂಭೀರ ಕಾಯಿಲೆಗಳನ್ನು ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X